• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಗಮಂಗಲ ಗಲಭೆ ಸಣ್ಣ ಘಟನೆ ಎಂದ ಗೃಹ ಸಚಿವ ಪರಮೇಶ್ವರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
September 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ನವದೆಹಲಿ:ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ Ganesha in Nagamangala)ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ (Stone, sandal throw) ಎಸೆತ ಹಾಗೂ ಬೆಂಕಿ ಹಚ್ಚುವುದು, ( fire)ತಲ್ವಾರ್, ಕತ್ತಿ ಹಿಡಿದು ಝಳಪಿಸುವುದು, ಪೆಟ್ರೋಲ್ ಬಾಂಬ್ (petrol bomb(ಎಸೆಯುವುದನ್ನು ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ನೋಡಿದ್ದೇನೆ ಎಂದು ಮಂಡ್ಯ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

ADVERTISEMENT

ನವದೆಹಲಿಯಲ್ಲಿ ಇಂದು ಸಚಿವಾಲಯದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು; ಇದೊಂದು ಸಣ್ಣ ಪ್ರಕರಣ ಎಂದು ಲಘುವಾಗಿ ಲಘುವಾಗಿ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್ ಅವರ ಹೇಳಿಕೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ನಾಗಮಂಗಲ ಗಲಭೆ ಪ್ರಕರಣ ಬುಧವಾರ ಕೇಂದ್ರ ಕ್ಯಾಬಿನೇಟ್ ಸಭೆ ಮುಗಿದ ಮೇಲೆ ನನಗೆ ಗೊತ್ತಾಯಿತು. ನಂತರ ನಾನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಆ ವಲಯದ ಐಜಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡೆ. ಸ್ಥಳೀಯರಿಂದ ಸಾಕಷ್ಟು ವಿಷಯ ತಿಳಿದು ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿದ್ದೇನೆ ಮತ್ತು ಕಠಿಣ ಕ್ರಮ ಕೈಗೊಳ್ಳಲು ಸೂಚಿದ್ದೆನೆ ಎಂದರು.

ಅಲ್ಲದೆ; ಶಾಂತಿಯುತವಾದ ಮಂಡ್ಯ ಜಿಲ್ಲೆಯಲ್ಲಿ ಒಂದು ಕೋಮಿನ ಜನರು ಕತ್ತಿ, ತಲ್ವಾರ್ ಝಳಪಿಸುವುದು, ಗಣಪತಿ ಮೆರವಣಿಗೆ ಮೇಲೆ ಚಪ್ಪಲಿ, ಕಲ್ಲು, ಪೆಟ್ರೋಲ್ ಬಾಂಬ್ ಎಸೆಯುವುದು ಅತ್ಯಂತ ಕಳವಳಕಾರಿ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ, ತುಷ್ಟೀಕರಣ ರಾಜಕಾರಣವೇ ಕಾರಣ ಎಂದು ಅವರು ಆರೋಪಿಸಿದರು.

ತಲ್ವಾರ್ ಝಳಪಿಸುವುದು ಸಣ್ಣ ವಿಚಾರವೇ?:ಗೃಹ ಸಚಿವ ಪರಮೇಶ್ವರ್ ಹೇಳಿಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ರಾಜ್ಯದಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುತ್ತಿರುವುದರ ಪರಿಣಾಮವೇ ಇಂಥ ಘಟನೆಗಳಿಗೆ ಕಾರಣ. 30ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸಿಕ್ಕಸಿಕ್ಕ ಕಡೆ ಅಂಗಡಿಗಳ ಬಾಗಿಲು ಒಡೆದು ದೋಚಲಾಗಿದೆ. ಮನಸೋ ಇಚ್ಛೆ ದೊಂಬಿ ಎಬ್ಬಿಸಲಾಗಿದೆ. ಇಂತಹ ಕಳವಳಕಾರಿ ಘಟನೆಯನ್ನು ರಾಜ್ಯದ ಗೃಹ ಸಚಿವರು ಚಿಕ್ಕ ವಿಚಾರ ಎಂದು ಹೇಳಿರುವುದು ದುರದೃಷ್ಟಕರ ಎಂದರು.

ಪೆಟ್ರೋಲ್ ಬಾಂಬ್ ಎಸೆಯುವುದು, ಸ್ಕೂಟರ್ ಗಳಿಗೆ ಬೆಂಕಿ ಹಚ್ಚಿರುವುದು, ತಲ್ವಾರ್ ಹಿಡಿದು ಹೆದರಿಸುವುದು ಸಣ್ಣವಿಚಾರವೇ? ಎರಡು ಬಾರಿ ನಾನು ಸಿಎಂ ಆಗಿ ಕೆಲಸ ಮಾಡಿದ್ದೆನೆ.ಯಾವತ್ತೂ ನಾನು ಬೆಂಕಿ ಹಚ್ಚುವ ಕೆಲಸ ಮಾಡಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ರಾಜಕೀಯ ಮಾಡುತ್ತಿಲ್ಲ:ಗಣಪತಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದು ಒಂದು ಪಕ್ಷದವರಾಷ್ಟೇ ಅಲ್ಲ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ನವರು ಎಲ್ಲರೂ ಪಕ್ಷಾತೀತವಾಗಿ ಆ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.ಇದರಲ್ಲಿ ನಾನು ರಾಜಕೀಯ ಮಾಡುತ್ತಿಲ್ಲ. ಎಲ್ಲರ ಪರವಾಗಿ ಮಾತನಾಡುತ್ತಿದ್ದೇನೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕ್ರಮ ವಹಿಸಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

ಹಿಂದೆ ನಡೆದಿರುವ ಘಟನೆಗಳು ಅವರೇ ಕಣ್ಣಾರೆ ನೋಡಿದ್ದಾರೆ. ಈಗ ರಾಜಕೀಯ ಮಾಡಬಾರದು ಎಂದು ನನಗೆ ಉಪದೇಶ ಮಾಡುತ್ತಿದ್ದಾರೆ. ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂದಿದ್ದರೆ ಈ ಪರಿಸ್ಥಿತಿ ಯಾಕೆ ಬರುತ್ತಿತ್ತು? ನಾನು ರಾಜಕೀಯ ಮಾಡುವುದಕ್ಕೆ ಹೇಳುತ್ತಿಲ್ಲ, ರಾಜಕೀಯಕ್ಕೆ ಟೀಕೆ ಮಾಡುತ್ತಿಲ್ಲ, ನಮೆಲ್ಲರ ಜವಾಬ್ದಾರಿ ಇದೇ ಎಂದು ಅರಿತುಕೊಂಡಿದ್ದೇನೆ ಸರ್ಕಾರದ ಮೇಲೆ ಕಿಡಿಕಾರಿದರು.

ಈ ಹಿಂದೆ ನಾಗಮಂಗಲದಲ್ಲಿ ಒಂದು ಘಟನೆ ನಡೆದಿದ್ದಾಗ ಅವರಿಗೆ ರಕ್ಷಣೆ ಕೊಡಬೇಕೆಂದು ಹೇಳಿ ಅವರ ಪರವಾಗಿ ಹೋರಾಟ ಮಾಡಿದ್ದೆ.ನಾನು ಯಾವುದೇ ಒಂದು ಸಮುದಾಯದ ಹೆಸರಿನಲ್ಲಿ ರಾಜಕೀಯ ಮಾಡಿಲ್ಲ, ಸರ್ವ ಜನಾಂಗದ ಶಾಂತಿಯ ತೋಟದ ತತ್ವ ನನ್ನದು.ಇವತ್ತು ಕಾಂಗ್ರೆಸ್ ಓಟ್ ಗಾಗಿ ಬೇರೆ ಬೇರೆ ರೀತಿಯಲ್ಲಿ ಅಪಪ್ರಚಾರ ಮಾಡಿಕೊಂಡು ಸಮಾಜವನ್ನು ಒಡೆಯುತ್ತಿದೆ ಎಂದು ಅವರು ಸರ್ಕಾರದ ವಾಗ್ದಾಳಿ ನಡೆಸಿದರು.ಅಂಗಡಿಗಳಿಗೆ ಬೆಂಕಿ ಹಚ್ಚಿದವರಿಗೆ ಆಸ್ಪದ ಯಾಕೆ ಕೊಟ್ಟರು ಇವರು? ನನಗೆ ಉಪದೇಶ ಮಾಡುವ ಬದಲು ಸರ್ಕಾರಕ್ಕೆ ಮೊದಲು ಹೇಳಿ, ಜನರನ್ನು ರಕ್ಷಣೆ ಮಾಡಿ ಎಂದು. ಯಾವ ರೀತಿ ನಡೆದುಕೊಳ್ಳಬೇಕು ಎಂದು ಗೃಹ ಸಚಿವರಿಗೆ ಹೇಳಿ ಎಂದು ಕಿಡಿಕಾರಿದರು ಕೇಂದ್ರ ಸಚಿವರು.

ಅಧಿಕಾರಿಗಳ ಶಕ್ತಿಯನ್ನು ಕುಂದಿಸಿದ್ದೀರಿ:ನಾಗಮಂಗಲ ಪಟ್ಟಣದಲ್ಲಿ ತಲ್ವಾರ್ ಹಿಡಿದುಕೊಂಡು, ಪೆಟ್ರೋಲ್ ಬಾಂಬ್ ಎಸೆಯುತ್ತಾರೆ ಎಂದರೆ ಈ ಸರ್ಕಾರ ಯಾವ ಮಟ್ಟಕ್ಕೆ ಆಡಳಿತ ನಡೆಸುತ್ತಿದೆ ಎನ್ನುವುದು ಅರ್ಥವಾಗುತ್ತದೆ. ಯಾರಿಗೂ ಭಯ ಇಲ್ಲ. ಈ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಅಧಿಕಾರಿಗಳ ಶಕ್ತಿಯನ್ನು ಸಂಪೂರ್ಣವಾಗಿ ನಿಷ್ಕ್ರೀಯ ಮಾಡಲಾಗಿದೆ ಎಂದು ಕಿಡಿಕಾರಿದರು ಕೇಂದ್ರ ಸಚಿವರು.

Tags: Government of KarnatakaHome minister Dr.G ParameshwaraUnion minister HD Kumaraswamy
Previous Post

ನ್ಯೂಜೆರ್ಸಿಯ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

Next Post

ದರ್ಶನ್ ಬೆರಳು ಸನ್ನೆ ಅಸಭ್ಯ ನಾ.? ಆಕಸ್ಮಿಕ ನಾ.?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post

ದರ್ಶನ್ ಬೆರಳು ಸನ್ನೆ ಅಸಭ್ಯ ನಾ.? ಆಕಸ್ಮಿಕ ನಾ.?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada