• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆನ್‌ಲೈನ್‌ ಮೂಲಕ ಕಣ್ಣೂರು ನಿವಾಸಿಗೆ 41 ಲಕ್ಷ ರೂಪಾಯಿ ವಂಚನೆ;ವೀರಾಜಪೇಟೆ ಯುವಕನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕಣ್ಣೂರು: ಆನ್‌ಲೈನ್ ಹಣ ವಂಚನೆ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ಕೇರಳದ ಕಣ್ಣೂರು ಪೋಲೀಸರು ಕೊಡಗಿನಿಂದ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಬಂಧಿತನನ್ನು ವಿರಾಜಪೇಟೆ ಮೂಲದ 24 ವರ್ಷದ ಆದರ್ಶ್ ಕುಮಾರ್ ಎಂದು ಗುರುತಿಸಲಾಗಿದೆ.ಆರೋಪಿಯು ಕಣ್ಣೂರಿನ ವ್ಯಕ್ತಿಯೊಬ್ಬರಿಗೆ 41 ಲಕ್ಷ ರೂಪಾಯಿ ವಂಚಿಸಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ.

ADVERTISEMENT

ಆದರ್ಶ್ ಕುಮಾರ್ ತಾನು ನ್ಯೂಯಾರ್ಕ್ ಸ್ಟಾಕ್ ಎಕ್ಸ್‌ಚೇಂಜ್ ಮತ್ತು ಫಾರೆಕ್ಸ್ ಟ್ರೇಡಿಂಗ್‌ನಲ್ಲಿ ಕೋಟಿಗಟ್ಟಲೆ ರೂಪಾಯಿ ಹಣ ಹೂಡಿಕೆ ಮಾಡಿದ್ದು ಆನ್‌ಲೈನ್ ಷೇರು ವ್ಯಾಪಾರವನ್ನು ನಿರ್ವಹಿಸಲು ಅಮೆರಿಕಾದ ಚಿಕಾಗೋ ನಗರದಲ್ಲಿ ಸಂಸ್ಥೆಯನ್ನು ಹೊಂದಿದ್ದೇನೆ ಎಂದು ಕೇರಳದ ಪಲ್ಲಿಕ್ಕುನ್ನು ಮೂಲದ ವ್ಯಕ್ತಿಯೊಬ್ಬರಿಗೆ ಮನವರಿಕೆ ಮಾಡಿದ್ದ. ಕಳೆದ ವರ್ಷದ ಜೂನ್‌ ತಿಂಗಳಿನಲ್ಲಿ ಫೇಸ್‌ ಬುಕ್‌ ನಲ್ಲಿ ಜಾಹೀರಾತು ನೀಡುವ ಮೂಲಕ ಈತನು ದೂರುದಾರರಿಗೆ ಅಮಿಷ ಒಡ್ಡಿದ್ದ. ಮೊದಲಿಗೆ ಈತನ ಮಾತಿಗೆ ಮರುಳಾಗಿ ಷೇರು ಖರೀದಿಸಲು ೫-೧೦ ಸಾವಿರ ರೂಪಾಯಿ ಹಣ ಹೂಡಿಕೆ ಮಾಡಿದ್ದರು.

ಆರೋಪಿಯು ಆವರ ಬಂಡವಾಳಕ್ಕೆ ಆರಂಭಿಕ ಹಂತದಲ್ಲಿ ಹೂಡಿದ ಮೊತ್ತಕ್ಕಿಂತ ದುಪ್ಪಟ್ಟು ಹಣ ನೀಡಿದ್ದ. ಇದರಿಂದ ಆವರು ಆತನ ಮೇಲೆ ನಂಬಿಕೆ ಇರಿಸಿ ಕಳೆದ ವರ್ಷದ ಜೂನ್‌ ತಿಂಗಳಿನಲ್ಲಿ ಒಂಭತ್ತು ಲಕ್ಷ ಹಣವನ್ನು ಹೂಡಿಕೆ ಮಾಡಿದರು. ಹೂಡಿಕೆ ಮಾಡಿದ ಒಂದೇ ವಾರದಲ್ಲಿ ಒಂದು ಲಕ್ಷ ಲಾಭ ತೋರಿಸಿದ ಆರೋಪಿಯು ನಂತರ ಹೆಚ್ಚಿನ ಮೊತ್ತದ ಲಾಭ ತೋರಿಸಿದ್ದಾನೆ. ಈತನ ಬಣ್ಣದ ಮಾತಿಗೆ ಮರುಳಾಗಿ ದೂರುದಾರರು ಕಂತುಗಳಲ್ಲಿ ಓಟ್ಟು ೪೧ ಲಕ್ಷ ರೂಪಾಯಿ ಹಣವನ್ನು ಆತನ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಅದರಲ್ಲಿ ಈತನೇ ಸೃಷ್ಟಿಸಿರುವ ನಕಲಿ ಆಪ್‌ ನಲ್ಲಿ ಲಾಭವನ್ನೂ ತೋರಿಸಿದ್ದಾನೆ. ಆದರೆ ಕೇರಳ ನಿವಾಸಿಗೆ ಹಣ ಹಿಂಪಡೆಯಲು ಪ್ರಯತ್ನಿಸಿದಾಗ ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಸಾಧ್ಯವಾಗಲಿಲ್ಲ, ಕೂಡಲೇ ಎಚ್ಚೆತ್ತ ಅವರು ಕಣ್ಣೂರು ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಣ್ಣೂರು ಸೈಬರ್ ಪೊಲೀಸರು ಆರೋಪಿಯ ಸ್ಥಳ ಮತ್ತು ಹಣ ವರ್ಗಾವಣೆಗೆ ಬಳಸಲಾದ ಖಾತೆಗಳನ್ನು ಪತ್ತೆ ಮಾಡಿದರು. ಶನಿವಾರ ಆದರ್ಶ್ ವಯನಾಡಿಗೆ ಬರುವ ಮಾಹಿತಿ ತನಿಖಾ ತಂಡಕ್ಕೆ ಸಿಕ್ಕಿತ್ತು. ಬಂಧನಕ್ಕೆ ಬಲೆ ಹೆಣೆದ ಪೋಲೀಸರು ಆದರ್ಶ್‌ ನನ್ನು ವಯನಾಡಿನ ಕಟ್ಟಿಕ್ಕುಳಂನಲ್ಲಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಆನ್‌ಲೈನ್ ಷೇರು ಟ್ರೇಡಿಂಗ್ ಮೂಲಕ ಹಣ ದ್ವಿಗುಣಗೊಳಿಸುವುದಾಗಿ ಮನವರಿಕೆ ಮಾಡಿಕೊಟ್ಟು ದೂರುದಾರರಿಂದ ಲಕ್ಷಾಂತರ ರೂಪಾಯಿ ಹಣ ಸಂಗ್ರಹಿಸಿದ್ದಾನೆ ಎಂದು ಕಣ್ಣೂರು ಟೌನ್ ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀಜಿತ್ ಕೊಡೇರಿ ತಿಳಿಸಿದರು. ಆರೋಪಿಯು ಇದೇ ರೀತಿಯಲ್ಲಿ ಇತರ ಹೂಡಿಕೆದಾರರಿಗೂ ಮೋಸ ಮಾಡಿರುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸೈಬರ್ ಪೊಲೀಸರ ತಂಡ ಹಾಗೂ ಸಬ್‌ ಇನ್ಸ್‌ಪೆಕ್ಟರ್‌ ಪಿ ಪಿ ಶಮೀಲ್ ನೇತೃತ್ವದ ತಂಡ ನಡೆಸಿದ ವ್ಯವಸ್ಥಿತ ತನಿಖೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಶ್ರೀಜಿತ್‌ ತಿಳಿಸಿದರು.– ವರದಿ -ಕೋವರ್‌ ಕೊಲ್ಲಿ ಇಂದ್ರೇಶ್‌

Tags: fraud caseOnline Rs 41 lakh cheatedPolice department
Previous Post

ಮೋದಿಯವರನ್ನ ಪರಿಚಯಿಸುವಾಗ ಹೆಸರು ಮರೆತ ಬೈಡನ್

Next Post

ಕಬ್ಬಿಣದ ರಾಡ್, ದೊಣ್ಣೆ​​​ ಹಿಡಿದು 2 ಗುಂಪಿನ ನಡುವೆ ಹೊಡಿಬಡಿ

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post

ಕಬ್ಬಿಣದ ರಾಡ್, ದೊಣ್ಣೆ​​​ ಹಿಡಿದು 2 ಗುಂಪಿನ ನಡುವೆ ಹೊಡಿಬಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada