• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ:ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ:ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ
Share on WhatsAppShare on FacebookShare on Telegram

ಬೆಂಗಳೂರು:“ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ. ನಿಮ್ಮ ಯಾವ ಹುನ್ನಾರಗಳಿಗೂ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುಡುಗಿದರು.

ADVERTISEMENT

ಮುಖ್ಯಮಂತ್ರಿಗಳ ವಿರುದ್ಧದ ವಿಚಾರಣೆಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಶಿವಕುಮಾರ್ ಅವರು ಭಾಷಣದ ಉದ್ದಕ್ಕೂ ಪ್ರತಿಪಕ್ಷಗಳ ಹುನ್ನಾರ ಹಾಗೂ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅವರ ಮೇಲೂ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿ ಕಳಂಕಿತರ ವಿರುದ್ದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರೂ ಏಕೆ ಪುರಸ್ಕರಿಸಿಲ್ಲ ರಾಜ್ಯಪಾಲರೇ?” ಎಂದು ಪ್ರಶ್ನಿಸಿದರು.

“ವಿರೋಧ ಪಕ್ಷದವರು ಹತ್ತು ಜನ್ಮ ಎತ್ತಿದರೂ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ರಾಜಿನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮಂತ್ರದಿಂದ ಮಾವಿನಕಾಯಿ ಉದುರಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಪರವಾಗಿ ಡಿ.ಕೆ.ಶಿವಕುಮಾರ್ ಒಬ್ಬನೇ ಅಲ್ಲ ಇಂಡಿಯಾ ಒಕ್ಕೂಟ ಹಾಗೂ ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕಟ್ಟ ಕಡೆಯ ಮತದಾರರು ಆಶೀರ್ವಾದ ಮಾಡಿ ಬೆನ್ನಲುಬಾಗಿ ನಿಂತಿದ್ದಾರೆ” ಎಂದರು.

ರಾಜ್ಯಪಾಲರೇ ಬಿಜೆಪಿಯವರು ನಿಮ್ಮನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ:

“ಸರ್ಕಾರ ನೀಡಿರುವ ಸಲಹೆಗಳನ್ನೂ ಓದದ ರಾಜ್ಯಪಾಲರು ಟಿ.ಜೆ.ಅಬ್ರಹಾಂ ಎನ್ನುವ ವ್ಯಕ್ತಿ ಬೆಳಗ್ಗೆ ಅರ್ಜಿ ಕೊಟ್ಟರೆ, ಸಾಯಂಕಾಲದ ವೇಳೆಗೆ ಒಂದೇ ದಿನದಲ್ಲಿ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಬಿಜೆಪಿಯವರು ನಿಮ್ಮನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ರಾಜ್ಯಪಾಲರೇ ನಿಮ್ಮದು ಸಾಂವಿಧಾನಿಕ ಹುದ್ದೆ, ನಿಮ್ಮ ಮೇಲೆ ಈಗಲೂ ಗೌರವವಿದೆ. ನಿಮಗೆ ಸಾಕಷ್ಟು ಸಮಯವಿದ್ದು ವಿಚಾರಣೆಗೆ ನೀಡಿರುವ ಅನುಮತಿ ವಾಪಸ್ ಪಡೆಯಿರಿ” ಎಂದು ಆಗ್ರಹಿಸಿದರು.

ರಾಜ್ಯಪಾಲರ ಹುದ್ದೆ ಸೃಷ್ಟಿ ಮಾಡಿದ್ದೇ ಕಾಂಗ್ರೆಸ್:“ರಾಜ್ಯಪಾಲರು ಸಿಎಂ ಅವರ ವಿರುದ್ಧ ನೀಡಿರುವ ಅನುಮತಿ ವಿರುದ್ದ ನ್ಯಾಯಲಯದಲ್ಲಿ ನಮ್ಮ ಪರವಾಗಿ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇವೆ. ಹಿಂಬಾಗಿಲ ಮೂಲಕ ಬಿಜೆಪಿ, ಜೆಡಿಎಸ್ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿವೆ. ಸಂವಿಧಾನದ ಮೂಲಕ ರಾಜ್ಯಪಾಲರ ಕುರ್ಚಿಯನ್ನು ಸೃಷ್ಟಿ ಮಾಡಿದ್ದೇ ಕಾಂಗ್ರೆಸ್ ಸರ್ಕಾರ. ನಮ್ಮ ಪಕ್ಷ ಕೊಟ್ಟಿರುವ ಸಂವಿಧಾನದ ಹಕ್ಕನ್ನು ದುರುಪಯೋಗ ಪಡಿಸಿಕೊಂಡು ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ಅವಕಾಶ ನೀಡಿರುವುದು ಹಾಸ್ಯಾಸ್ಪದ” ಎಂದರು.

“ಪ್ರತಿಪಕ್ಷಗಳಿಗೆ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳ ಮೇಲೆ ಅಸೂಯೆ. ಬಡವರ ಪರವಾಗಿ ಕೆಲಸ ಮಾಡುತ್ತಿರುವ ಹಿಂದುಳಿದ ವರ್ಗದ ನಾಯಕನೊಬ್ಬ ಗ್ಯಾರಂಟಿಗಳನ್ನು ನೀಡಿ ಜನರ ಹೃದಯ ಗೆದ್ದಿದ್ದಾರೆ ಎಂಬುದನ್ನು ಪ್ರತಿಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.ಅಧಿಕಾರ ಸಿಗಲಿಲ್ಲ ಎಂದು ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.“ಪ್ರತಿಪಕ್ಷದವರಿಗೆ ಹೊಟ್ಟೆಯುರಿ ಬಂದರೆ ನಮ್ಮ ಬಳಿ ಇರುವ ವೈದ್ಯರಿಂದ ಔಷಧಿ ಕಳಿಸಿಕೊಡೋಣ.ಹೊಟ್ಟೆಯುರಿಗೆ ಔಷಧವಿದೆ ಆದರೆ ಅಸೂಯೆಗೆ ಮದ್ದಿಲ್ಲ. ನಾವು ಅವರ ಮಾತುಗಳಿಗೆ ತಲೆಕೆಡಿಸಿಕೊಳ್ಳುವ ಪ್ರಮೇಯವಿಲ್ಲ. ಏಕೆಂದರೆ ವಿಚಾರಣೆಗೆ ನೀಡಿರುವ ಅನುಮತಿಯನ್ನು ನ್ಯಾಯಲಯವು ಧಿಕ್ಕರಿಸಿ ನ್ಯಾಯ ನೀಡುವ ನಂಬಿಕೆಯಿದೆ” ಎಂದರು.

ರಾಜ್ಯಪಾಲರೇ ಒಳಸಂಚು ಏಕೆ?:“ಜನ ಬಹುಮತ ನೀಡಿರುವ ಕಾರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಪ್ರಮಾಣ ವಚನ ಭೋದನೆ ಮಾಡಿದರು. ಏಕೆ ಈಗ ಒಳಸಂಚು ಮಾಡುತ್ತಿದ್ದೀರಿ. ನಿಮಗೆ ಸಂವಿಧಾನವನ್ನು ಕಾಪಾಡುವ ಜವಾಬ್ದಾರಿ ನೀಡಲಾಗಿದೆ. ಆದರೆ ನೀವು ಏಕೆ ಇದನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದೀರಿ? ಸಂವಿಧಾನವನ್ನು ಕಾಪಾಡಬೇಕೆ ಹೊರತು, ಆ ಕುರ್ಚಿಗೆ ಕಳಂಕ ತರಬಾರದು ಎಂದು ನಿಮಗೆ ಸಲಹೆಯನ್ನು ನೀಡುತ್ತಿದ್ದೇವೆ” ಎಂದು ಹೇಳಿದರು.

“ನಮ್ಮ ಮುಖ್ಯಮಂತ್ರಿಗಳ ಮೇಲೆ ಅಗಾಧವಾದ ಆರೋಪಗಳು ಬಂದಿವೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಆ ಆರೋಪಗಳ ಮೇಲೆ ನೀವು ತನಿಖೆ ನಡೆಸಿದ್ದೀರಾ? ಇದರ ಬಗ್ಗೆ ಯಾವುದಾದರೂ ತನಿಖಾ ಸಂಸ್ಥೆಗಳು ವರದಿ ನೀಡಿದ್ದಾವೆಯೇ? ಅಧಿಕಾರಿಗಳು, ಲೋಕಾಯುಕ್ತರು ಇಬ್ಬರಲ್ಲಿ ಯಾರು ನಿಮಗೆ ವರದಿ ನೀಡಿದ್ದಾರೆ” ಎಂದು ಖಾರವಾಗಿ ಪ್ರಶ್ನಿಸಿದರು.

“ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕು ಎಂದು ಬ್ರಿಟಿಷರು 200 ವರ್ಷಗಳ ಕಾಲ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಈ ದೇಶದ ಜನರಿಗೆ ಸಂವಿಧಾನ, ಪ್ರಜಾಪ್ರಭುತ್ವ ಸೇರಿದಂತೆ ಎಲ್ಲಾ ಹಕ್ಕುಗಳನ್ನು ನೀಡಿದ್ದು ಕಾಂಗ್ರೆಸ್. ನಮ್ಮ ಸರ್ಕಾರದ ಯೋಜನೆಗಳನ್ನು ನೋಡಿ ಬಿಜೆಪಿಯವರು ಅನೇಕ ಕಡೆ ಕರ್ನಾಟಕ ಮಾಡೆಲ್ ಎಂದು ಜಾರಿಗೆ ತರುತ್ತಿದ್ದಾರೆ. ಇದು ಆ ಪಕ್ಷಕ್ಕೆ ಹೊಟ್ಟೆಯುರಿಯಾಗಿದೆ” ಎಂದರು.“ನನ್ನ ಅಧ್ಯಕ್ಷತೆ ಹಾಗೂ ಸಿದ್ದರಾಮಯ್ಯ ಅವರ ಮುಖಂಡತ್ವಕ್ಕೆ 136 ಸ್ಥಾನವನ್ನು ನೀಡಿ, ಉತ್ತಮ ಆಡಳಿತ ನೀಡಿ ಎಂದು ಜನ ಅವಕಾಶಕೊಟ್ಟಿದ್ದಾರೆ.ಸರ್ಕಾರವನ್ನು ಅಲುಗಾಡಿಸುವವರ ವಿರುದ್ಧದ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಎಲ್ಲರ ಜೊತೆ ಚರ್ಚೆ ಮಾಡಿ ಹೋರಾಟ ಮುಂದುವರೆಸುತ್ತೇವೆ. ಸಿದ್ದರಾಮಯ್ಯ ಅವರ ಜೊತೆ ನಿಂತು ಅವರ ಪರವಾಗಿ ಇರುತ್ತೇವೆ” ಎಂದರು.

ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಸಾಧ್ಯವಿಲ್ಲ:

“ಬಿಜೆಪಿಯ ಹುನ್ನಾರಗಳನ್ನು ಜನರಿಗೆ ತಿಳಿಸುವ ಕೆಲಸ ಮುಂದಿನ ದಿನಗಳಲ್ಲಿ ಮಾಡಲಾಗುವುದು. ಬಿಜೆಪಿಯವರು ಅಧಿಕಾರಕ್ಕೆ ಏಕೆ ಬರಲಿಲ್ಲ.ನೀವು ಈ ಹಿಂದೆ 17 ಜನರನ್ನು ಕರೆದುಕೊಂಡು ಹೋಗಿ ಆಪರೇಷನ್ ಕಮಲ ಮಾಡಿ ಜನತಾದಳ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿದರು. ಈ ಬಾರಿಯೂ ಸ್ವಲ್ಪ ಪ್ರಯತ್ನ ಪಟ್ಟರು.ಆದರೆ ಅವರ ಆಟ ನಡೆಯಲಿಲ್ಲ. ಮುಂದಕ್ಕೂ ನಡೆಯುವುದಿಲ್ಲ. ಕಾಂಗ್ರೆಸ್ ಪಕ್ಷದ ಒಬ್ಬನೇ ಒಬ್ಬ ಶಾಸಕನನ್ನು ಖರೀದಿ ಮಾಡಲು ಸಾಧ್ಯವಿಲ್ಲ” ಎಂದು ಸವಾಲು ಹಾಕಿದರು.“ಮುಡಾ ಅಕ್ರಮದಲ್ಲಿ ಸಿದ್ದರಾಮಯ್ಯ ಅವರು ಎಲ್ಲಾದರೂ ಪ್ರಭಾವ ಬೀರಿದ್ದಾರೆಯೇ. ಸಿದ್ದರಾಮಯ್ಯ ಅವರ ಪತ್ನಿಗೆ ಅವರ ಅಣ್ಣ ಅರಿಶಿನ, ಕುಂಕುಮಕ್ಕೆ ಎಂದು ಜಮೀನು ದಾನ ಕೊಟ್ಟಿದ್ದರು. ಇದನ್ನು ಮುಡಾ ಆಕ್ರಮಿಸಿಕೊಂಡ ಕಾರಣಕ್ಕೆ ಪರಿಹಾರ ನೀಡಿ ಎಂದು ಮನವಿ ಮಾಡಿದ್ದರು.

ಸಿಎಂ ಅವರ ಪತ್ನಿ ಇಂತಲ್ಲೇ ಸೈಟ್ ಬೇಕು ಎಂದು ಎಲ್ಲಿಯೂ ಮನವಿ ಮಾಡಿಲ್ಲ. ಸಿದ್ದರಾಮಯ್ಯ ಅವರು ಎಲ್ಲಿಯೂ ಪ್ರಭಾವ ಬೀರಿಲ್ಲ. ಇದು ನಡೆದಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಈಗ ಅವರೇ ಆರೋಪ ಮಾಡುತ್ತಿರುವುದು ಎಷ್ಟು ಸರಿ?” ಎಂದು ಹೇಳಿದರು.

Tags: DCM DK ShivakumarEnergy Minister KJ GeorgeEnvironment Minister Eshwar KhandreMinister Dinesh GunduraoMLA Ajay shingh
Previous Post

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ:ಡಿಕೆಶಿ..!

Next Post

ಮಗನ ಮೇಲೆ ಮಚ್ಚಿನಿಂದ ದಾಳಿ ಮಾಡಿದ ರೌಡಿಗಳನ್ನು ಕಲ್ಲಿನಿಂದ ಓಡಿಸಿದ ತಾಯಿ, ವಿಡಿಯೋ ಸೆರೆ!

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post

ಮಗನ ಮೇಲೆ ಮಚ್ಚಿನಿಂದ ದಾಳಿ ಮಾಡಿದ ರೌಡಿಗಳನ್ನು ಕಲ್ಲಿನಿಂದ ಓಡಿಸಿದ ತಾಯಿ, ವಿಡಿಯೋ ಸೆರೆ!

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada