ಆಂಧ್ರದ ತಿರುಪತಿ (Tirupati) ತಿಮ್ಮಪ್ಪನ ಭಕ್ತರಿಗೆ ಆಘಾತಕಾರಿ ಎನಿಸುವ ಆರೋಪವನ್ನು ಆಂಧ್ರಪ್ರದೇಶ (Andra pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandra babu naidu) ಮಾಡಿದ್ದಾರೆ. ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (YSR Congress) ಸರ್ಕಾರದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ನಿನ್ನೆ ಎನ್.ಡಿ.ಎ (NDA) ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಚಂದ್ರಬಾಬು ನಾಯ್ಡು, ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನ ಹಾಳು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದಿನ ಜಗನ್ (Jagan mohan)|ನೇತೃತ್ವದ ಸರ್ಕಾರ ಅನ್ನದಾನ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಪವಿತ್ರ ತಿರುಮಲ ಲಡ್ಡುವನ್ನ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನ ಬಳಸಿ ಕಲುಷಿತಗೊಳಿಸಿದ್ದಾರೆಂಬ ಆರೋಪ ಮಾಡಿದ್ದಾರೆ.