• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸೆ.8, 15ರ ಭಾನುವಾರವೂ ತೆರೆದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

ಪ್ರತಿಧ್ವನಿ by ಪ್ರತಿಧ್ವನಿ
September 6, 2024
in ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಸೆ.8, 15ರ ಭಾನುವಾರವೂ ತೆರೆದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್
Share on WhatsAppShare on FacebookShare on Telegram

ಸೆ.8, 15ರ ಭಾನುವಾರವೂ ತೆರೆದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

ADVERTISEMENT

ಬೆಂಗಳೂರು, ಸೆಪ್ಟೆಂಬರ್ 6, 2024: ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ಸೆ. 8 ಮತ್ತು 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ತಿಳಿಸಿದೆ.

ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಬೆಸ್ಕಾಂ ವಲಯದ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ ಗಳನ್ನು ಈ ತಿಂಗಳ 8 ಮತ್ತು 15ರ ಭಾನುವಾರವೂ ತೆರೆಯಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಪೇಮೆಂಟ್‌ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್‌ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನವೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಈಗಾಗಲೇ ಕೋರಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.
ಗೃಹ ಜ್ಯೋತಿಯೋಜನೆ ಅಡಿಯಲ್ಲಿ ಶೂನ್ಯ ಬಿಲ್‌ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯ ವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟ ಪಡಿಸಿದೆ.

Tags: bengaluruBescomKPTCLOpen Campaignsunday times
Previous Post

ದ್ರಾಕ್ಷಿ ಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲ ಬೆನಿಫಿಟ್ಸ್ ಇದೆ ಗೊತ್ತಾ?

Next Post

ಊರುಗಳಿಗೆ ಹೊರಟ ಜನ.. ಮೆಜೆಸ್ಟಿಕ್‌ ಹೌಸ್‌ಫುಲ್‌..

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post

ಊರುಗಳಿಗೆ ಹೊರಟ ಜನ.. ಮೆಜೆಸ್ಟಿಕ್‌ ಹೌಸ್‌ಫುಲ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada