• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ಸೇರಿದ್ದ ಕುಸ್ತಿ ಪಟು ಭಜರಂಗ್‌ ಪೂನಿಯಾ ಗೆ ಜೀವ ಬೆದರಿಕೆ

ಪ್ರತಿಧ್ವನಿ by ಪ್ರತಿಧ್ವನಿ
September 9, 2024
in Top Story, ಇತರೆ / Others
0
Share on WhatsAppShare on FacebookShare on Telegram

ಸೋನಿಪತ್ (ಹರಿಯಾಣ):ಎರಡು ದಿನಗಳ ಹಿಂದೆ ಕಾಂಗ್ರೆಸ್ ಸೇರಿದ್ದ ಕುಸ್ತಿಪಟು ಬಜರಂಗ್ ಪುನಿಯಾ Wrestler Bajrang Punia)ಅವರಿಗೆ ಜೀವ ಬೆದರಿಕೆ Life threatening)ಬಂದಿದ್ದು, ಈ ಕುರಿತು ಅವರು ಪೊಲೀಸ್ ದೂರು (Police complaint)ದಾಖಲಿಸಿದ್ದಾರೆ.ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರೂ ಆಗಿರುವ ಪುನಿಯಾ ಅವರ ಫೋನ್ ಸಂಖ್ಯೆಗೆ ಕೊಲೆ ಬೆದರಿಕೆಗಳು ಬಂದಿವೆ ಎಂದು ವರದಿಯಾಗಿದೆ.ಈ ಬಗ್ಗೆ ಯಾವುದೇ ಪೋಲೀಸ್‌ ದೂರು ದಾಖಲಾಗಿಲ್ಲ.ವಿದೇಶಿ ನಂಬರ್‌ನಿಂದ ಪುನಿಯಾ ಅವರ ವಾಟ್ಸಾಪ್ ಫೋನ್‌ಗೆ ಬಂದ ಸಂದೇಶದಲ್ಲಿ ದುಷ್ಕರ್ಮಿ, “ಬಜರಂಗೇ, ಕಾಂಗ್ರೆಸ್ ಬಿಟ್ಟುಬಿಡಿ, ಇಲ್ಲದಿದ್ದರೆ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಇದು ಒಳ್ಳೆಯದಲ್ಲ, ಇದು ನಮ್ಮ ಕೊನೆಯ ಸಂದೇಶ, ಚುನಾವಣೆಗೆ ಮೊದಲು ನಾವು ನಿಮಗೆ ತೋರಿಸುತ್ತೇವೆ.

ADVERTISEMENT

ಇದು ನಮ್ಮ ಮೊದಲ ಮತ್ತು ಕೊನೆಯ ಎಚ್ಚರಿಕೆಯಾಗಿದೆ.ಇದಾದ ನಂತರ ಬಜರಂಗ್ ಪುನಿಯಾ ಬಹಲ್‌ಗಢ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸ್ ವಕ್ತಾರ ರವೀಂದ್ರ ಕುಮಾರ್ ಮಾತನಾಡಿ, ಭಜರಂಗ್ ಪುನಿಯಾ ಅವರಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಸೋನಿಪತ್ ಪೊಲೀಸರು ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಸ್ಟಾರ್ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಶುಕ್ರವಾರ, 6 ಸೆಪ್ಟೆಂಬರ್ 2024 ರಂದು ಕಾಂಗ್ರೆಸ್ ಪಕ್ಷವನ್ನು ಸೇರಿದರು.ನಂತರ ಕಾಂಗ್ರೆಸ್ ವಿನೇಶ್ ಫೋಗಟ್ ಅವರನ್ನು ವಿಧಾನಸಭಾ ಚುನಾವಣೆಯಲ್ಲಿ ಹರಿಯಾಣದ ಜಿಂದ್ ಜಿಲ್ಲೆಯ ಜೂಲಾನಾ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಮಾಡಿತು. ನಂತರ, ಬಜರಂಗ್ ಪುನಿಯಾ ಅವರನ್ನು ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರನ್ನಾಗಿ ಮಾಡಲು ಪಕ್ಷವು ಘೋಷಿಸಿತು.ವಿನೇಶ್ ಅವರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಂಗ್ರೆಸ್ ಸೇರಿದ ನಂತರ ಭಜರಂಗ್ ಪುನಿಯಾ ಹೇಳಿದ್ದರು. ನಾನೂ ಕೂಡ ಈಗ ರೈತರ ಮಧ್ಯೆ ಸಮಯ ಕಳೆಯಲು ಬದ್ಧನಾಗಿದ್ದೇನೆ ಎಂದರು.

Tags: a wrestlerAfter joining the CongressBajrang PuniaPolice departmentreceived a life threat
Previous Post

ಸತೀಶ್ ಜಾರಕಿಹೊಳಿ ಮುಂದಿನ ಸಿಎಂ.. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

Next Post

ನಕಲಿ ಎಂಬಿಬಿಎಸ್‌ ಸರ್ಟಿಫಿಕೇಟ್‌ ಮೂಲಕ ಸರ್ಕಾರೀ ಅಸ್ಪತ್ರೆಯಲ್ಲಿ ಕೆಲಸ ಗಿಟ್ಟಿಸಿಕೊಂಡು ಐದು ವರ್ಷ ಕೆಲಸ ಮಾಡಿದ್ದವನ ಬಂಧನ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ನಕಲಿ ಎಂಬಿಬಿಎಸ್‌ ಸರ್ಟಿಫಿಕೇಟ್‌ ಮೂಲಕ ಸರ್ಕಾರೀ ಅಸ್ಪತ್ರೆಯಲ್ಲಿ ಕೆಲಸ ಗಿಟ್ಟಿಸಿಕೊಂಡು ಐದು ವರ್ಷ ಕೆಲಸ ಮಾಡಿದ್ದವನ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada