
ಬೆಂಗಳೂರು: ಮುಡಾ ಪ್ರಕರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಮತ್ತವರ ಕುಟುಂಬಸ್ಥರ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ FIR ದಾಖಲಾಗಿದ್ದು, ತನಿಖೆಗೆ 4 ತಂಡಗಳು ರಚನೆಯಾಗಿವೆ.

ಇದರ ನಡುವೆಯೇ ಸಿಎಂಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈ ಮೊದಲು ಸಿಎಂ ವಿರುದ್ಧ ದೂರು ನೀಡಿದ್ದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಮುಡಾ ಪ್ರಕರಣದಲ್ಲಿ ತನಿಖೆ ಮಾಡಬೇಕು ಎಂದು EDಗೆ ಇ-ಮೇಲ್ ಮೂಲಕ ಸಿಎಂ ವಿರುದ್ಧ ದೂರು ನೀಡಿದ್ದಾರೆಂದು ತಿಳಿದುಬಂದಿದೆ.
ಅಧಿಕಾರ ದುರ್ಬಳಕೆಯಿಂದ 14 ಸೈಟ್ಗಳನ್ನು ಮುಡಾದಿಂದ ಅಕ್ರಮವಾಗಿ ಪಡೆಯಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ತನಿಖೆ ಮಾಡಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ್ದಾರೆ.




