• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಪಾನ್‌ ಖಾಶೆಂಪುರ್: ಶಾಲಾ ಮಕ್ಕಳ ಸಮಸ್ಯೆ ಆಲಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ :ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾನ್‌ ಖಾಶೆಂಪುರ್ (ಖಾಶೆಂಪುರ್ ಪಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢ ಶಾಲೆಗಳಿಗೆ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿ, ಶಾಲಾ ಮಕ್ಕಳ ಸಮಸ್ಯೆಗಳನ್ನು ಆಲಿಸಿ, ಕುಂದುಕೊರತೆಗಳ ಮಾಹಿತಿ ಪಡೆದರು.

ADVERTISEMENT

ಖಾಶೆಂಪುರ್ ಪಿ ಗ್ರಾಮದ ಶಾಲೆಗಳಿಗೆ ಮಂಗಳವಾರ ಭೇಟಿ ನೀಡಿದ ಅವರು, ತರಗತಿಗಳಿಗೆ ತೆರಳಿ ಮಕ್ಕಳನ್ನು ಮಾತನಾಡಿಸಿ, ಶಾಲೆಯಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು, ಎಲ್ಲರೂ ಚನ್ನಾಗಿ ವಿದ್ಯಾಭ್ಯಾಸ ಮಾಡಬೇಕು.ಉತ್ತಮ ಫಲಿತಾಂಶ ಪಡೆದುಕೊಳ್ಳಬೇಕು. ಶಾಲೆಯಲ್ಲಿ ಏನೇ ಸಮಸ್ಯೆಗಳು ಇದ್ದರು ನನ್ನ ಗಮನಕ್ಕೆ ತನ್ನಿ, ಸಂಬಂಧಿಸಿದ ಅಧಿಕಾರಿಗಳಿಗೆ ಮಾತನಾಡಿ ಸಮಸ್ಯೆಗಳನ್ನು ಪರಿಹರಿಸಿಕೊಡುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ಶಾಲೆಯಲ್ಲಿನ ಎಲ್.ಕೆ.ಜಿ, ಯೂ.ಕೆ.ಜಿ ಮಕ್ಕಳಿಗೆ ಬೆಂಚ್ ವ್ಯವಸ್ಥೆ ಆಗಬೇಕು. ಶಾಲೆಯ ಕೆಲವು ಕಿಟಕಿ, ಬಾಗಿಲುಗಳು ಹಾಳಾಗಿದ್ದು ಅವುಗಳನ್ನು ಸರಿಪಡಿಸಬೇಕು. ನೀರಿನ ವ್ಯವಸ್ಥೆ ಸರಿಪಡಿಸಿಕೊಡಬೇಕು, ಸ್ಮಾರ್ಟ್ ಕ್ಲಾಸ್, ಸೈನ್ಸ್ ಲ್ಯಾಬ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂಬ ಅನೇಕ ಬೇಡಿಕೆಗಳನ್ನು ಗ್ರಾಮಸ್ಥರು, ಶಿಕ್ಷಕರು, ಮಕ್ಕಳು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರ ಮುಂದಿಟ್ಟರು.ಈ ವೇಳೆ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಸ್ಥಳದಲ್ಲಿಯೇ ಬಿಇಒ, ಡಿಡಿಪಿಐ, ಜಿಲ್ಲಾ ಪಂಚಾಯತಿಯ ಸಿಎಸ್ ಸೇರಿದಂತೆ ಅನೇಕರಿಗೆ ಕರೆ ಮಾಡಿ ಶಾಲೆಯಲ್ಲಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ ಕೂಡಲೇ ಸಮಸ್ಯೆಗಳನ್ನು ಪರಿಹರಿಸಲು ತಿಳಿಸಿದರು. ಇದೇ ವೇಳೆ ಅವರು, ಶಾಲೆಯ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ, ಶಿಕ್ಷಕಿಯರಾದ ಶಶಿಕಲಾ, ಮಾರ್ಥಾ, ಕೋಕಿಲಾ, ರಾಧಾ, ಶಿಕ್ಷಕರಾದ ಪರಮೇಶ್ವರ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಇಂದುಮತಿ, ಶಿಕ್ಷಕಿಯರಾದ ರಾಜೇಶ್ವರಿ, ಶಶಿಕಲಾ, ಶಿಕ್ಷಕರಾದ ಸಂಜುಕುಮಾರ, ಗ್ರಾಮಸ್ಥರಾದ ವಿಶ್ವನಾಥ ಬಾಲೇಬಾಯಿ, ಶರಣಪ್ಪ ಖಾಶೆಂಪುರ್, ಯೋಗೇಶ್ ವಗ್ಗೆ ಸೇರಿದಂತೆ ಶಿಕ್ಷಕರು, ಮಕ್ಕಳು, ಗ್ರಾಮಸ್ಥರು ಇದ್ದರು.

Tags: BEODDPIFormer Minister Bandappa KhashempurPrimary and Secondary Education Department
Previous Post

ಹಣಕ್ಕಾಗಿ 5 ದಿನದ ಶಿಶುವನ್ನು ಮಾರಿದ ದಂಪತಿ

Next Post

ಎತ್ತಿನಹೊಳೆ ನೀರು ಹರಿಸುವ ಏತ (Lift) ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ:ಡಿಸಿಎಂ ಡಿ.ಕೆ ಶಿವಕುಮಾರ್

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post

ಎತ್ತಿನಹೊಳೆ ನೀರು ಹರಿಸುವ ಏತ (Lift) ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ:ಡಿಸಿಎಂ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada