ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಅರಬ್ಬಿ ಸಮುದ್ರ ತೀರ ಹೊಂದಿರುವ ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಿಗೆ ಚಂಡಮಾರುತದ ಹೊಡೆತ ತಟ್ಟಲಿದೆ. ಈ ಪೈಕಿ ಕೇರಳ ಕರ್ನಾಟಕ ಹಾಗೂ ಗುಜರಾತ್ ರಾಜ್ಯಗಳಲ್ಲಿ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ರಾಜ್ಯದ 13 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಗದಗ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು (Udupi, Dakshina Kannada, Bidar, Kalaburagi, Yadagiri, Raichur, Bellary, Vijayapur, Gadag, Bagalkote, Shimoga, Chikkamagaluru) ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು , ಈ ಹಿನ್ನಲೆ 13 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ. ಹಾಗೂ ಸೆಪ್ಟೆಂಬರ್ 2 ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಾದ್ಯಂತ ಮುಂದಿನ 2 ವಾರಗಳ ಸಂಚಿತ ಮಳೆಯ ಮುನ್ಸೂಚನೆ ನಕ್ಷೆಗಳು:
— Karnataka State Natural Disaster Monitoring Centre (@KarnatakaSNDMC) August 31, 2024
Cumulative Rainfall Forecast Maps for the next 2 weeks over the State pic.twitter.com/QsWpSlVrHZ
ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 4ರ ವರೆಗೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಹಾಗೂ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ..