• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರಾವಳಿಯಲ್ಲಿ ಮತಾಂತರ ಗುಮ್ಮ.. ಯುವತಿ ದೂರು, ಡಾಕ್ಟರ್​ ಅರೆಸ್ಟ್​

ಕೃಷ್ಣ ಮಣಿ by ಕೃಷ್ಣ ಮಣಿ
September 3, 2024
in Top Story, ಕರ್ನಾಟಕ, ಜೀವನದ ಶೈಲಿ
0
ಕರಾವಳಿಯಲ್ಲಿ ಮತಾಂತರ ಗುಮ್ಮ.. ಯುವತಿ ದೂರು, ಡಾಕ್ಟರ್​ ಅರೆಸ್ಟ್​
Share on WhatsAppShare on FacebookShare on Telegram

ಉಡುಪಿ: ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ವೈದ್ಯನೊಬ್ಬ ಕಿರುಕುಳ ಕೊಟ್ಟ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯನೊಬ್ಬ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು, ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ.

ADVERTISEMENT

ಮಣಿಪಾಲದ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದ್ದು, ವಿದ್ಯಾಭ್ಯಾಸ ಮಾಡಲು ಹೊರರಾಜ್ಯದಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳು. ಡೆಲ್ಲಿ ಮತ್ತು ರಾಜಸ್ಥಾನದಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳು, ಪರಸ್ಪರ ಪ್ರೀತಿಯಲ್ಲಿದ್ದರು ಎನ್ನಲಾಗಿದೆ.

ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್​ನನ್ನು ಬಂಧನ ಮಾಡಲಾಗಿದೆ. ಪ್ರೀತಿಯಲ್ಲಿದ್ದಾಗ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ ಡ್ಯಾನಿಷ್. ಆದರೆ ಇಸ್ಲಾಂಗೆ ಮತಾಂತರ ಆಗಬೇಕೆಂದು ಷರತ್ತು ಹಾಕಿದ್ದನು ಎನ್ನಲಾಗಿದೆ.

ಈ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ಆಗಸ್ಟ್​ 31 ರಂದು ದೂರು ದಾಖಲು ಮಾಡಲಾಗಿದೆ. ಮಹಮ್ಮದ್ ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಕ್ಯಾಂಪಸ್​ನಲ್ಲಿ ಪರಿಚಯವಾಗಿ, ಫೋನ್ ನಂಬರ್ ಪಡೆದುಕೊಂಡು ಗೆಳೆತನ ಬೆಳೆಸಿದ್ದರು. ನಂತರ ಪ್ರೀತಿಗೆ ಬದಲಾಗಿತ್ತು ಅನ್ನೋ ಮಾಹಿತಿ ಲಭ್ಯವಾಗಿದೆ.

2024ರ ಜನವರಿ 22 ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಅನ್ನೋ ಆರೋಪವನ್ನೂ ಮಾಡಲಾಗಿದೆ. ಅಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗಿತ್ತು. ಆ ವಿಚಾರವಾಗಿ ಅವಹೇಳನ ಮಾಡಿದ್ದನು ಎನ್ನಲಾಗಿದೆ.

2024 ರ ಮಾರ್ಚ್​ 11 ರಂದು ಸಂತ್ರಸ್ತೆ ಆರೋಪಿಯ ರೂಮ್​ಗೆ ತೆರಳಿದಾಗ ಮತಾಂತರಕ್ಕೆ ಒತ್ತಾಯಿಸಿದ್ದನು. ಹಿಂದೂ ಧರ್ಮದಿಂದ ಮತಾಂತರ ಆಗಲು ನಿರಾಕರಿಸಿದಾಗ ಸಂತ್ರಸ್ತೆಯ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಾಡಿದ್ದನು. ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದನು. 2024ರ ಆಗಸ್ಟ್​ 28 ರವರೆಗೂ ಪೋನ್‌ನಲ್ಲಿ ತನ್ನನ್ನು ಸಂಪರ್ಕಿಸಿ ನಿರಂತರ ಕಿರುಕುಳ ನೀಡುತ್ತಿದ್ದನು ಎಂದು ಆರೋಪಿಸಲಾಗಿದೆ.

27 ವರ್ಷದ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್​ನನ್ನು ಬಂಧಿಸಿದ ಪೊಲೀಸ್ರು, ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಆದರೆ ಇದು ಪ್ರೀತಿಯಲ್ಲಿ ಮೂಡಿದ ವೈಮಸ್ಸು ಇರಬಹುದು ಎಂದು ಶಂಕೆ ವ್ಯಕ್ತವಾಗುತ್ತಿದೆ. ಪೊಲೀಸ್ರು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ.

Tags: 1 lakh hindu conver to christianconverted to muslimhindi newsHinduhindu girl married muslim boyHindu muslim unityhindu muslim unity in indiahindu muslimshindu womanhindushinud muslimsleft islam and convert to other religionMangalurumangaluru universitymuslimmuslim convertmuslim manmuslim marries hinduMuslimsmuslims indonesiareligion conversion in mangaluruwoman converted to islam
Previous Post

ಬೆಂಗಳೂರಿನ ಕಸದ ಸಮಸ್ಯೆ ಪರಿಹಾರಕ್ಕೆ ಚೆನ್ನೈ ಮಾದರಿ ಪರಿಶೀಲನೆ – ಡಿಕೆಶಿ

Next Post

ಆಹಾರ ಪ್ಯಾಕೆಟ್‌ಗಳನ್ನು ತಲುಪಿಸಲು ನಾವು ದೋಣಿಗಳನ್ನು ಬಳಸುತ್ತಿದ್ದೇವೆ..!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post

ಆಹಾರ ಪ್ಯಾಕೆಟ್‌ಗಳನ್ನು ತಲುಪಿಸಲು ನಾವು ದೋಣಿಗಳನ್ನು ಬಳಸುತ್ತಿದ್ದೇವೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada