
ನವದೆಹಲಿ:ಖ್ಯಾತ ಬೈಸಿಕಲ್ ತಯಾರಕ ಕಂಪನಿಯ ಮಾಜಿ ಅಧ್ಯಕ್ಷ ಅಟ್ಲಾಸ್ ಸಲೀಲ್ ಕಪೂರ್(70) ಮಂಗಳವಾರ ದೆಹಲಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಸಲೀಲ್ ಕಪೂರ್ ಅವರ ಮೂರು ಅಂತಸ್ತಿನ ಮನೆಯ ನೆಲ ಮಹಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬದ ಸದಸ್ಯರು ಕಪೂರ್ ಅವರ ದೇಹವು ಅವರ ಮನೆಯೊಳಗಿನ ಪೂಜಾ ಕೊಠಡಿಯ ಬಳಿ ರಕ್ತದಲ್ಲಿ ತೊಯ್ದ ಸ್ತಿತಿಯಲ್ಲಿ ಪತ್ತೆ ಆಯಿತು.ಅವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಬಳಿಕ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು.ಮಾಹಿತಿ ಪಡೆದ ಪೊಲೀಸರು ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಡಾ.ಎ.ಪಿ.ಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಅವರ ಮನೆಯ ಪೂಜಾ ಕೊಠಡಿಯ ಬಳಿ ರಕ್ತದಲ್ಲಿ ತೊಯ್ದ ಸ್ಥಿತಿಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಪೂರ್ ಅವರ ದೇಹವನ್ನು ಅವರ ಮ್ಯಾನೇಜರ್ ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.ಪೊಲೀಸ್ ಅಧಿಕಾರಿಯ ಪ್ರಕಾರ, ಕಪೂರ್ ಪರವಾನಗಿ ಪಡೆದ ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ.
ಸ್ಥಳದಿಂದ ವಶಪಡಿಸಿಕೊಂಡ ಅವರು ಬರೆದ ಆತ್ಮಹತ್ಯೆ ಪತ್ರದಲ್ಲಿ, “ಆರ್ಥಿಕ ಹೊರೆ” ಅತ್ಮಹತ್ಯೆಗೆ ಪ್ರೇರಣೆಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಅವರ ಪತ್ನಿ ಮತ್ತು ಮೂವರು ಮಕ್ಕಳು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಪೂರ್ ಅವರ ಮ್ಯಾನೇಜರ್ ಮತ್ತು ಅವರ ಕುಟುಂಬವು ಮೂರು ಅಂತಸ್ತಿನ ಕಟ್ಟಡದಲ್ಲಿ ಅವರೊಂದಿಗೆ ವಾಸಿಸುತ್ತಿದ್ದರು.ತಕ್ಷಣವೇ ಕಪೂರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.
ಸ್ಥಳದಿಂದ ಸಾಕ್ಷ್ಯ ಸಂಗ್ರಹಿಸಲು ವಿಧಿವಿಜ್ಞಾನ ಮತ್ತು ಅಪರಾಧ ತಂಡಗಳನ್ನು ಕರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 9 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ 2015 ರಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಕಪೂರ್ ಅವರನ್ನು ಬಂಧಿಸಿತ್ತು. ಆತನ ವಿರುದ್ಧ ಎರಡು ಪ್ರತ್ಯೇಕ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಜನವರಿ 2020 ರಲ್ಲಿ, ಅವರ ಅತ್ತಿಗೆ ನತಾಶಾ ಕಪೂರ್ ಕೂಡ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು.










