ಮಂಗಳೂರಿನಲ್ಲಿ (Mangalore) ತಡರಾತ್ರಿ ಮಸೀದಿ (Mosque) ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳ 3ನೇ ಬ್ಲಾಕ್‌ನಲ್ಲಿ ನಡೆದಿದೆ.

ಇಲ್ಲಿನ ಬದ್ರಿಯಾ ಮಸೀದಿ ಮೇಲೆ ದುಷ್ಕರ್ಮಿಗಳ ತಂಡವೊಂದು ಕಲ್ಲು ತೂರಾಟ ನಡೆಸಿದೆ. ಬೈಕ್‌ನಲ್ಲಿ ಆಗಮಿಸಿ ಕಲ್ಲು ತೂರಿ ಎಸ್ಕೆಪ್ ಆಗಿದ್ದಾರೆ. ಕಲ್ಲಿನ ಹೊಡೆತಕ್ಕೆ ಮಸೀದಿಯ ಗಾಜು ಒಡೆದು ಚೂರಾಗಿದೆ.
ಸರಿ ಸುಮಾರು ತಡರಾತ್ರಿ 2 ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದ್ದು, ಸದ್ಯ ಸ್ಥಳದಲ್ಲಿ ಸುರತ್ಕಲ್ ಠಾಣಾ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ.





