
ಗೌತಮ್ ಬುದ್ಧ ನಗರ (ಉತ್ತರ ಪ್ರದೇಶ):ಇಲ್ಲಿನ ಡಂಕೌರ್ ಪ್ರದೇಶದ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ (ಇಪಿಇ)ಯಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್‌ನ ಟೈರ್ ಸ್ಪೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 24 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಅಪಘಾತ ಸಂಭವಿಸಿದಾಗ ಟ್ರಕ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದರು. “ದಂಕೌರ್ ಅಡಿಯಲ್ಲಿ ಪೂರ್ವ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಟೈರ್ ಸ್ಪೋಟಗೊಂಡು ಈ ದುರ್ಘಟನೆ ಸಂಭವಿಸಿದ್ದು 24 ಜನರು ಗಾಯಗೊಂಡಿದ್ದಾರೆ , ಅವರಲ್ಲಿ ಮೂವರ ಸ್ತಿತಿ ಚಿಂತಾಜನಕವಾಗಿದೆ ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನೆಲ್ಲಾ ನೋಯ್ಡಾದ ಸರ್ಕಾರೀ ಆಸ್ಪತ್ರೆ ಮತ್ತು ದೆಹಲಿಯ ಏಮ್ಸ್ ಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದರು.
ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಹಾನಿಗೊಳಗಾದ ವಾಹನದ ಟೈರ್ ಸ್ಪೋಟಗೊಂಡ ಪರಿಣಾಮವಾಗಿ ಲಾರಿಯು ತಡೆಗೋಡೆಗೆ ಗುದ್ದಿ ಪಲ್ಟಿಯಾಗಿ ಬಿದ್ದಿತು . ವಾಹನವನ್ನು ಸ್ಥಳದಿಂದ ತೆಗೆದು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.