ಭಾರತದಾದ್ಯಂತ ಇಂದು 78 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು (78th independene day) ವಿಜೃಂಭಣೆಯಿಂದ ಆಚರಿಸಲಾಗಿದೆ. ಮನೆ ಮನೆಯಲ್ಲೂ ತರಿಂಗ ಹಾರಿಸುವ ಮೂಲಕ ಪ್ರತಿಯೊಬ್ಬರೂ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿದ್ದಾರೆ.
ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (PM narendrs modi) ಕೆಂಪುಕೋಟೆಯಲ್ಲಿ (red fort) 11ನೇ ಬಾರಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ ಮೂರನೇ ಅವಧಿಗೆ ಪ್ರಧಾನಿ ಹುದ್ದೆಯಲ್ಲಿ ಮುಂದುವರೆದಿರುವ ನಮೋ ಕಳೆದ ಬಾರಿ 10ನೇ ಸಲ ಧ್ವಜಾರೋಹಣ ಮಾಡುವ ಮೂಲಕ ಮನಮೋಹನ್ ಸಿಂಗ್ (Manmohan singh)ಅವರ ದಾಖಲೆ ಸರಿಗಟ್ಟಿದ್ದರು.
ಈ ಬಾರಿ 11ನೇ ಬಾರಿಗೆ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ಮಾಡುವ ಮೂಲಕ ನೆಹರು (nehru) ಹಾಗೂ ಇಂದಿರ ಗಾಂಧಿ (Indira gandhi) ನಂತರದಲ್ಲಿ 11 ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿಯಾಗಿ ನಮೋ ಹೊರಹೊಮ್ಮಿದ್ದಾರೆ. ಇದೇ ಸಂದರ್ಭದಲ್ಲಿ ದೇಶದ ಜನರನ್ನ ಉದ್ದೇಶಿಸಿ ಮಾತನಾಡಿದ ನಮೋ ಬಾರತದ ಅಭಿವೃದ್ಧಿಯ ವೇಗದ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.