
ವಿಜಯಪುರ(Vijayapura); ರಸ್ತೆ ಬದಿ ಬಸ್‌ಗಾಗಿ ಕಾಯುತ್ತಾ ನಿಂತಿದ್ದವರಿಗೆ ವೇಗವಾಗಿ ಬಂದ ಲಾರಿ Lorry)Collided)ಒಂದು ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ..ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದಲ್ಲಿ (village Kuntoji)ಈ ದುರಂತ ಸಂಭವಿಸಿದೆ ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ..
ಇದರಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.. ಘಟನೆಯಲ್ಲಿ ಬೈಕ್ ಸವಾರನೂ ಕೂಡಾ ಸಾವನ್ನಪ್ಪಿದ್ದಾನೆ.. ಬೈಕ್ ಸವಾರ ನಿಂಗರಾಜ ಚೌಧರಿ ತಾಳಿಕೋಟೆ ತಾಲ್ಲೂಕು ಗೋಟಖಂಡಕಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.. ಮುದ್ದೇಬಿಹಾಳ ತಾಲ್ಲೂಕಿನ ಮಲಗಲದಿನ್ನಿ ಗ್ರಾಮದ ಉದಯ್‌ಕುಮಾರ್ ಪ್ಯಾಟಿ, ದೇವರಹಿಪ್ಪರಗಿ ತಾಲ್ಲೂಕಿನ ಹಂಚಲಿ ಗ್ರಾಮದ ಅನಿಲ್ ಖೈನೂರ ಸಾವನ್ನಪ್ಪಿದವರು.ನಾಲ್ವರು ಗಾಯಾಳುಗಳನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..