
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (CM Siddaramaiah)ಬಿಗ್ ಶಾಕ್ ಎದುರಾಗಿದೆ.ಮುಡಾ ಹಗರಣ ಪ್ರಕರಣ ಸಂಬಂಧ ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ನಡೆದಿದೆ.

ಮಂಗಳವಾರ ಹೈಕೋರ್ಟ್ (High Court)ನೀಡಿರುವ ತೀರ್ಪು ಪರಿಗಣಿಸಿ ಖಾಸಗಿ ದೂರಿನ ಮೇರೆಗೆ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ (Justice Santosh Gajanana Bhatt)ಅವರು ಆದೇಶವನ್ನು ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ. ಮುಡಾ ಹಗರಣದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿ ಲೋಕಾಯುಕ್ತ ಪೊಲೀಸರಿಂದ(Lokayukta Police) ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯವು ತೀರ್ಪು ನೀಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನೆಡೆಯಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು. ರಾಜ್ಯಪಾಲರ ಕ್ರಮವನ್ನು ಸಿದ್ದರಾಮಯ್ಯನವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಇದರಿಂದ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.











