• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟೈಗರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಸಂತೋಷ್‍ ನಾರಾಯಣನ್ ಸಂಗೀತ

ಪ್ರತಿಧ್ವನಿ by ಪ್ರತಿಧ್ವನಿ
August 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು :ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ “ಬಲರಾಮನ ದಿನಗಳು”. ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು.ಈಗ ಈ ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ‌.

ADVERTISEMENT

ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು “ಬಲರಾಮನ ದಿನಗಳು” ಚಿತ್ರತಂಡ ಅದ್ದೂರಿಯಾಗಿ ಕನ್ನಡಕ್ಕೆ ಬರಮಾಡಿಕೊಂಡರು. ನಂತರ ಸಂತೋಷ್ ನಾರಾಯಣನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಪ.ರಂಜಿತ್ ಅವರ “ಅಟ್ಟಕತ್ತಿ” ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾದ ಇವರು, “ಕಾಲ”, ” ಕಬಾಲಿ”, “ಭೈರವ”, ” ದಸರಾ” ಹಾಗೂ ಇತ್ತೀಚಿಗೆ ತೆರೆಕಂಡ “ಕಲ್ಕಿ” ಸಿನಿಮಾವರೆಗೂ 50 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಹಲವು ಚಿತ್ರಗಳಲ್ಲಿ ಹಾಡಿದ್ದಾರೆ ಕೂಡ‌.

“ನನ್ನ ತಾಯಿಗೆ ಕನ್ನಡ ಬರುತ್ತದೆ. ಅವರು ನನಗೂ ಸ್ವಲ್ಪ ಕನ್ನಡ ಹೇಳಿಕೊಟ್ಟಿದ್ದಾರೆ. ಬೆಂಗಳೂರಿಗೆ ಆಗಾಗ ಬರುತ್ತಿರುತ್ತೇನೆ. “ಬಲರಾಮನ ದಿನಗಳು” ನನ್ನ 51ನೇ ಚಿತ್ರ ಹಾಗೂ ನಾನು ಸಂಗೀತ ನೀಡುತ್ತಿರುವ ಕನ್ನಡದ ಮೊದಲ ಚಿತ್ರ. ಪದ್ಮಾವತಿ ಫಿಲಂಸ್, ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ.

ಈ ಸಂದರ್ಭದಲ್ಲಿ ಗುರುಗಳಾದ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ರಘು ದೀಕ್ಷಿತ್ ಅವರ “ನಿನ್ನ ಪೂಜೆಗೆ ಬಂದೆ ಮಾದೇಶ್ವರ” ಸೇರಿದಂತೆ ಕೆಲವು ಹಾಡುಗಳಿಗೆ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದ್ದೇನೆ. ಅಜನೀಶ್ ಲೋಕನಾಥ್ ಹಾಗೂ ರವಿ ಬಸ್ರೂರ್ ಅವರ ಸಂಗಿತ ಇಷ್ಟ ಎಂದು ಹೇಳಿದ ಸಂತೋಷ್ ನಾರಾಯಣನ್, ಈ ಚಿತ್ರದಲ್ಲೂ ಒಳ್ಳೆಯ ಹಾಡುಗಳನ್ನು ಕೊಡುವ ಪ್ರಯತ್ನ ಮಾಡುತ್ತೇನೆ ಎಂದರು.

ಅವರಿಗೆ ಚಿತ್ರಕಥೆ ರೀಡಿಂಗ್‍ ಕೊಡುತ್ತಿದ್ದಂತೆಯೇ ಒಪ್ಪಿಕೊಂಡರು. ಚಿತ್ರ ವಿಭಿನ್ನವಾಗಿದೆ, 70-80ರ ಕಾಲಘಟ್ಟದ ಚಿತ್ರವಾಗಿರುವುದರಿಂದ ಸಾಕಷ್ಟು ಪ್ರಯೋಗ ಮಾಡಬಹುದು ಎಂದು ಖುಷಿಪಟ್ಟು ಒಪ್ಪಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕನ್ನಡಕ್ಕೆ ಕರೆದುಕೊಂಡು ಬಂದಿರುವ ಹೆಮ್ಮೆ ಇದೆ. ಚಿತ್ರದ ಕುರಿತು ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು ನಾಯಕ ಟೈಗರ್.

ಇದು 90 ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಕಾಲ್ಪನಿಕ ಕಥೆ. ಟೈಗರ್ ಅವರ ಚಿತ್ರವನ್ನು ನಿರ್ದೇಶಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ. ನಿರ್ಮಾಪಕರಾದ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಗೆ ವಂದನೆಗಳು. ಸಂತೋಷ್ ನಾರಾಯಣ್ ಅವರ ಸಂಗೀತ ನಿರ್ದೇಶನದಲ್ಲಿ ಒಳ್ಳೆಯ ಹಾಡುಗಳು ಬರಲಿದೆ ಎಂದು ನಿರ್ದೇಶಕ ಕೆ.ಎಂ.ಚೈತನ್ಯ ತಿಳಿಸಿದರು.

ನಾನು ಚಿಕ್ಕ ವಯಸ್ಸಿನಿಂದ ಟೈಗರ್ ಅವರ ಅಭಿಮಾನಿ ಎಂದು ಮಾತನಾಡಿದ ನಿರ್ಮಾಪಕ ಶ್ರೇಯಸ್, ಇಂದು ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ನಿರ್ಮಾಣ ಮಾಡುತ್ತಿರುವುದು ಸಂತೋಷವಾಗಿದೆ. ನಮ್ಮ ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾವಿದು.

ನಮ್ಮ ಮೊದಲ ಚಿತ್ರಕ್ಕೆ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ ಹಾಗೂ ಕೆ.ಎಂ.ಚೈತನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ.ಈ ಹಿಂದೆ ನಮ್ಮ ಚಿತ್ರದ ಘೋಷಣೆ ಮಾಡಿದಾಗ ತಾವೆಲ್ಲರು ನೀಡಿದ ಪ್ರೋತ್ಸಾಹಕ್ಕೆ ಚಿರ ಋಣಿ. ನನ್ನ ಕನಸಿಗೆ ಆಸರೆಯಾದ ಅಪ್ಪ ಅಮ್ಮನಿಗೆ ಧನ್ಯವಾದ.ಮುಂದೆ ಕೂಡ ನಿಮ್ಮ ಪ್ರೋತ್ಸಾಹ ಹೀಗೆ ಇರಲಿ ಎಂದರು ನಿರ್ಮಾಪಕ ಶ್ರೇಯಸ್. ನಿರ್ಮಾಪಕಿ ಪದ್ಮಾವತಿ ಜಯರಾಂ ಹಾಗೂ ಜಯರಾಂ ಅವರು ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'FilmSanthosh Narayanan
Previous Post

ಸೆಪ್ಟಂಬರ್ 14 ಮತ್ತು 15ರಂದು ದುಬೈನಲ್ಲಿ ನಡೆಯುಲಿದೆ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ

Next Post

ಒಡಲಲ್ಲಿರುವ ಭ್ರಷ್ಟತೆಯೂ ರಾಜಕಾರಣದ ಹೊದಿಕೆಯೂ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ಒಡಲಲ್ಲಿರುವ ಭ್ರಷ್ಟತೆಯೂ ರಾಜಕಾರಣದ ಹೊದಿಕೆಯೂ

ಒಡಲಲ್ಲಿರುವ ಭ್ರಷ್ಟತೆಯೂ ರಾಜಕಾರಣದ ಹೊದಿಕೆಯೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada