• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೌರಿ ಲಂಕೇಶ್‌ ಹತ್ಯೆ ; ಮತ್ತೆ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಿದ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌(Gauri Lankesh) ಕೊಲೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳಿಗೆ ಈಚೆಗೆ ಕರ್ನಾಟಕ ಹೈಕೋರ್ಟ್‌ ಜಾಮೀನು (Karnataka High Court Bail)ಮಂಜೂರು ಮಾಡಿದೆ.ಈ ಹಿಂದೆ ನಾಲ್ವರು Four)ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.ಇದರೊಂದಿಗೆ 18 ಆರೋಪಿಗಳ ಪೈಕಿ 8 ಮಂದಿಗೆ ನ್ಯಾಯಾಲಯವು ಜಾಮೀನು (court granted bail.)ನೀಡಿದಂತಾಗಿದೆ.

ADVERTISEMENT

ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಬೆಳಗಾವಿಯ ಭರತ್‌ ಜಯವಂತ್‌ ಕುರಾನೆ ಅಲಿಯಾಸ್‌ ಬರತ್‌ ಕುರಾನೆ ಅಲಿಯಾಸ್‌ ಅಂಕಲ್‌ ಅಲಿಯಾಸ್‌ ಟೊಮೊಟರ್; 9ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್‌ ಅಲಿಯಾಸ್ ಪಂದೇಜಿ ಅಲಿಯಾಸ್‌ ಪಂಡೆ ಅಲಿಯಾಸ್‌ ಗುಜ್ಜಾರ್‌ ಅಲಿಯಾಸ್‌ ಮಹೇಶ್‌ ಪಾಟೀಲ್‌; 13ನೇ ಆರೋಪಿ ಶಿವಮೊಗ್ಗದ ಶಿಕಾರಿಪುರದ ಸುಜಿತ್‌ ಕುಮಾರ್‌ ಅಲಿಯಾಸ್‌ ಸುಜಿತ್‌ ಎಸ್‌ ಆರ್‌ ಅಲಿಯಾಸ್‌ ಸಂಜಯ್‌ ಅಲಿಯಾಸ್‌ ಪ್ರವೀಣ್‌ ಅಲಿಯಾಸ್‌ ಮಂಜುನಾಥ್‌ ಅಲಿಯಾಸ್‌ ಗೋವಿನಾಥ್‌; ಮಹಾರಾಷ್ಟ್ರದ ಔರಂಗಾಬಾದ್‌ನ 16ನೇ ಆರೋಪಿ ಮಹಾರಾಷ್ಟ್ರದ ಔರಂಗಾಬಾದ್‌ನ ಶ್ರೀಕಾಂತ್‌ ಪಂಗಾರ್ಕರ್‌ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಎಲ್ಲಾ ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲಾ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಅರ್ಜಿದಾರರು ಪ್ರಾಸಿಕ್ಯೂಷನ್‌ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂಥದ್ದೇ ಆರೋಪದಲ್ಲಿ ಭಾಗಿಯಾಗುವಂತಿಲ್ಲ. ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ಅನುಮತಿಸದ ಹೊರತು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ಈ ಪೈಕಿ ಯಾವುದೇ ಷರತ್ತು ಉಲ್ಲಂಘಿಸಿದರೂ ಪ್ರಾಸಿಕ್ಯೂಷನ್‌ ಜಾಮೀನು ರದ್ದತಿಗೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.

ಗೌರಿ ಹತ್ಯೆ ಪ್ರಕರಣ: ಅಮಿತ್‌ ದಿಗ್ವೇಕರ್‌, ಸುರೇಶ್‌, ನವೀನ್‌ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌ಗೌರಿ ಲಂಕೇಶ್‌ ಕೊಲೆಯಾದ ಅರ್ಜಿದಾರರು ಸ್ಥಳದಲ್ಲಿರಲಿಲ್ಲ. ಎರಡನೇ ಆರೋಪಿ ಪರಶುರಾಮ್‌ ವಾಘ್ಮೋರೆ ಮತ್ತು 3ನೇ ಆರೋಪಿ ಗಣೇಶ್‌ ಮಿಸ್ಕಿನ್‌ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಉಳಿದವರ ಜೊತೆ ಸೇರಿ ಕೊಲೆಗೆ ವಾಹನ, ಶಸ್ತ್ರಾಸ್ತ್ರ ಪೂರೈಕೆ ಇತ್ಯಾದಿ ಮೂಲಕ ಪಿತೂರಿ ನಡೆಸಿರುವ ಆರೋಪ ಅರ್ಜಿದಾರರ ವಿರುದ್ಧವಿದೆ. ಇದೇ ಆರೋಪ ಈಚೆಗೆ ಜಾಮೀನು ಪಡೆದಿದ್ದ ಅಮಿತ್‌ ದಿಗ್ವೇಕರ್‌ (5ನೇ ಆರೋಪಿ), ಎಚ್‌ ಎಲ್‌ ಸುರೇಶ್‌ (7ನೇ ಆರೋಪಿ), ಎನ್‌ ಮೋಹನ್‌ ನಾಯಕ್‌ (11ನೇ ಆರೋಪಿ) ಮತ್ತು ಕೆ ಟಿ ನವೀನ್‌ ಕುಮಾರ್‌ (17ನೇ ಆರೋಪಿ) ಅವರ ವಿರುದ್ಧವಿತ್ತು. ಮೋಹನ್‌ ನಾಯಕ್‌ಗೆ ಮೊದಲಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್‌ ಸಹ ಎತ್ತಿ ಹಿಡಿದಿದೆ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

6ನೇ ಆರೋಪಿ ಭರತ್‌ ವಿರುದ್ಧ ಪರಶುರಾಮ್‌ ವಾಘ್ಮೋರೆ ಮತ್ತು ಗಣೇಶ್‌ ಮಿಸ್ಕಿನ್‌ಗೆ ವ್ಯವಸ್ಥೆ ಮಾಡಿದ ಆರೋಪವಿದೆ. ಆರೋಪಿಗಳಿಗೆ ಸುಧನ್ವ ವಾಹನ ವ್ಯವಸ್ಥೆ ಮಾಡಿದ್ದು, ಶಸ್ತ್ರಾಸ್ತ್ರ ಪೂರೈಕೆಗೆ ನೆರವಾಗಿದ್ದನು ಎಂದು ಆರೋಪಿಸಲಾಗಿದೆ. ಆರೋಪಿ ಶ್ರೀಕಾಂತ್‌ ಪಂಗಾರ್ಕರ್‌ ಎಂಬಾತ ತರಬೇತಿ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದು, 10ನೇ ಆರೋಪಿ ಶರದ್‌ ಕಲಸ್ಕರ್‌ ಅಲಿಯಾಸ್‌ ಚೋಟುಗೆ ಶಸ್ತ್ರಾಸ್ತ್ರ ತಲುಪಿಸಿದ್ದ ಆರೋಪವಿದೆ. 1ನೇ ಆರೋಪಿ ಅಮೋಲ್‌ ಕಾಳೆ ಮತ್ತು 14ನೇ ಆರೋಪಿ ಮನೋಜ್‌ ಜೊತೆಗೆ ಸೇರಿ ಬೆಳಗಾವಿಯ ಸ್ವೀಕಾರ್‌ ಹೋಟೆಲ್‌ನಲ್ಲಿ ಪಿತೂರಿ, ಮನೋಹರ್‌ ಜೊತೆಗೆ ಆದಿಚುಂಚನಗಿರಿ ಮಠದ ಪಾರ್ಕ್‌ ಸಮೀಪ ಪಿತೂರಿ ಹಾಗೂ ಸುಜಿತ್‌ ಕಸ್ಟಡಿಯಲ್ಲಿದ್ದಾಗ ದಾವಣಗೆರೆಯ ಆತನ ಅಜ್ಜಿಯ ಮನೆಯಲ್ಲಿ ಎರಡು ಜೀವಂತ ಬುಲೆಟ್‌ ವಶಕ್ಕೆ ಪಡೆಯಲಾಗಿತ್ತು. 12ನೇ ಆರೋಪಿ ವಾಸುದೇವ್‌ ಭಗವಾನ್‌ ಸೂರ್ಯವಂಶಿ ಜೊತೆಗೂಡಿ ದಾವಣಗೆರೆಯಲ್ಲಿ ಹೀರೊ ಹೋಂಡಾ ಪ್ಯಾಷನ್‌ ಪ್ರೊ ಬೈಕ್‌ ಕದ್ದ ಆರೋಪ ಸುಜಿತ್‌ ಮೇಲಿದೆ.

Tags: bangalore press clubGauri Lankesh's murdergranted bail to four accusedKarnataka High Court
Previous Post

ಕದ್ದ ಮೊಬೈಲ್‌ ಬಾಂಗ್ಲಾ ದೇಶಕ್ಕೆ ಕಳ್ಳ ಸಾಗಾಟ ; ಮೂವರ ಬಂಧನ

Next Post

ಬೆಂಗಳೂರಲ್ಲಿ ಭೀಕರ ಮರ್ಡರ್ : ಹಳೆ ದ್ವೇಷ ಹಿನ್ನೆಲೆಯಲ್ಲಿ ಯುವಕನಿಗೆ ಚಾಕು ಇರಿದ ರೌಡಿಶೀಟರ್!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಬೆಂಗಳೂರಲ್ಲಿ ಭೀಕರ ಮರ್ಡರ್ : ಹಳೆ ದ್ವೇಷ ಹಿನ್ನೆಲೆಯಲ್ಲಿ ಯುವಕನಿಗೆ ಚಾಕು ಇರಿದ ರೌಡಿಶೀಟರ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada