• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ಬಂಧನ ಆಗುತ್ತಾ..? ಇ.ಡಿ ಲೆಕ್ಕಾಚಾರ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
October 2, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ಬಂಧನ ಆಗುತ್ತಾ..? ಇ.ಡಿ ಲೆಕ್ಕಾಚಾರ ಏನು..?
Share on WhatsAppShare on FacebookShare on Telegram

ಜಾರಿ ನಿರ್ದೇಶನಾಲಯ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುವ ಸ್ವಾಯತ್ತ ಸಂಸ್ಥೆ. ED ಈಗಾಗಲೇ ECIR ದಾಖಲು ಮಾಡಿಕೊಂಡಿದೆ. ಸಿದ್ದರಾಮಯ್ಯ ಮೂಲ ಫಲಾನುಭವಿ ಎಂದು ಇಡಿ ದೂರು ದಾಖಲು ಮಾಡಿಕೊಂಡಿದೆ. ಆದರೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಖಾಡಕ್ಕೆ ಇಳಿದಿದ್ದರೂ ತೊಡೆ ತಟ್ಟುವ ಕೆಲಸ ಮಾಡಿಲ್ಲ. ಇದ್ರ ನಡುವೆ ಸಿಎಂ ಸಿದ್ದರಾಮಯ್ಯಗೆ ಬಂಧನದ ಭೀತಿ ಎದುರಾಗಿದೆ. ಜೊತೆ ಜೊತೆಗೆ ಕಾಂಗ್ರೆಸ್​ನಲ್ಲಿ ಈಗಾಗಲೇ ಗುಟ್ಟು ಗುಟ್ಟು ಸಭೆಗಳು ನಡೆಯುವುದಕ್ಕೂ ಶುರುವಾಗಿದೆ. ಹಾಗಿದ್ದರೆ ಸಿಎಂ ಸಿದ್ದರಾಮಯ್ಯ ಬಂಧನ ಆಗುತ್ತಾ..? ಇಡಿ ಹಾಕುತ್ತಿರುವ ಲೆಕ್ಕಾಚಾರ ಏನು ಅನ್ನೋದು ಎಲ್ಲರ ತಲೆಯಲ್ಲೂ ಶುರುವಾಗಿರುವ ಪ್ರಶ್ನೆ.

ADVERTISEMENT

ಜಾರಿ ನಿರ್ದೇಶನಾಲಯ ದೂರು ದಾಖಲು ಮಾಡಿಕೊಂಡ ತಕ್ಷಣ ಏಕಾಏಕಿ ಅಖಾಡಕ್ಕೆ ಧುಮುಕಿ ಕರೆದು ವಿಚಾರಣೆ ಮಾಡುವ ಸಂಸ್ಥೆಯಲ್ಲ. ಯಾವುದಾದರೂ ಒಂದು ಪ್ರಕರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಆಗಿದ್ದು, ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರೆ ಇಸಿಐಆರ್​ ದಾಖಲು ಮಾಡಿಕೊಂಡು ತನಿಖೆಗೆ ಇಳಿಯುತ್ತಾರೆ. ಬಹುತೇಕ ಸಂದರ್ಭದಲ್ಲಿ ರಾಜ್ಯಮಟ್ಟದ ಸಂಸ್ಥೆಗಳು ಅಥವಾ ಸಿಬಿಐ ತನಿಖೆ ನಡೆಯುವಾಗ ಜಾರಿ ನಿರ್ದೇಶನಾಲಯ ರಂಗ ಪ್ರವೇಶ ಆಗುತ್ತದೆ. ಇದೀಗ ಕರ್ನಾಟಕದಲ್ಲೂ ಲೋಕಾಯುಕ್ತ ಸಂಸ್ಥೆ ತನಿಖೆಗೆ ಕೈ ಹಾಕಿರುವಾಗಲೇ ಇಡಿ ಅಧಿಕಾರಿಗಳು ವೇದಿಕೆಗೆ ಎಂಟ್ರಿ ಕೊಡುವ ತಯಾರಿ ಮಾಡಿಕೊಂಡಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯಗೆ ಇಡಿ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್​ ಕೊಡಬಹುದು. ನಾಳೆ ವಿಚಾರಣೆಗೆ ಬನ್ನಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆಹ್ವಾನಿಸಿದರೆ ಸಿಎಂ ಸಿದ್ದರಾಮಯ್ಯ ನಾಳೆ ವಿಚಾರಣೆಗೆ ಹಾಜರಾಗಬಹುದು ಅಥವಾ ಸಮಯಾವಕಾಶ ಕೋರಬಹುದು. ಆ ರೀತಿ ವಿಚಾರಣೆಗೆ ಹಾಜರಾದಾಗ ಸಿಎಂ ಸಿದ್ದರಾಮಯ್ಯ ನೀಡುವ ಉತ್ತರಗಳ ಆಧಾರದ ಮೇಲೆ ತನಿಖೆಯ ವೇಗ ಹಾಗು ಮಾರ್ಗವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುತು ಮಾಡುತ್ತಾರೆ. ಮತ್ತೆ ತನಿಖೆಗೆ ಬೇಕಾದರೂ ಕರೆಯಬಹುದು. ಜೊತೆಗೆ ಸಿದ್ದರಾಮಯ್ಯ ಹಾಗು ಆಪ್ತರಿಗೆ ಸಂಬಂಧಿಸಿದ ಮನೆ ಕಚೇರಿ ಮೇಲೆ ದಾಳಿ ಮಾಡಿ ಸಾಕ್ಷ್ಯ ಸಂಗ್ರಹ ಮಾಡಬಹುದು.

ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬಂಧನದ ಅವಶ್ಯಕತೆ ಇದೆ ಎನಿಸಿದರೆ ಬಂಧನ ಮಾಡುವ ನಿರ್ಧಾರಕ್ಕೂ ಬರಬಹುದು. ಬಹುತೇಕ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧನ ಮಾಡದೆ ವಿಚಾರಣೆ ಮಾಡುವುದಿಲ್ಲ. ಕಾರಣ, ಪ್ರಭಾವಿ ವ್ಯಕ್ತಿಗಳ ವಿರುದ್ಧ ತನಿಖೆ ಆಗುತ್ತಿರುವಾಗ ಸಾಕ್ಷ್ಯ ನಾಶ ಆಗುವ ಸಂಭವ ಹೆಚ್ಚಾಗಿರುತ್ತದೆ. ಪ್ರಭಾವಿ ವ್ಯಕ್ತಿಗಳ ವಿರುದ್ಧದ ಸಾಕ್ಷಿಗಳನ್ನು ನಾಶ ಮಾಡಲು ಒಂದೆರಡು ತಂಡಗಳೇ ಕೆಲಸ ಮಾಡುತ್ತವೆ. ಸರ್ಕಾರಿ ಅಧಿಕಾರಿಗಳೂ ಕೂಡ ಕೆಲವೊಮ್ಮೆ ಪ್ರಭಾವಿ ವ್ಯಕ್ತಿಗಳ ಪರವಾಗಿ ಕೆಲಸ ಮಾಡುವ ಸಾಧ್ಯತೆಗಳಿರುತ್ತವೆ. ಈ ಎಲ್ಲಾ ಕಾರಣದಿಂದ ಬಂಧನ ಮಾಡಿಕೊಂಡು ತನಿಖೆ ಮಾಡುವ ಜಾಯಮಾನ ED ಅಧಿಕಾರಿಗಳದ್ದು ಎನ್ನಬಹುದು.

Tags: CM Siddaramaiahcm siddaramaiah in muda scamcm siddaramaiah muda casecm siddaramaiah newscm siddaramaiah wife in muda scamMuda Casemuda case cm siddaramaiahmuda case siddaramaiahMuda Scammuda site allocation scammuda site scammulti crore scam in mudaprosecution against siddaramaiah in muda scamsiddaramaiah muda casesiddaramaiah muda scamsiddaramaiah's prosecution in muda scam₹4000 crore scam in muda
Previous Post

ಮುಡಾ ಕೇಸ್​​ಗೆ ಟ್ವಿಸ್ಟ್: ಸ್ನೇಹಮಯಿ ಕೃಷ್ಣಗೆ ಸಂಕಷ್ಟ.

Next Post

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada