
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಯೊಬ್ಬ ರಕ್ತದಲ್ಲಿ ಪತ್ರ ಬರೆಯುವ ಮೂಲಕ ರಾಜೀನಾಮೆ ನೀಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆಯ ಮುತ್ತಹಳ್ಳಿಯ ಸಚಿನ್ ಎಂಬಾತ ಈ ಪತ್ರವನ್ನು ಬರೆದಿದ್ದಾನೆ. ಪತ್ರದಲ್ಲಿ, ಅರಸು ಬಳಿಕ ಅತಿ ಹೆಚ್ಚು ಸರ್ಕಾರಿ ಯೋಜನೆ ನೀಡಿದ್ದೀರಿ.

ಬಡ ಜನರಿಗೆ ಅತಿ ಹೆಚ್ಚು ಯೋಜನೆ ನೀಡಿದ ಮುಖ್ಯಮಂತ್ರಿ ನೀವು. ಬಡವರು ಹಾಗೂ ದೀನ ದಲಿತರ ಪರವಾಗಿರುವಂತಹ ಮುಖ್ಯಮಂತ್ರಿಗಳು ನೀವು. ಮುಡಾ ಹಗರಣದಲ್ಲಿ ನೀವು ರಾಜೀನಾಮೆ ನೀಡಬಾರದು ನಿಮ್ಮೊಂದಿಗೆ ನಾವಿದ್ದೇವೆ ಎಂದಿದ್ದಾನೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೀಗಾಗಿ ಸೋಮವಾರದಿಂದ ತನಿಖೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ.





