• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ :ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 16, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲಬುರಗಿ: ಕಲ್ಯಾಣ ಕರ್ನಾಟಕದ( Kalyan Karnataka)ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ (Cabinet meeting)ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ (Supplementary discussion)ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah) ತಿಳಿಸಿದರು.ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು.ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು.ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ:ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು,, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ.ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದರು.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ:ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ನಾಗಮಂಗಲ ಪ್ರಕರಣ- ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಅಮಾನತ್ತು:ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯವ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್ ಪೆಕ್ಟರ್ ನ್ನು ಅಮಾನತ್ತುಗೊಳಿಸಲಾಗಿದೆ.ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟ, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

Tags: Ajay Singh MLACM Siddaramaiah‌Congress PartyPraiyanka kharge minister
Previous Post

ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಮಹತ್ವದ ಮಾಹಿತಿ ನೀಡಿದ ಪ್ರಿಯಾಂಕ್‌ ಖರ್ಗೆ

Next Post

ಪ್ರಾಣ ಉಳಿಸಿಕೊಳ್ಳಲು ಓಡಿಹೋಗುತ್ತಿದ್ದ ಉಗ್ರನನ್ನು ಭಾರತೀಯ ಸೇನೆ ಸದೆಬಡಿದ ದೃಶ್ಯ; ಡ್ರೋನ್ ಕ್ಯಾಮೆರಾದಲ್ಲಿ ಸೆರೆ!

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post

ಪ್ರಾಣ ಉಳಿಸಿಕೊಳ್ಳಲು ಓಡಿಹೋಗುತ್ತಿದ್ದ ಉಗ್ರನನ್ನು ಭಾರತೀಯ ಸೇನೆ ಸದೆಬಡಿದ ದೃಶ್ಯ; ಡ್ರೋನ್ ಕ್ಯಾಮೆರಾದಲ್ಲಿ ಸೆರೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada