• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಔರಾದ್‌ನಲ್ಲಿ ಅದ್ದೂರಿ ಶಿಕ್ಷಕರ ದಿನ ಆಚರಣೆ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿ:ಶಾಸಕ ಪ್ರಭು ಚವ್ಹಾಣ

ಪ್ರತಿಧ್ವನಿ by ಪ್ರತಿಧ್ವನಿ
September 21, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಔರಾದ:ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು, ಮಕ್ಕಳಿಗೆ ಪಾಠದ ಜೊತೆಗೆ ಉತ್ತಮ ಸಂಸ್ಕಾರಗಳನ್ನು ಕಲಿಸಬೇಕು. ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ದೇಶಪ್ರೇಮ ಮೂಡಿಸಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಶಿಕ್ಷಕರಿಗೆ ತಿಳಿಸಿದರು.ಔರಾದ(ಬಿ) ಪಟ್ಟಣದ ಡಾ.ಗುರುಪಾದಪ್ಪ ಕಲ್ಯಾಣ ಮಂಟಪದಲ್ಲಿ ಸೆ.21ರಂದು ಜರುಗಿದ 2024-25ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ಔರಾದ(ಬಿ) ಕ್ಷೇತ್ರದಲ್ಲಿ ಶಿಕ್ಷಣ ರಂಗ ಸಾಕಷ್ಟು ಸುಧಾರಿಸಿದೆ. ಪ್ರತಿ ವರ್ಷ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ. ಆದರೆ ಈ ವರ್ಷ ಕಡಿಮೆಯಾಗಿರುವುದಕ್ಕೆ ಬೇಸರವಿದೆ ಎಲ್ಲ ಶಿಕ್ಷಕರು ಫಲಿತಾಂಶ ಸುಧಾರಣೆಗೆ ಪ್ರಯತ್ನಿಸಬೇಕು. ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿಯೂ ಸಾಧಿಸಬೇಕೆಂಬ ಉದ್ದೇಶದಿಂದ ಔರಾದ್‌ನಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದೆ ಇದರ ಸದ್ಬಳಕೆಯಾಗಬೇಕು ನಮ್ಮ ಕ್ಷೇತ್ರದ ಮಕ್ಕಳು ಕೂಡ ರಾಜ್ಯಮಟ್ಟದಲ್ಲಿ ಗೆಲುವು ಸಾಧಿಸಬೇಕು. ಈ ದಿಸೆಯಲ್ಲಿ ಶಿಕ್ಷಕರು ಪ್ರಯತ್ನ ವಹಿಸಬೇಕು ಎಂದರು.

ನಾಡಿಗೆ ಅನ್ನ ನೀಡಿ ಕಾಪಾಡುವ ರೈತರು, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ಹಾಗೂ ದೇಶದ ರಕ್ಷಣೆಗೆ ಹೋರಾಡುವ ಸೈನಿಕರೆಂದರೆ ನನಗೆ ಎಲ್ಲಿಲ್ಲದ ಪ್ರೀತಿ. ಇವರನ್ನು ಸದಾ ಗೌರವಿಸುತ್ತೇನೆಂದು ತಿಳಿಸಿದ ಅವರು, ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿರುವ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮ ವಹಿಸುತ್ತಿದ್ದು, ಪ್ರತಿ ವರ್ಷ ಶಿಕ್ಷಕರು, ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರ ಆತ್ಮಬಲವನ್ನು ವೃದ್ಧಿಸುವ ಕೆಲಸ ಮಾಡುತ್ತಾ ಬರುತ್ತಿದ್ದೇನೆ. ನನ್ನ ಕ್ಷೇತ್ರದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಐಎಎಸ್, ಐಪಿಎಸ್‌ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಈ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದು, ಶಿಕ್ಷಕರು ಸಹಕರಿಸಬೇಕು ಎಂದು ಕೋರಿದರು.

ಶಿಕ್ಷಣ ಕೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆಯಾಗಿದ್ದು, ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ. ಐಟಿಐ, ಡಿಪ್ಲೋಮಾ ಕಾಲೇಜುಗಳನ್ನು ನಿರ್ಮಿಸಲಾಗಿದೆ.ಕಿತ್ತೂರು ರಾಣಿ ಚನ್ನಮ್ಮ, ಡಾ.ಬಿ.ಆರ್ ಅಂಬೇಡ್ಕರ್, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಆದರ್ಶ ವಿದ್ಯಾಲಯಗಳನ್ನು ನಿರ್ಮಿಸಲಾಗುತ್ತಿದೆ ಶಿಕ್ಷಣದ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಕೆಲಸವಿರಲಿ ಶಿಕ್ಷಕರು ನನ್ನನ್ನು ನೇರವಾಗಿ ಭೇಟಿಯಾಗಿ ಈಡೇರಿಸಿಕೊಳ್ಳಬಹುದು ಶಿಕ್ಷಣದ ಪ್ರಗತಿಗೆ ಸದಾ ಬದ್ಧನಿದ್ದೇನೆ ಎಂದರು.

ಔರಾದ(ಬಿ) ಮತ್ತು ಕಮಲನಗರ ತಾಲ್ಲೂಕಿನ ಸಮಗ್ರ ಅಭಿವೃದ್ದಿಗೆ ನಿರಂತರ ಶ್ರಮ ವಹಿಸುತ್ತಿದ್ದು, ಬಲ್ಲೂರ್‌ನಲ್ಲಿ ಸಿಪೆಟ್ ಕೇಂದ್ರ ಮಂಜೂರಾಗಿದ್ದು, ಕೆಲಸ ಆರಂಭಿಸಲಾಗುತ್ತದೆ. ನಾಗೂರ(ಬಿ)ನಲ್ಲಿ 220 ಕೆ.ವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಕೆಲಸ ನಡೆಯುತ್ತಿದೆ.ಕೆರೆ ತುಂಬುವ ಯೋಜನೆ, ಕಾರಂಜಾ ಜಲಾಶಯದಿಂದ ಔರಾದಗೆ ನೀರು ಪೂರೈಸುವ ಯೋಜನೆಗಳು ಅನುದಾನದ ಕೊರತೆಯಿಂದಾಗಿ ನಿಂತಿದ್ದು, ಎಲ್ಲ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಲಾಗುವುದು ಎಂದು ಹೇಳಿದರು.ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿಯ ಹಿರೇಮಠ ಸಂಸ್ಥಾನದ ಪೂಜ್ಯ ಗುರುಬಸವ ಪಟ್ಟದ್ದೇವರು ಮಾತನಾಡಿ, ಶಾಸಕ ಪ್ರಭು ಚವ್ಹಾಣ ಅವರು ಸಮಾಜದಲ್ಲಿ ಅತಿ ಹೆಚ್ಚು ಗೌರವಕ್ಕೆ ಪಾತ್ರರಾಗಿರುವ ಶಿಕ್ಷಕರನ್ನು ಪ್ರತಿ ವರ್ಷ ಸನ್ಮಾನಿಸುತ್ತಿರುವುದು ಆದರ್ಶ ಕೆಲಸವಾಗಿದೆ. ಅನಾಥ ಮಕ್ಕಳನ್ನು ದತ್ತು ಪಡೆದು ಶಿಕ್ಷಣ ಕೊಡಿಸುವುದು, ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುತ್ತಿರುವುದು ಅಪರೂಪದ ಕಾರ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕರು ಔರಾದ(ಬಿ) ಹಾಗೂ ಕಲನನಗರ ತಾಲ್ಲೂಕಿನ ಎಲ್ಲ ನಿವೃತ್ತ ಶಿಕ್ಷಕರು, ಮರಣ ಹೊಂದಿದ ಶಿಕ್ಷಕರ ಅವಲಂಬಿತರು ಹಾಗೂ ಎಲ್ಲ ಶಾಲಾ-ಕಾಲೇಜಗಳ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಜಯಿಸಿ ರಾಜ್ಯ ಮಟ್ಟಕ್ಕೆ ಅರ್ಹತೆ ಪಡೆದ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾರಾಣಿ ನಾಯಕ್, ಪ್ರಕಾಶ ರಾಠೋಡ್, ಸಂಜಯ ಮೇತ್ರೆ, ಬಲಭೀಮ ಕುಲಕರ್ಣಿ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ರಾಮಶೆಟ್ಟಿ ಪನ್ನಾಳೆ, ಪ್ರತೀಕ ಚವ್ಹಾಣ, ಶಾಲೀವಾನ್ ಉದಗೀರೆ, ನಯೀಮೋದ್ದಿನ್, ಸಂತೋಷ ರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ರೆಡ್ಡಿ ಮಾಲಿಪಾಟೀಲ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೆಹಬೂಬ್ ಪಾಟೀಲ, ಪಂಢರಿ ಆಡೆ, ಬಸವರಾಜ ಪಾಟೀಲ, ಸಂಜುಕುಮಾರ ಶೆಟಕಾರ, ಶಿವಶರಣಪ್ಪ ವಲ್ಲೆಪೂರೆ ಸೇರಿದಂತೆ ಎಲ್ಲ ಶಾಲಾ-ಕಾಲೇಜುಗಳ ಶಿಕ್ಷಕರು ಉಪಸ್ಥಿತರಿದ್ದರು.

Tags: Balbhim KulkarniField Education Officer Sudharani NayakMLA Prabhu Chavanprakash rathodRamshetty PannaleSanjay Meytre
Previous Post

ಶಿಕ್ಷಕರು ಸಮಾಜದ ನಿಜವಾದ ಶಿಲ್ಪಿಗಳು: ಡಾ.ಶರಣ್ ಪ್ರಕಾಶ್ ಪಾಟೀಲ್

Next Post

ಸದಸ್ಯತ್ವ ಅಭಿಯಾನದಲ್ಲಿ ಯುವಮೋರ್ಚಾ ಸಕ್ರಿಯವಾಗಲಿ :ಸಂತೋಷ ರೆಡ್ಡಿ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post

ಸದಸ್ಯತ್ವ ಅಭಿಯಾನದಲ್ಲಿ ಯುವಮೋರ್ಚಾ ಸಕ್ರಿಯವಾಗಲಿ :ಸಂತೋಷ ರೆಡ್ಡಿ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada