• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ಷೇತ್ರದಲ್ಲೇ ಬೀಡುಬಿಟ್ಟ ಇಂಧನ ಸಚಿವ ಕೆ.ಜೆ ಜಾರ್ಜ್​.. ಜನರಿಂದ ಮೆಚ್ಚುಗೆ..

ಕೃಷ್ಣ ಮಣಿ by ಕೃಷ್ಣ ಮಣಿ
August 25, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರಿನ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ ಜಾರ್ಜ್​, ಕೆಲಸದ ಒತ್ತಡದ ನಡುವೆಯೂ ತಮ್ಮ ಸ್ವಕ್ಷೇತ್ರದ ಜನರ ಸಮಸ್ಯೆಯನ್ನು ಆಲಿಸಿದ್ದಾರೆ. ಮಳೆಯಿಂದ ಮರ ಉರುಳಿ ಬಿದ್ದ ಸ್ಥಳ ವೀಕ್ಷಣೆ ಮಾಡಿರುವ ಸಚಿವ ಕೆ.ಜೆ ಜಾರ್ಜ್​, ಗಾಯಗೊಂಡು ಆಸ್ಪತ್ರೆ ಸೇರಿರುವ ಸ್ಥಳೀಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಸಿದ್ದಾರೆ. ಜೊತೆಗೆ ಚಿಕಿತ್ಸೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ತಿಳಿಸಿದ್ದಾರೆ. ಸಚಿವರ ಕಾರ್ಯಕ್ಕೆ ಜನರು ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ADVERTISEMENT

ಸರ್ವಜ್ಞ ನಗರದಲ್ಲಿ ಶಿಕ್ಷಣ ಹಾಗು ಆರೋಗ್ಯ ಕ್ಷೇತ್ರಕ್ಕೆ ಭಾರೀ ಆದ್ಯತೆ ನೀಡಿದ್ದು, ಎಲ್ಲರಿಗೂ ಸೂಕ್ತ ಆರೋಗ್ಯ ವ್ಯವಸ್ಥೆ ಸಿಗುವಂತೆ ವ್ಯವಸ್ಥೆ ನಾಡಿದ್ದಾರೆ. ಇನ್ನು ಮಕ್ಕಳಿಗೆ ಸೂಕ್ತ ಇಂಗ್ಲಿಷ್​ ಮಾಧ್ಯಮ ಶಿಕ್ಷಣ ಸಿಗುವಂತೆ ಪಬ್ಲಿಕ್​ ಶಾಲೆಯನ್ನು ಉನ್ನತೀಕರಿಸಿದ್ದು, ಯುವ ಶಾಸಕರಿಗೆ ಮಾದರಿ ಎನ್ನುವಂತಹ ಕೆಲಸ ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಉದ್ಯಮಿಗಳಿಂದ ಸಿಎಸ್​ಆರ್​ ಫಂಡ್​​ಗಳನ್ನು ಬಳಸಿಕೊಂಡು ಕ್ಷೇತ್ರದ ಜನತೆಯ ಅನುಕೂಲಕ್ಕಾಗಿ ಶಿಕ್ಷಣ ಸಂಸ್ಥೆಗಳು ಹಾಗು ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಮಾಡಿರುವುದು ಶಾಸಕರ ಕಾರ್ಯವೈಖರಿಗೆ ಸಾಕ್ಷಿಯಾಗಿದೆ.

ಅಂಗನವಾಡಿ, ಶಾಲೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಿರುವುದು ಮಾತ್ರವಲ್ಲದೆ, ತಮ್ಮ ಕ್ಷೇತ್ರದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೇ ಡಯಾಲಿಸಿಸ್​​ ಸೆಂಟರ್​, ಮೈನರ್​ ಸರ್ಜರಿ ಸೆಂಟರ್​, ಲ್ಯಾಬೋರೇಟರಿ ಕೂಡ ಜನತೆಗೆ ಸಹಕಾರಿ ಆಗಿದೆ. ಇನ್ನು ನಿರುದ್ಯೋಗ ಯುವತಿ, ಯುವತಿಯರ ಅನುಕೂಲಕ್ಕಾಗಿ ಕೌಶಲ್ಯಾಭಿವೃದ್ಧಿ ಸಂಸ್ಥೆಯನ್ನು ಸ್ಥಾಪನೆ ಮಾಡುವ ಮೂಲಕ ಉದ್ಯೋಗ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ಜೊತೆಗೆ ಸ್ಮಾರ್ಟ್​ ಕ್ಲಾಸ್​ ಆರಂಭಿಸಿದ್ದು, ಸಾಕಷ್ಟು ಮಂದಿ ಸ್ವ ಉದ್ಯೋಗ ಆರಂಭಕ್ಕೂ ಅನುಕೂಲ ಮಾಡಿಕೊಡುವ ಮೂಲಕ ಜನನಾಯಕ ಎನ್ನುವುದನ್ನು ಸಾಬೀತು ಮಾಡಿದ್ದಾರೆ.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಂಪ್ಯೂಟರ್​ ರಿಪೇರಿ ತರಬೇತಿ, ಮಹಿಳೆಯರಿಗೆ ಟೈಲರಿಂಗ್, ಎಂಬ್ರೈಡರಿಂಗ್, ಕ್ಯಾಂಡಲ್​ ತಯಾರಿಕೆ, ಚಾಕೊಲೇಟ್​ ತಯಾರಿಕೆ, ಸೋಪ್​ ತಯಾರಿಕೆ, ಮೊಬೈಲ್​ ರಿಪೇರಿ, ಎಲೆಕ್ಟ್ರಿಕಲ್​ ವರ್ಕ್​, ಡಾಟಾ ಎಂಟ್ರಿ ಹೀಗೆ ಹತ್ತಾರು ಕೆಲಸಗಳನ್ನು ಕಲಿಸುತ್ತಿರುವುದು ಯುವಕರ ಪಾಲಿಗೂ ಸಚಿವ ಕೆ,ಜೆ ಜಾರ್ಜ್​ ಅಚ್ಚುಮೆಚ್ಚು ಆಗಿದ್ದಾರೆ. ಚುನಾವಣೆ ವೇಳೆ ಮಾತ್ರ ಪಕ್ಷ.. ಆ ಬಳಿಕ ಎಲ್ಲರೂ ನಮ್ಮ ಕ್ಷೇತ್ರದ ಜನರು ಎಂದು ಭಾವಿಸಿ ಕೆಲಸ ಕಾರ್ಯಗಳನ್ನು ಮಾಡಿಕೊಡುವುದರಿಂದ ವಿರೋಧ ಪಕ್ಷದ ಕಾರ್ಯಕರ್ತರು ಕೂಡ ಜಾರ್ಜ್​ ಬಗ್ಗೆ ಉತ್ತಮ ಮಾತನ್ನಾಡುವುದು ಈ ಕ್ಷೇತ್ರದ ವಿಶೇಷ.

Tags: BJPCongress Partyhdk meets kj georgeK J Georgek j george newsK. J. Georgek.j. georgeKJ Georgekj george congresskj george daughterkj george edkj george firkj george housekj george it raidkj george latest newskj george ministerkj george mlakj george newskj george on bjpkj george raichurkj george reactionkj george resignskj george sonkj george speechmla kj georgeprotest against kj georgeRana Georgeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರಿ ಬಸ್ ಹರಿದು ಬಾಲಕ ದುರ್ಮರಣ!

Next Post

ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್”ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post

ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್"ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada