ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್ ಸೆಪ್ಟಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಮತ್ತು ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಗಳ ವಿಚಾರಣೆಯನ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸೆಪ್ಟಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ. ಇನ್ನು ಸಂತ್ರಸ್ತ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್ ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿತ್ತು
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅನಗತ್ಯ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ
ಬೆಳಗಾವಿ:ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ.ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ ಸೂಚಿಸಿದ್ದರು.ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ...
Read moreDetails