ತಾಂತ್ರಿಕ ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಪಾಸ್ ಪೋರ್ಟ್ ಸೇವಾ ಪೋರ್ಟೆಲ್ ಸ್ಥಗಿತಗೊಳ್ಳಲಿದೆ.ಇಂದು ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2 ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಟೆಕ್ನಿಕಲ್ ಮೈಂಟೆನೆನ್ಸ್ ನಿಂದಾಗಿ ಪಾಸ್ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ.. ಆಗಸ್ಟ್ 30ರಂದು ನೀಡಲಾಗಿರುವ ಎಲ್ಲಾ ಅಪಾಯಿಂಟ್ಮೆಂಟ್ ಗಳನ್ನು ರದ್ದು ಮಾಡಲಾಗಿದೆ. ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಮುಂದಿನ ದಾರಿಗಳ ಬಗ್ಗೆ ಎಸ್ ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್ಪೋರ್ಟ್ ಇಲಾಖೆ ತಿಳಿಸಿದೆ.
ಈ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ. ಆಗಸ್ಟ್ 30ಕ್ಕೆ ಬುಕ್ ಆಗಿರುವ ಅಪಾಯಿಂಟ್ಗಳನ್ನು ಬೇರೆ ದಿನಕ್ಕೆ ನಿಗದಿ ಮಾಡಿ, ಅರ್ಜಿದಾರರಿಗೆ ಅದರ ಮಾಹಿತಿ ಅಪ್ಡೇಟ್ ಮಾಡಲಾಗುತ್ತದೆ ಎಂದು ಅಡ್ವೈಸರಿ ಬಿಡುಗಡೆ ಮಾಡಲಾಗಿದೆ.