• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿತ್ರರಂಗಕ್ಕಿಂತ ರಂಗಭೂಮಿ ಸುರಕ್ಷಿತವಾಗಿದೆ:ಪ್ರಕಾಶ್‌ ಬೆಳವಾಡಿ

ಪ್ರತಿಧ್ವನಿ by ಪ್ರತಿಧ್ವನಿ
September 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಇಂದಿನ ಕನ್ನಡ ಚಿತ್ರರಂಗಕ್ಕಿಂತಲೂ ರಂಗಭೂಮಿ ಚೆನ್ನಾಗಿದೆ, ಸುರಕ್ಷಿತವಾಗಿದೆ ಎಂದು ಹಿರಿಯ ನಟ, ಬರಹಗಾರ ಪ್ರಕಾಶ್‌ ಬೆಳವಾಡಿ ಅಭಿಪ್ರಾಯ ಪಟ್ಟರು.ನಗರದ ಖಾಸಗಿ ಹೋಟೆಲಿನಲ್ಲಿ ಆಯೋಜಿಸಿದ್ದ ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ, ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕ ಚಿತ್ರಮಂದಿರಕ್ಕೆ ಬರುತ್ತಿಲ್ಲ.ಆದರೆ ರಂಗಭೂಮಿಯಲ್ಲಿ ಇಂದಿಗೂ ನಮ್ಮ ಕೆಲಸಕ್ಕೆ ಬೇಕಾದ ಬೆಂಬಲ ಸಿಗುತ್ತಿದೆ, ಚಿತ್ರರಂಗದಲ್ಲೂ ಇಂತಹ ವಾತಾವರಣ ಮತ್ತೆ ಬೇಗ ಬರಲಿ ಎಂದು ಆಶಿಸಿದರು.

ADVERTISEMENT

ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರ ಭಾರತ-ಬಾಂಗ್ಲಾ ನಡುವಿನ ಯುದ್ಧದ ಸಂದರ್ಭದಲ್ಲಿ ನಡೆಯುವ ಒಂದು ಕಥಾ ಭಾಗವಾಗಿದೆ.ಇದರಲ್ಲಿ ಎರಡೇ ಪ್ರಮುಖ ಪಾತ್ರಗಳಿವೆ.ಚಿತ್ರವನ್ನು ಸಾಧ್ಯವಾದಷ್ಟು ನೈಜವಾಗಿ ಚಿತ್ರಿಸಲು ಪ್ರಯತ್ನಿಸಿದ್ದೇವೆ.ಚಿತ್ರಮಂದಿರಕ್ಕೆ ಬಂದು ಚಿತ್ರ ನೋಡಿ ಬೆಂಬಲಿಸಿ ಎಂದರು.

ನಿರ್ದೇಶಕ ಕೆ.ಶಿವರುದ್ರಯ್ಯ ಮಾತನಾಡುತ್ತಾ, ಇದು ಚಾಲ್ಸ್‌ ಡಿಕನ್ಸ್‌ ಕಾದಂಬರಿ ಆಧಾರಿತ ಕಥೆ.ಮೊದಲನೆ ಮಹಾಯುದ್ಧದ ಸಂದರ್ಭದಲ್ಲಿ ಮೈಸೂರಿನ ಮಹಾರಾಜರು ಯೂರೋಪಿನ ಸೇನೆಗೆ ಬೆಂಬಲ ನೀಡಿ ಕಳುಹಿಸಿದ ʻಮೈಸೂರು ಲ್ಯಾನ್ಸರ್‌ʼ ತಂಡ ಹೈಫಾ ಬಂದರು ಗೆದ್ದು ಬಂದದ್ದನ್ನು ನೆನಪಿಸುವ ಒಂದು ಹಾಡನ್ನು ಚಿತ್ರೀಕರಣ ಮಾಡಿದ್ದು ಅದನ್ನು ಮೈಸೂರಿನಲ್ಲೇ ರಾಜವಂಶಸ್ಥರಿಂದ ಬಿಡುಗಡೆ ಮಾಡಿಸುವ ಉದ್ದೇಶ ಹೊಂದಿದ್ದೆವು ಅದು ಇಂದು ಯಶಸ್ವಿಯಾಗಿದೆ. ಅದನ್ನು ರಾಜವಂಶಸ್ಥರೇ ಬಿಡುಗಡೆ ಮಾಡಿರುವುದು ಮತ್ತಷ್ಟು ಸಂತೋಷ ಎಂದು ಹೇಳಿದರು.

ಊಟಿಯ ರೈಲ್ವೆ ಮಾರ್ಗದಲ್ಲಿ ರೈಲ್ವೆ ಸ್ಟೇಷನ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಿದ್ದೇವೆ. ಒಂದು ದಿನಕ್ಕೆ ರೈಲು 8 ಬಾರಿ ಈ ಮಾರ್ಗದಲ್ಲಿ ಬರುತ್ತಿತ್ತು. ಪ್ರತೀ ಬಾರಿ ಕ್ಯಾಮೆರಾ, ಲೈಟ್ಸ್‌ಗಳನ್ನು ಟ್ರ್ಯಾಕ್‌ ನಿಂದ ತೆಗೆದು ಪಕ್ಕಕ್ಕೆ ಇಟ್ಟುಕೊಳ್ಳ ಬೇಕಿತ್ತು. ಮಳೆ, ಚಳಿ ಎನ್ನದೆ ಚಿತ್ರೀಕರಣ ಮಾಡಿದ್ದೇವೆ. ಕನ್ನಡ ಪ್ರೇಕ್ಷಕರು ಚಿತ್ರ ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದು ಕೇಳಿಕೊಂಡರು.

ಮಹಾರಾಜರು ಹಾಗೂ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಮಾತನಾಡುತ್ತಾ, ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಜರು ಮಾಡಿದ ಕಾರ್ಯಗಳನ್ನು ನೆನಪು ಮಾಡಿಕೊಂಡು ಹಾಡಿನ ಮೂಲಕ ತೋರಿಸಿದ್ದು ಸಂತೋಷವಾಗಿದೆ. ನಿಮ್ಮ ಸಿನಿಮಾವನ್ನು ಅರಮನೆಯವರು ನೋಡುತ್ತೇವೆ. ಶುಭವಾಗಲಿ ಎಂದು ಹಾರೈಸಿದರು.

ಡಾ. ಬರಗೂರು ರಾಮಚಂದ್ರಪ್ಪ ಅವರು ಬರೆದ ʻಮೈಸೂರು ನಮ್ಮ ಅರಸರ ಮೈಸೂರು.ಎಂಬ ಗೀತೆಗೆ ವಿಜಯಪ್ರಕಾಶ್‌ ಹಾಗೂ ಪಲ್ಲವಿ ಹಿನ್ನೆಲೆ ಗಾಯಕರಾಗಿ ಹಾಡಿದ್ದಾರೆ.ಔಸಿಪಚ್ಚನ್ ಸಂಗೀತ ನೀಡಿದ್ದಾರೆ.ಹಿಂದೂಸ್ತಾನ್‌ ಮುಕ್ತ ಮೀಡಿಯಾ ಎಂಟರ್‌ಟೈನರ್‌ ಬ್ಯಾನರ್‌ ಅಡಿಯಲ್ಲಿ ಬಿ.ವಿ.ಗಣೇಶ್‌ ಪ್ರಭು ನಿರ್ಮಾಣ ಮಾಡಿದ್ದಾರೆ.ಈ ಚಿತ್ರದಲ್ಲಿ ರಂಗಭೂಮಿ ನಟ ವೆಂಕಟೇಶ್‌ ಪ್ರಸಾದ್‌, ರಾಜೇಶ್‌ ನಟರಂಗ ಮುಂತಾದವರು ಅಭಿನಯಿಸಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actor Prakash BelawadiMP Yaduveer Krishnadatta
Previous Post

ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ

Next Post

ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Related Posts

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?
Top Story

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

by ಪ್ರತಿಧ್ವನಿ
August 18, 2026
0

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು....

Read moreDetails
ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

August 18, 2026
ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

August 18, 2026
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
Next Post

ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada