• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ:ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು.

ADVERTISEMENT

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ ಎನ್ನುವ ಸೂಚನೆ ನೀಡಿದರು.ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ.ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು.

ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.

ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದರು.

ನಾನು ಬಜೆಟ್ ನಲ್ಲಿ ಹೇಳಿದ್ದನ್ನು ಜಾರಿ ಮಾಡಿ: ಸಿಎಂ ಸೂಚನೆ.

ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ.ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ.ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು.

Tags: CM Siddaramaiah‌Congress PartyJayadeva HospitalMinister Dinesh Gundurao
Previous Post

ಹಿರಿಯ ನಟಿ ಪದ್ಮಜಾ ರಾವ್ ಜೈಲು ಪಾಲು ! ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ !

Next Post

DCM ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

DCM ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada