ಮೈಸೂರು : ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ, ನಾಳೆ ಬಿಜೆಪಿ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಚಳವಳಿಯನ್ನು ರದ್ದುಗೊಳಿಸಲಾಗಿದೆ.
ಮಹಿಷ ಮಂಡಲ ಉತ್ಸವಕ್ಕೆ ಕೌಂಟರ್ ಆಗಿ ಚಾಮುಂಡಿ ಚಲೋ ಹಮ್ಮಿಕೊಂಡಿದ್ದನ್ನು ಸದ್ಯ ಕೈ ಬಿಡಲಾಗಿದೆ.ಆದರೆ ನಾಳೆ ಏನಾದರೂ ಚಾಮುಂಡಿ ಬೆಟ್ಟದಲ್ಲಿ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರೆ, ನಾವು ಸುಮ್ಮನೆ ಕೂರಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆಯನ್ನು ನೀಡಿದ್ದಾರೆ.
ಮಹಿಷ ಮಂಡಲೋತ್ಸವ ಆಚರಣೆ ವಿಷಯದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ನಿಷೇಧಾಜ್ಞೆ ಅಸ್ತ್ರ ಪ್ರಯೋಗಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮಹಿಷ ಮಂಡಲೋತ್ಸವ ಆಚರಿಸುವ ಟೌನ್ ಹಾಲ್ ಒಳ ಆವರಣ ಹೊರತುಪಡಿಸಿ, ನಗರದಾದ್ಯಂತ ಇಂದು ಮಧ್ಯರಾತ್ರಿ 12 ಗಂಟೆಯಿಂದ ಸೆ.30ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಇರಲಿದೆ.