ಬೆಂಗಳೂರು:ಕರ್ನಾಟದ ರೈಲ್ವೆ ಯೋಜನೆ ಕಾಮಗಾರಿಗಳ ಬಗ್ಗೆ ಕೇಂದ್ರ ಸಚಿವ ವಿ ಸೋಮಣ್ಣ Union Minister V Somanna)& ಸಚಿವ ಎಂ.ಬಿ.ಪಾಟೀಲ್ Minister MB Patil)ಇಂದು ಮಹತ್ವದ ಮಾಹಿತಿ Important information)ಹಂಚಿಕೊಂಡಿದ್ದಾರೆ.ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಆರಂಭವಾಗಬೇಕಿರುವ ಕಾಮಗಾರಿ, ರಾಜ್ಯ ಸರ್ಕಾರದ ಪಾಲು ಮತ್ತು ಕಾಮಗಾರಿ ಮುಗಿಸುವ ಗಡುವುಸೇರಿದಂತೆ ಅನೇಕ ಪ್ರಮುಖ ವಿಚಾರಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗಿದೆ.
ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ Chikkabanavara- Baiyyappanahalli)(ಕಾರಿಡಾರ್-2, 25 ಕಿ.ಮೀ) ಮತ್ತು ಹೀಲಲಗಿ- ರಾಜಾನುಕುಂಟೆ (ಕಾರಿಡಾರ್-4, 46.88 ಕಿ.ಮೀ) ಉಪನಗರ ರೈಲ್ವೆ ಯೋಜನೆಗಳನ್ನು 2026ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ, ನಾಡಿಗೆ ಸಮರ್ಪಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ Central Railway Department)ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಸೋಮವಾರ ಘೋಷಣೆ ಮಾಡಿದ್ದರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಬ್ಬರೂ ಸಚಿವರು ತಮ್ಮ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಕೆ-ರೈಡ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ.ಕೆಲವೊಂದು ಕಡೆ ಭೂಸ್ವಾಧೀನದ ಸಮಸ್ಯೆ ಇದ್ದು, ಮೂರು ತಿಂಗಳ ಒಳಗೆ ಭೂಮಿ ಹಸ್ತಾಂತರಕ್ಕೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಕಾಮಗಾರಿ ವಿಳಂಬಕ್ಕೆ ಯಾವ ಸಬೂಬು ಹೇಳದೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸಚಿವರಿಬ್ಬರೂ ಸೂಚಿಸಿದ್ದಾರೆ.
ಒಟ್ಟು ನಾಲ್ಕು ಕಾರಿಡಾರ್ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಕಾಮಗಾರಿಗೆ ಚುರುಕು ಮುಟ್ಟಿಸಲು ಕ್ರಮ ತೆಗೆದುಕೊಂಡಿದ್ದು, ನಿಗದಿತ ಅವಧಿಯೊಳಗೇ ಈ ಎರಡೂ ಕಾರಿಡಾರ್ ಯೋಜನೆಗಳನ್ನು ಉದ್ಘಾಟಿಸಲಾಗುವುದು. ಇದರ ನಂತರ ಇತರ ಎರಡು ಕಾರಿಡಾರ್ ಯೋಜನೆಗಳ ಜಾರಿ ಸಂಬಂಧ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಉಪನಗರ ರೈಲ್ವೆ ಯೋಜನೆ ವಿಸ್ತರಣೆ:ಬೆಂಗಳೂರಿನ ನೆರೆಹೊರೆಯ ನಗರ/ಪಟ್ಟಣಗಳಿಗೆ ಸಂಪರ್ಕ ಕಲ್ಪಿಸಲು ಉಪನಗರ ರೈಲ್ವೆ ಯೋಜನೆಯ ವಿಸ್ತರಣೆ ಅಗತ್ಯ ಇದೆ. ಬೆಂಗಳೂರಿನಿಂದ ಸಮೀಪದ ತುಮಕೂರು, ಮೈಸೂರು, ಮಾಗಡಿ, ಗೌರೀಬಿದನೂರು, ಕೋಲಾರ ನಗರಗಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಯಾವ ರೀತಿ ಕೈಗೆತ್ತಿಕೊಳ್ಳಬೇಕು ಎಂಬುದರ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಮೊದಲು ಸಭೆಗಳನ್ನು ಮಾಡಿ ನಂತರ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದ ಸೋಮಣ್ಣ, ಸಚಿವ ಪಾಟೀಲರ ಮನವಿಗೆ ಸ್ಪಂದಿಸಿದರು.
ಬೆಂಗಳೂರು- ಯುಲಂಹಕ- ದೇವನಹಳ್ಳಿ Bangalore- Yulamhaka- Devanahalli)ನಡುವೆ ಸಂಪರ್ಕ ಕಲ್ಪಿಸುವ ಕಾರಿಡಾರ್-1 ಉಪನಗರ ರೈಲ್ವೆ ಯೋಜನೆಯನ್ನು ಚಿಕ್ಕಬಳ್ಳಾಪುರ ಮೂಲಕ ಕೋಲಾರಕ್ಕೆ ಸಂಪರ್ಕಿಸುವ ಬದಲು ದೇವನಹಳ್ಳಿಯಿಂದಲೇ ನೇರವಾಗಿ ಕೋಲಾರಕ್ಕೆ ಸಂಪರ್ಕ ಕಲ್ಪಿಸುವ ಸಾಧ್ಯಾಸಾಧ್ಯತೆ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಯಿತು.
ಇನ್ನು ಉಪನಗರ ರೈಲ್ವೆ ಯೋಜನೆಯನ್ನು ಬೆಂಗಳೂರು ಸುತ್ತಲಿನ ವರ್ತುಲ ರೈಲ್ವೆ ಹಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಯಿತು. ಇದೊಂದು ಒಳ್ಳೆಯ ಪರಿಕಲ್ಪನೆ ಆಗಿದ್ದು, ಇದರಿಂದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಹೇಳಿದರು.ಸುಮಾರು 21,000 ಕೋಟಿ ವೆಚ್ಚದ 281 ಕಿ.ಮೀ ವರ್ತುಲ ರೈಲ್ವೆ ಯೋಜನೆಗೆ ರೈಲ್ವೆ ಮಂಡಳಿ ಒಪ್ಪಿಗೆ ನೀಡಿದ್ದು, ಉಪನಗರ ರೈಲುಗಳನ್ನೂ ಇದರ ಜತೆ ಸಂಪರ್ಕ ಮಾಡುವುದು ಹೆಚ್ಚು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ಮೂಡಿಬಂದಿದೆ.