ಡಿಸಿಎಂ ಡಿ.ಕೆ ಶಿವಕುಮಾರ್ (Dkshivakumar) ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನ ಸಿಬಿಐಗೆ (CBI) ಕೊಟ್ಟಿದ್ದನ್ನು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಸಿಬಿಐ ಗೆ ನೀಡಿದ್ದ ಅನುಮತಿ ಹಿಂಪಡೆದಿದ್ದ ಸರ್ಕಾರದ ನಿರ್ಧಾರ ಬಗ್ಗೆ ಹೈಕೋರ್ಟ್ (Highcourt) ಇವತ್ತು ತೀರ್ಪು ಪ್ರಕಟಿಸಲಿದೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basana gowda patil yetnal) ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ರು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ನ್ಯಾಯಪೀಠ ಆದೇಶವನ್ನ ಕಾಯ್ದಿರಿಸಿತ್ತು. ಸದ್ಯ ಇಂದು ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ CBI ತನಿಖೆ ಕುರಿತು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ತೀರ್ಪು ನೀಡಲಿದೆ.