ಮುಡಾ ಕೇಸ್‌ನಲ್ಲಿ (Muda case) ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah) ವಿರುದ್ಧ ತನಿಖೆಗೆ ಆದೇಶ ನೀಡಿರುವ ಬೆನ್ನಲ್ಲೇ, ರಾಜ್ಯದಲ್ಲಿ ಸಿಬಿಐ (CBI) ನೇರ ಪ್ರವೇಶಕದ ಅಧಿಕಾರಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ.
ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಸಿಬಿಐಗೆ ರಾಜ್ಯದಲ್ಲಿ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲು ನಿರ್ಧಾರ ಮಾಡಿದೆ. ಈ ಮೂಲಕ ಸಿಬಿಐಗೆ (CBI) ಇದ್ದ ಮುಕ್ತ ಅವಕಾಶವನ್ನ ವಾಪಸ್ ಪಡೆದ 11ನೇ ರಾಜ್ಯ ಕರ್ನಾಟಕವಾಗಿದೆ.
ಈ ಹಿಂದೆ ಪಶ್ಚಿಮ ಬಂಗಾಳ (West bengal), ತಮಿಳುನಾಡಿನಲ್ಲಿ (Tamil nadu) ಸಿಬಿಐ ನೇರ ಪ್ರವೇಶಕ್ಕೆ ಕಡಿವಾಣ ಹಾಕಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಕೂಡ ಇದೇ ರೀತಿಯ ನಿರ್ಧಾರ ಕೈಗೊಂಡಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಸಿದ್ದರಾಮಯ್ಯರನ್ನ ಮುಡಾ ಸುಳಿಯಿಂದ ರಕ್ಷಣೆ ಮಾಡಲು ಈ ನಿರ್ಣಯ ಕೈಗೊಂಡಿದೆ ಅನ್ನೋ ಮಾತುಗಳು ಕೇಳಿ ಬರ್ತಿದೆ.