• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರೋಗ್ಯ ವಿಮೆ ಮೇಲಿನ ಶೇ18 ರಷ್ಟು ಜಿ.ಎಸ್.ಟಿ ಮರು ಪರಿಶೀಲಿಸುವಂತೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದ ಸಚಿವ ದಿನೇಶ್ ಗುಂಡೂರಾವ್..

ಪ್ರತಿಧ್ವನಿ by ಪ್ರತಿಧ್ವನಿ
September 6, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಹೆಚ್ಚಿನ ತೆರಿಗೆ ಜನಸಾಮಾನ್ಯರನ್ನು ಆರೋಗ್ಯ ವಿಮೆಗಳಿಂದ ದೂರ ತಳ್ಳುತ್ತಿದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದುಬಾರಿ ಪ್ರೀಮಿಯಂಗಳಿಂದಾಗಿ ಜನರು ಆರೋಗ್ಯ ವಿಮೆಗಳಿಂದ ದೂರ ಉಳಿಯುತ್ತಿದ್ದಾರೆ. ವೈದ್ಯಕೀಯ ತುರ್ತುಪರಿಸ್ಥಿತಿಗಳು ಎದುರಾದಾಗ ಕುಟುಂಬ ವರ್ಗಗಳು ಆರ್ಥಿಕವಾಗಿ ಮುಗ್ಗರಿಸುತ್ತಿವೆ

ADVERTISEMENT

ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ.

ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು ಜಿಎಸ್.ಟಿ ತೆರಿಗೆ ಹಾಕುವುದು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ರಿದೆ. ಹೆಚ್ಚಿನ ತೆರಿಗೆಯಿಂದಾಗಿ ಹೆಲ್ತ್ ಇನ್ಸೂರೆನ್ಸ್ ಪ್ರೀಮಿಯಂ ದುಬಾರಿಯಾಗಿದ್ದು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿಲ್ಲ. ಬಹುತೇಕ ಮಧ್ಯಮ ವರ್ಗದವರು ಇಂದು ಆರೋಗ್ಯ ವಿಮೆಗಳಿಂದ ದೂರವೇ ಉಳಿಯುತ್ತಿದ್ದಾರೆ.. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿಗಳ ಸಂದರ್ಭಗಳಲ್ಲಿ ಆರೋಗ್ಯ ವಿಮೆಯ ರಕ್ಷಣೆ ಸಿಗದೆ ಇಡೀ ಕುಟುಂಬ ವರ್ಗವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನ ನಾವು ಕಾಣುತ್ತಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಿವಾಸಿ ಆಯುಕ್ತರಿಗೆ ಪತ್ರ (ಪ್ರಧಾನ ಮಂತ್ರಿಗಳಿಗೆ ಸಂಬಂಧಪಟ್ಟಂತೆ)(4) (1)Download

ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಸರ್ಕಾರಗಳು ಸತತ ಪ್ರಯತ್ನಗಳನ್ನ ಮುಂದುವರಿಸಿವೆ.‌ ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರುವ ಮೊದಲೇ ಕರ್ನಾಟಕದಲ್ಲಿ ನಾವು 2018 ರಲ್ಲೇ ಆರೋಗ್ಯ ಕರ್ನಾಟಕ ಯೋಜನೆಯನ್ನ ಜಾರಿಗೊಳಿಸಿದ್ದೆವು. ಕೇಂದ್ರ ಸರ್ಕಾರವು “2047 ರ ವೇಳೆಗೆ ಸಾರ್ವತ್ರಿಕ ವಿಮಾ ಕವರೇಜ್” ಗುರಿಯೊಂದಿಗೆ ರಾಷ್ಟ್ರವ್ಯಾಪಿ ಮಿಷನ್ ಪ್ರಾರಂಭಿಸಿದೆ.. ಆದರೆ ಆರೋಗ್ಯ ವಿಮೆಯನ್ನು ಸಂಪೂರ್ಣವಾಗಿ ನಿರಾಕರಿಸುವಷ್ಟು ಹೆಚ್ಚಿನ ದರದಲ್ಲಿ ತೆರಿಗೆ ವಿಧಿಸುವುದು ವಿಪರ್ಯಾಸ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌

2017 ರಿಂದಲೂ ಆರೋಗ್ಯ ವಿಮೆಯ ಮೇಲೆ ಶೇ 18 ರಷ್ಟು ಜಿಎಸ್.ಟಿ ಹೇರಲಾಗಿದೆ. GST ಯ ಹೆಚ್ಚಿನ ದರವು ಪ್ರೀಮಿಯಂಗಳ ವೆಚ್ಚದ ಮೇಲೆ ನೇರ ಪರಿಣಾಮ ಬೀರುತ್ತದೆ.
ಪರಿಣಾಮ ಆರೋಗ್ಯ ವಿಮೆಯು ಈಗ ಹೆಚ್ಚು ದುಬಾರಿಯಾಗಿದೆ. ಹೆಚ್ಚುತ್ತಿರುವ ವೆಚ್ಚವು ಆರ್ಥಿಕ ದುರ್ಬಲ ವರ್ಗಗಳ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರುತ್ತದೆ, ಅವರಿಗೆ ಪ್ರೀಮಿಯಂನಲ್ಲಿ ಸ್ವಲ್ಪ ಹೆಚ್ಚಳವಾದರೂ ಅದನ್ನು ಖರೀದಿಸಲು ಸಾಧ್ಯವಿಲ್ಲ. ಹೀಗಾಗಿ ಆರೋಗ್ಯ ವಿಮೆಗಳನ್ನ ಜನರು ತಿರಸ್ಕರಿಸುತ್ತಿದ್ದಾರೆ. ವಿಮಾ ರಕ್ಷಣೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆರೋಗ್ಯ ವಿಚಾರಗಳಲ್ಲಿ ತೆರಿಗೆ ನೀತಿಗಳು ಜನಪರವಾಗಿರಬೇಕು.. ತೆರಿಗೆ ಪ್ರಮಾಣವನ್ನ ಕಡಿತಗೊಳಿಸುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಆರೋಗ್ಯ ವಿಮೆಯ ರಕ್ಷಣೆ ಪಡೆಯುವಂತೆ ಪ್ರೋತ್ಸಾಹಿಸಬಹುದು. ಇದರಿಂದ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗಗಳ ಆರ್ಥಿಕ ಸ್ಥಿತಿಯನ್ನು ಕಾಪಾಡಬಹುದಾಗಿದೆ.. 2047 ರ ವೇಳೆಗೆ ಯುನಿವರ್ಸಲ್ ಇನ್ಸೂರೆನ್ಸ್ ಎಂಬ ಆಶಯವನ್ನ ಸಾಧಿಸುವತ್ತ ಧನಾತ್ಮಕ ಹೆಜ್ಜೆ ಇಡಬೇಕೆಂದು ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags: BJPCongress PartyDinesh GunduraoGSTHealth DepartmentNarendra Modiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

Next Post

ಶಾಲಾ ಹಾಸ್ಟೆಲ್ ನಲ್ಲಿ ಭೀಕರ ಅಗ್ನಿ ದುರಂತ : 17 ವಿದ್ಯಾರ್ಥಿಗಳು ಸಜೀವ ದಹನ!

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post

ಶಾಲಾ ಹಾಸ್ಟೆಲ್ ನಲ್ಲಿ ಭೀಕರ ಅಗ್ನಿ ದುರಂತ : 17 ವಿದ್ಯಾರ್ಥಿಗಳು ಸಜೀವ ದಹನ!

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada