• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಯಾಂಡಲ್ ವುಡ್ ಗೆ “ಮದ್ದಾನೆ” ಆಗಮನ ಸತೀಶ್ ಕುಮಾರ್ ಎಸ್ ನಿರ್ದೇಶನದ :ಈ ಚಿತ್ರಕ್ಕೆ ನಿಹಾಲ್ ರಾಜ್ ನಾಯಕ

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಪ್ಯಾಂಥರ್ಸ್ ಕ್ರಿಯೇಟಿವ್ ಸಿನಿಮಾಸ್ ಲಾಂಛನದಲ್ಲಿ ರಂಜನ ಎಂ ಕುಮಾವತ್ ನಿರ್ಮಿಸುತ್ತಿರುವ ಹಾಗೂ ಸತೀಶ್ ಕುಮಾರ್ ಎಸ್ ಚೊಚ್ಚಲ ನಿರ್ದೇಶನದ “ಮದ್ದಾನೆ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು.

ADVERTISEMENT

ನಿರ್ಮಾಪಕರಾದ ಕೆ.ಮಂಜು , ರಮೇಶ್ ಯಾದವ್ ಹಾಗೂ ಕಡ್ಡಿಪುಡಿ ಚಂದ್ರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಿಹಾಲ್ ರಾಜ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ “ಮದ್ದಾನೆ” ಚಿತ್ರದ ಬಗ್ಗೆ ಚಿತ್ರತಂಡದವರು ಮಾತನಾಡಿದರು.

“ಮದ್ದಾನೆ” ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಸತೀಶ್ ಕುಮಾರ್, ಇದೊಂದು ಹಳ್ಳಿ ಹಾಗೂ ಕಾಡಿನ ನಡುವೆ ನಡೆಯುವ ಕಥೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿಕ್ಕಮಗಳೂರಿನಲ್ಲೇ ನಡೆಯುತ್ತದೆ. ನಿಹಾಲ್ ರಾಜ್ ನಾಯಕನಾಗಿ ನಟಿಸುತ್ತಿದ್ದಾರೆ. ನನ್ನ ಶ್ರೀಮತಿ ರಂಜನ ಎಂ ಕುಮಾವತ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ವಿನೋದ್ ಭಾರತಿ ಛಾಯಾಗ್ರಹಣ, ಸ್ವಾಮಿನಾಥನ್ ಸಂಗೀತ ನಿರ್ದೇಶನ, ಪುನೀತ್ ಆರ್ಯ ಸಾಹಿತ್ಯ ಹಾಗೂ ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಅರವಿಂದ್ ರಾವ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಮೂಲತಃ ಮಾರ್ಷಲ್ ಆರ್ಟ್ಸ್ ಕಲಾವಿದನಾಗಿರುವ ನಾನು, ಈವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದೇನೆ. ಬೆಂಗಳೂರಿನ ಕೆಲವು ಕಡೆ ಮಾರ್ಷಲ್ ಆರ್ಟ್ಸ್ ತರಭೇತಿ ಶಾಲೆಗಳನ್ನು ನಡೆಸುತ್ತಿದ್ದೇನೆ.

ಮೂವತ್ತು ವರ್ಷಗಳಿಂದ ಕನ್ನಡ ಚಿತ್ರಗಳನ್ನೇ ನೋಡಿಕೊಂಡು ಬರುತ್ತಿರುವ ಪ್ರೇಕ್ಷಕ ನಾನು. ಸಿನಿಮಾ ನಿರ್ದೇಶನ ನನ್ನ ಕನಸು. ನಿರ್ದೇಶನದ ಬಗ್ಗೆಯೂ ಓದಿಕೊಂಡು ಬಂದು ಈಗ ಮೊದಲ‌ ನಿರ್ದೇಶನದ ಚಿತ್ರ ಆರಂಭಿಸಿದ್ದೇನೆ ಎಂದರು.ನಾನು ಮೂಲತಃ ರಂಗಭೂಮಿ ಕಲಾವಿದ. “ರಾಣಾ” ಹಾಗೂ “ವಿಷ್ಣುಪ್ರಿಯ” ಚಿತ್ರಗಳಲ್ಲಿ ನಟಿಸಿದ್ದೇನೆ. ಕೆ.ಮಂಜು ಅವರ ಸಹಕಾರ ಮೊದಲಿನಿಂದಲೂ ಇದೆ. ಇಂದು ನಾನು ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೂ ಬಂದು ಅವರು ಹಾರೈಸಿದ್ದು ಸಂತೋಷವಾಗಿದೆ.

ಅವರಿಗೆ ಹಾಗೂ ಅವಕಾಶ ನೀಡಿದ ನಿರ್ದೇಶಕ, ನಿರ್ಮಾಪಕರಿಗೆ ಧನ್ಯವಾದ ಎಂದರು ನಾಯಕ ನಿಹಾಲ್ ರಾಜ್. ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ರಂಜನ ಎಂ ಕುಮಾವತ್. ಸಂಗೀತ ನಿರ್ದೇಶಕ ಸ್ವಾಮಿನಾಥನ್, ಛಾಯಾಗ್ರಾಹಕ ವಿನೋದ್ ಭಾರತಿ, ಗೀತರಚನೆಕಾರ ಪುನೀತ್ ಆರ್ಯ, ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಹಾಗೂ ನಟ ಅರವಿಂದ್ ರಾವ್ ತಮ್ಮ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninews
Previous Post

ಹೋಮ್ ಮಿನಿಸ್ಟರ್ ಪೋಲೀಸ್ ಅಧಿಕಾರಿ ಮೊರೆ ಹೋದ ವಿಜಯ್ ಕುಮಾರ್

Next Post

ವಿಜಯಪುರ: ಅಪಘಾತವಲ್ಲ, ಹಳೇ ದ್ವೇಷಕ್ಕಾಗಿಯೇ ವಕೀಲ ರವಿ ಕೊಲೆ- ಆರೋಪಿಗಳ ಬಂಧನ

Related Posts

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!
Top Story

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!

by Shivakumar
November 10, 2026
0

ನಾವು ಪ್ರತಿದಿನ ಉಸಿರಾಡುವ ಗಾಳಿ ಶುದ್ಧವಾಗಿದೆಯೇ ಅಥವಾ ಮಾಲಿನ್ಯದಿಂದ ಕೂಡಿದೆಯೇ ಎಂಬುದನ್ನು ತಿಳಿದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಮಕ್ಕಳನ್ನು ಶಾಲೆಗೆ ಕಳುಹಿಸುವಾಗ, ಕಚೇರಿಗೆ ತೆರಳುವಾಗ ಅಥವಾ...

Read moreDetails
Why was ₹2,000 in drought relief credited to farmers' accounts? Here is the clarification from DCM Parameshwara

ರೈತರ ಖಾತೆಗೆ ₹2,000 ಬರ ಪರಿಹಾರ ಬಂದಿದ್ದೇಕೆ? ಉಳಿದ ಹಣ ಯಾವಾಗ? ಇಲ್ಲಿದೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ!

November 10, 2026
Why do you feel nauseous when looking at your phone while traveling in a car? Here is the scientific reason

ಕಾರಿನಲ್ಲಿ ಪ್ರಯಾಣಿಸುವಾಗ ಫೋನ್ ನೋಡಿದರೆ ವಾಕರಿಕೆ ಬರುವುದು ಏಕೆ? ಇಲ್ಲಿದೆ ವೈಜ್ಞಾನಿಕ ಕಾರಣ

November 10, 2026
War with Iran has ended: Donald Trump's significant statement

ಇರಾನ್ ಜೊತೆಗಿನ ಯುದ್ಧ ಅಂತ್ಯಗೊಂಡಿದೆ : ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

November 10, 2026
Thick smoke blankets India and Pakistan: Scene captured by NASA satellite

ಭಾರತ-ಪಾಕಿಸ್ತಾನವನ್ನು ಆವರಿಸಿರುವ ದಟ್ಟವಾದ ಹೊಗೆ: ನಾಸಾ ಉಪಗ್ರಹದಲ್ಲಿ ದೃಶ್ಯ ಸೆರೆ

November 10, 2026
Next Post

ವಿಜಯಪುರ: ಅಪಘಾತವಲ್ಲ, ಹಳೇ ದ್ವೇಷಕ್ಕಾಗಿಯೇ ವಕೀಲ ರವಿ ಕೊಲೆ- ಆರೋಪಿಗಳ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada