• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶುಲ್ಕ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳನ್ನು ಸುಡುಬಿಸಿಲಿನಲ್ಲಿ ಕೂರಿಸಿ ವೀಡಿಯೋ ಮಾಡಿದ ಪ್ರಿನ್ಸಿಪಾಲ್..!

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಇತರೆ / Others
0
Share on WhatsAppShare on FacebookShare on Telegram

ಲಕ್ನೋ:ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರು 50 ಕ್ಕೂ ಹೆಚ್ಚು ಮಕ್ಕಳನ್ನು ಸುಡುಬಿಸಿಲಿನಲ್ಲಿ ಕೂರಿಸಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ADVERTISEMENT

ಪೋಷಕರು ಶುಲ್ಕ ಪಾವತಿಸದ ಕಾರಣ ಕೋಪಗೊಂಡ ಪ್ರಾಂಶುಪಾಲರು ಶಾಲೆಯ ಮುಖ್ಯ ಗೇಟ್‌ನ ಹೊರಗೆ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸುಡುವ ಬಿಸಿಲಿನಲ್ಲಿ ಕುಳಿತುಕೊಳ್ಳುವಂತೆ ಮಾಡಿದರು.

ಅಲ್ಲದೇ ಇದರ ವೀಡಿಯೋ ಮಾಡಿ ಬಳಿಕ ಪೋಷಕರಿಗೆ ಎಚ್ಚರಿಕೆ ಕೂಡ ನೀಡಲಾಗಿದೆ. ಸದ್ಯ ಸಿದ್ಧಾರ್ಥನಗರದ ಇಟಾವಾದಲ್ಲಿರುವ ಶ್ಯಾಮರಾಜಿ ಪ್ರೌಢಶಾಲೆಯ ಅವಮಾನಕರ ವೀಡಿಯೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಎರಡು ನಿಮಿಷಗಳ ವೈರಲ್ ವೀಡಿಯೊದಲ್ಲಿ, ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಶಾಲೆಯ ಗೇಟ್‌ ಹೊರಗೆ ಗುಂಪಾಗಿ ಕುಳಿತಿರುವುದನ್ನು ಕಾಣಬಹುದು. ಹೊಲಗಳ ಮಧ್ಯೆ ವಿದ್ಯಾರ್ಥಿಗಳು ತಮ್ಮ ಗುರುತು ಮರೆಮಾಚಲು ಹಾಗೂ ಮುಜುಗರ ತಪ್ಪಿಸಲು ಮುಖ ಮುಚ್ಚಿಕೊಂಡಿದ್ದಾರೆ.

ವೀಡಿಯೋ ವೈರಲ್‌ ಆಗುತ್ತಿದ್ದಂತೆಯೇ ಪತ್ರಕರ್ತರು ಪ್ರಾಂಶುಪಾಲ ತ್ರಿಪಾಠಿ ಅವರನ್ನು ಸಂಪರ್ಕಿಸಿದಾಗ, ಯಾರಿಗಾದರೂ ಕೆಟ್ಟ ಭಾವನೆ ಇದ್ದರೆ ಕ್ಷಮಿಸಿ. ಪ್ರತಿ ವಿದ್ಯಾರ್ಥಿಯ 10,000 ರೂ.ನಿಂದ ಲಕ್ಷದವರೆಗೆ ಶುಲ್ಕ ಬಾಕಿಯಿದೆ. ವಿದ್ಯಾರ್ಥಿಗಳನ್ನು ಬಿಸಿಲಿನಲ್ಲಿ ಕೂರಿಸಲು ನಾನು ಇಷ್ಟಪಡಲ್ಲ. ಆದರೆ ಎರಡು ನಿಮಿಷಗಳ ಕಾಲ ವೀಡಿಯೋ ಚಿತ್ರೀಕರಣಕ್ಕಾಗಿ ಇದನ್ನು ಮಾಡಲಾಗಿದೆ. ನಾವು ಪೋಷಕರಿಗೆ ಹಲವಾರು ಬಾರಿ ಜ್ಞಾಪನೆ ಮಾಡಿದ್ದೇವೆ, ಆದರೆ ನಮಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಒಂದು ಅಥವಾ ಎರಡು ತಿಂಗಳಲ್ಲಿ ಶುಲ್ಕವನ್ನು ಪಾವತಿಸುವುದಾಗಿ ಪೋಷಕರು ಹೇಳುತ್ತಾರೆ, ಆದರೆ ಕೆಲವು ವಿದ್ಯಾರ್ಥಿಗಳು ನಾಲ್ಕು ವರ್ಷಗಳಿಂದ ಶುಲ್ಕವನ್ನು ಪಾವತಿಸಿಲ್ಲ. ನಾನು ಮಾಹಿತಿಯನ್ನು ಹಂಚಿಕೊಳ್ಳಲು ಪೋಷಕರ ವಾಟ್ಸಾಪ್ ಗ್ರೂಪ್‌ನಲ್ಲಿ ಈ ವೀಡಿಯೊವನ್ನು ಹಾಕಿದ್ದೇನೆ. ಆದರೆ ಕೆಲವು ಪೋಷಕರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿದರು.

ಇನ್ನು ಈ ಸಂಬಂಧ ಅಲ್ಲಿನ ಇನ್ಸ್‌ಪೆಕ್ಟರ್ ಪ್ರತಿಕ್ರಿಯಿಸಿ, ವೈರಲ್ ಆಗಿರುವ ವಿಡಿಯೋ ತನ್ನ ಗಮನಕ್ಕೆ ಬಂದಿದೆ. ಇದೊಂದು ನಾಚಿಕೆಗೇಡಿನ ಸಂಗತಿಯಾಗಿದೆ. ನಾವು ಶಾಲೆಯನ್ನು ನೋಂದಾಯಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ತನಿಖೆಯ ನಂತರ ಮುಂದಿನ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Tags: over 50 students sit outside the school gateprincipal made a video of sittingSiddharthnagarstudents who owed fees in the hot sun..!
Previous Post

ಕೋಪನ್ ಹ್ಯಾಗನ್ ನ ‘ಇಸ್ರೇಲ್ ರಾಯಭಾರ ಕಚೇರಿ’ ಬಳಿ ಸರಣಿ ಸ್ಫೋಟ

Next Post

ತಾಜ್ ವೆಸ್ಟೆಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ – ಈಮೇಲ್ ಮೂಲಕ ಹುಸಿ ಬೆದರಿಕೆ ಹಾಕಿದ ಕಿಡಿಗೇಡಿ !

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post
ತಾಜ್ ವೆಸ್ಟೆಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ – ಈಮೇಲ್ ಮೂಲಕ ಹುಸಿ ಬೆದರಿಕೆ ಹಾಕಿದ ಕಿಡಿಗೇಡಿ !

ತಾಜ್ ವೆಸ್ಟೆಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ - ಈಮೇಲ್ ಮೂಲಕ ಹುಸಿ ಬೆದರಿಕೆ ಹಾಕಿದ ಕಿಡಿಗೇಡಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada