ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವ ದರ್ಶನ್ಗೆ ರಾಜಾತಿಥ್ಯದ ಸಿಗುತ್ತಿರುವ ವಿಡಿಯೋ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.ಈ ನಡುವೆ ಬಂಧಿಖಾನೆ ಡಿಜಿ ಮಾಲಿನಿ ಕೃಷ್ಣಮೂರ್ತಿ ತನಿಖೆಗೆ ಆದೇಶ ಮಾಡಿದ್ದಾರೆ. ಈ ನಡುವೆ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ವಿಐಪಿ ವ್ಯವಸ್ಥೆ ಬಗ್ಗೆ ಆಂತರಿಕ ತನಿಖೆ ಶುರು ಮಾಡಿದ್ದಾರೆ.
ಕಾರಾಗೃಹ IGP ಆನಂದ್ ರೆಡ್ಡಿ, DIG ಸೋಮಶೇಖರ್ ನೇತೃತ್ವದ ತಂಡ, ದರ್ಶನ್, ವಿಲ್ಸನ್ ಗಾರ್ಡನ್ ನಾಗ ಕುಳಿತಿದ್ದ ಸ್ಥಳಗಳಲ್ಲಿ ಪರಿಶೀಲನೆ ಮಾಡಿದ್ದಾರೆ.ವಿಡಿಯೋ ಕಾಲ್ಗೆ ಅವಕಾಶ ಮಾಡಿಕೊಟ್ಟವರು ಯಾರು..? ಜಾಮರ್ ಇದ್ದಾಗಲೂ ವಿಡಿಯೋ ಕಾಲ್ ಮಾಡಿದ್ದರ ಬಗ್ಗೆಯೂ ವಿಚಾರಣೆ ನಡೆಸುತ್ತಿದ್ದಾರೆ.
ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನದ ನಡುವೆ ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ಆತಂಕ ವ್ಯಕ್ತಪಡಿಸಿದೆ.ದರ್ಶನ್ ರಾಜಾತಿಥ್ಯ ಕಂಡು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ.ಸಮಗ್ರವಾಗಿ ತನಿಖೆ ಆಗಬೇಕು, ಇದೆಲ್ಲಾ ನಿಲ್ಲಬೇಕು. ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಕಣ್ಣೀರು ಹಾಕುತ್ತಿದ್ದಾರೆ.