ದೆಹಲಿ:ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಚಿತ್ರ ಹೊಂಬಾಳೆ ಫಿಲಂಸ್ ನಿರ್ಮಾಣದ “ಕಾಂತಾರ”.( Kantara)ರಿಷಭ್ ಶೆಟ್ಟಿ (Rishabh Shetty)ಈ ಚಿತ್ರದ ನಾಯಕನಾಗಿ ನಟಿಸುವುದಷ್ಟೇ ಅಲ್ಲದೆ, ನಿರ್ದೇಶನವನ್ನು ಮಾಡಿದ್ದರು. 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ “ಕಾಂತಾರ” ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದೆ.
“ಕಾಂತಾರ” ಚಿತ್ರಕ್ಕೆ ಅತ್ಯುತ್ತಮ ಮನೋರಂಜನಾ ಚಿತ್ರ ಹಾಗೂ ಈ ಚಿತ್ರದ ನಟನೆಗಾಗಿ ರಿಷಭ್ ಶೆಟ್ಟಿ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ನಟ, ನಿರ್ದೇಶಕ ರಿಷಭ್ ಶೆಟ್ಟಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಇಂತಹ ಅತ್ಯುತ್ತಮ ಚಿತ್ರವನ್ನು ನಮ್ಮ ಹೊಂಬಾಳೆ ಫಿಲಂಸ್ ಗೆ ನೀಡಿದ ನಿರ್ದೇಶಕ, ನಟ ರಿಷಭ್ ಶೆಟ್ಟಿ ಅವರಿಗೆ ನಿರ್ಮಾಪಕ ವಿಜಯ್ ಕಿರಗಂದೂರು ಧನ್ಯವಾದ ತಿಳಿಸಿದ್ದಾರೆ.