ಹೊಸದಿಲ್ಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದಿಲ್ಲಿಯ ಮಾಜಿ ಸಚಿವ ಹಾಗೂ ಆಪ್ ನಾಯಕ ಸತ್ಯೇಂದ್ರ ಜೈನ್ (AAP leader Satyendra Jain)ಅವರು ಗುರುವಾರ ನಗರದ ನ್ಯಾಯಾಲಯಕ್ಕೆ ಜಾಮೀನು (Bail to court)ಕೋರಿ ಅರ್ಜಿ ಸಲ್ಲಿಸಿದ್ದಾರೆ.
ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಅವರು ಜಾರಿ ನಿರ್ದೇಶನಾಲಯಕ್ಕೆ (ಇಡಿ) (ED)ನೋಟಿಸ್ ಜಾರಿ ಮಾಡಿದ್ದು, ಜೈನ್ ಅವರ ಅರ್ಜಿಗೆ ನ್ಯಾಯಾಲಯವು ವಿಚಾರಣೆ ನಡೆಸಲಿರುವ ಸೆಪ್ಟೆಂಬರ್ 25 ರೊಳಗೆ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಜೈನ್ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಅವರ ಕಸ್ಟಡಿಯನ್ನು ಮತ್ತಷ್ಟು ವಿಸ್ತರಿಸಿದರು. ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) PMLA)ಅಡಿಯಲ್ಲಿ ಇಡಿ ಅವರನ್ನು ವಶಕ್ಕೆ ತೆಗೆದುಕೊಂಡಿದೆ.
2022 ರ ಮೇ 30 ರಂದು ಎಎಪಿ ನಾಯಕನನ್ನು ಇಡಿ ಬಂಧಿಸಿತ್ತು, ಆತನೊಂದಿಗೆ ಸಂಪರ್ಕ ಹೊಂದಿದ್ದ ನಾಲ್ಕು ಕಂಪನಿಗಳ ಮೂಲಕ ಹಣವನ್ನು ಲಾಂಡರಿಂಗ್ ಮಾಡಿದ ಆರೋಪದ ಮೇಲೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017 ರಲ್ಲಿ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಅದು ಪ್ರಕರಣ ದಾಖಲಿಸಿದೆ.