• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:”ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಈ ವಿಚಾರ ತಿಳಿಸಿದರು.

ADVERTISEMENT

“ಅಕ್ಟೊಬರ್ 16ರಂದು ಬೆಂಗಳೂರಿಗೆ ಬಹಳ ವಿಶೇಷವಾದ ದಿನ. ಕಾವೇರಿ ಕುಡಿಯುವ ನೀರಿನ ಐದನೇ ಹಂತದ ಯೋಜನೆ ಜಾರಿಯಾಗುತ್ತಿದೆ. ಇಷ್ಟು ದಿನ ಬೆಂಗಳೂರಿಗೆ ನಾಲ್ಕು ಹಂತಗಳ ಯೋಜನೆಯಲ್ಲಿ ಕುಡಿಯುವ ನೀರನ್ನು ಪೂರೈಸಲಾಗುತ್ತಿತ್ತು. ಈ ಯೋಜನೆ ಜಾರಿಗೆ ಇದ್ದ ಅಡಚಣೆ ನಿವಾರಿಸಿಕೊಂಡು ಬಂದಿದ್ದು, ಕಾಮಗಾರಿಯ ವೀಕ್ಷಣೆ ಮಾಡಿಕೊಂಡು ಬಂದಿದ್ದೇನೆ. ಇದೇ 16 ರಂದು ತೊರೆಕಾಡನಹಳ್ಳಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು.ನಂತರ ಬೆಂಗಳೂರಿನ ಮನೆ ಮನೆಗೆ ಕಾವೇರಿ ಪೂರೈಸಲಾಗುವುದು” ಎಂದು ತಿಳಿಸಿದರು.

ಕೇಂದ್ರದ ಅನ್ಯಾಯದ ವಿರುದ್ಧ ಹೋರಾಟ:

ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಬಗ್ಗೆ ಕೇಳಿದಾಗ, “ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಬಹಳ ಅನ್ಯಾಯ ಮಾಡಲಾಗುತ್ತಿದೆ. ಉತ್ತರ ಪ್ರದೇಶ, ಉತ್ತರ ಭಾರತದ ರಾಜ್ಯಗಳು ಹಾಗೂ ಆಂಧ್ರಪ್ರದೇಶಕ್ಕಿಂತ ನಮಗೆ ಬಹಳ ಕಡಿಮೆ ಅನುದಾನ ಸಿಕ್ಕಿದೆ. ಆಂಧ್ರ ಪ್ರದೇಶದಿಂದ ಹೆಚ್ಚು ತೆರಿಗೆ ಹೋಗುವುದೇ ಇಲ್ಲ. ಅವರಿಗಿಂತ ನಮಗೆ ಕಡಿಮೆ ಪಾಲು ಸಿಗುತ್ತಿದೆ. ಇದರ ವಿರುದ್ಧ ಮುಂದಿನ ದಿನಗಳಲ್ಲಿ “ನಮ್ಮ ತೆರಿಗೆ ನಮ್ಮ ಹಕ್ಕು” ಹೋರಾಟ ಮಾಡುತ್ತೇವೆ. ಈ ಅನ್ಯಾಯದ ಬಗ್ಗೆ ಕೇಂದ್ರ ಸಚಿವರು ಹಾಗೂ ಬಿಜೆಪಿ ಸಂಸದರು ಯಾಕೆ ಧ್ವನಿ ಎತ್ತಿಲ್ಲ? ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತರಾಮನ್ ಅವರು ಹಣಕಾಸು ಮಂತ್ರಿಯಾಗಿ, ನಮ್ಮ ರಾಜ್ಯದ 3-4 ಕೇಂದ್ರ ಸಚಿವರಿದ್ದರೂ ಅವರು ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ನೋಡಿಕೊಂಡು ಕೂತಿದ್ದಾರಲ್ಲಾ ಇದು ನಿಜಕ್ಕೂ ಆಘಾತಕಾರಿ.ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ಬಂದಿತ್ತು, ಈಗ ಎಷ್ಟು ಬಂದಿದೆ ಎಂಬುದನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ, ಈಗ ನಮ್ಮ ಹೋರಾಟಕ್ಕೆ ಬಿಜೆಪಿ ನಾಯಕರು ಕೈ ಜೋಡಿಸಲಿ” ಎಂದು ತಿಳಿಸಿದರು.

ಜಾಹೀರಾತು ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಮಗೆ ಬಂದಿರುವ ಮಾಹಿತಿಯನ್ನು ನಮ್ಮದೇ ಆದ ಭಾವನೆ ಮೂಲಕ ಜನರಿಗೆ ತಿಳಿಸಿದ್ದೇವೆ. ಉಳಿದ ವಿಚಾರವನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ” ಎಂದು ತಿಳಿಸಿದರು.

ತಾಯಿ ಆಶೀರ್ವಾದದಿಂದ ಮಳೆಯಾಗಿ ಅಣೆಕಟ್ಟು ತುಂಬಿವೆ:“ಮೈಸೂರು ದಸರಾ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ನಾಡದೇವಿ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಾಡಿನಲ್ಲಿ ಉತ್ತಮ ಮಳೆಯಾಗಿದೆ. ನೀರಿಗಾಗಿ ಜನರು ಹಾಗೂ ತಮಿಳುನಾಡು ವಿರುದ್ಧದ ಹೋರಾಟ ನಿಂತಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳು ತುಂಬಿವೆ.

ತಾಯಿ ಆಶೀರ್ವಾದದಿಂದ ನಾವು ಕೇವಲ ಆರು ದಿನಗಳಲ್ಲಿ ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಮಾಡಿದ್ದೇವೆ ಮತ್ತೆ ಅಣೆಕಟ್ಟು ತುಂಬಿ ಬಾಗಿನ ಅರ್ಪಣೆ ಮಾಡಿದ್ದೇವೆ.

ದೀಪಾಲಂಕಾರ 10-12 ದಿನಗಳ ಕಾಲ ವಿಸ್ತರಣೆ:

ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದಕ್ಕಿಂತ ಈ ಬಾರಿ ಅತ್ಯುತ್ತಮವಾಗಿ ದೀಪಾಲಂಕಾರ ಮಾಡಲಾಗಿದೆ. ಅಲ್ಲದೆ ಒಂದೂವರೆ ಸಾವಿರ ಡ್ರೋನ್ ಗಳ ಶೋ ವ್ಯವಸ್ಥೆ ಮಾಡಲಾಗಿದೆ. ಸಾಂಸ್ಕೃತಿಕ ನಾಡಿನಲ್ಲಿ ನಮ್ಮ ಜನ ನಮ್ಮ ಸಂಸ್ಕೃತಿಯನ್ನು ಕಣ್ತುಂಬಿಕೊಂಡು ಆನಂದಿಸಲಿ ಎಂದು ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಹತ್ತು ದಿನಗಳಲ್ಲಿ ಇಳಯರಾಜ, ಎ.ಆರ್ ರೆಹಮಾನ್ ಅವರ ಕಾರ್ಯಕ್ರಮಗಳಿಗೆ ಎರಡೂವರೆ ಲಕ್ಷ ಜನ ಸೇರಿದ್ದರು. ಈ ಸಂದರ್ಭದಲ್ಲಿ ನಾಡಿನ ಜನ ನೆಮ್ಮದಿ, ಶಾಂತಿಯಿಂದ ಬದುಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ನಾಡಿನ ವಿವಿಧ ಭಾಗಗಳಲ್ಲೂ ದಸರಾ ಕಾರ್ಯಕ್ರಮವನ್ನು ಬಹಳ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಮಡಿಕೇರಿಯಲ್ಲಿ ಮೈಸೂರಿಗಿಂತಲೂ ಹೆಚ್ಚಿನ ಹಣ ವ್ಯಯ ಮಾಡಿ ಸ್ತಬ್ಧಚಿತ್ರಗಳನ್ನು ಮಾಡಿದ್ದಾರೆ.ಇದನ್ನು ನೋಡಿ ನನಗೆ ಅಚ್ಚರಿಯಾಯಿತು” ಎಂದು ತಿಳಿಸಿದರು.

Tags: 50 lakh people of Bengaluru.benefited by Cauvery fifth phase projectDCM D.K. Shivakumar.Tungabhadra Dam
Previous Post

ಬೆಂಗಳೂರನ್ನು ನೋಡಲು ಬಂದ ಯುವಕ ರೈಲ್ವೆ ಅಪಘಾತಕ್ಕೆ ತುತ್ತು – ಗಂಭೀರ ಗಾಯ ! 

Next Post

ಮೈಸೂರು ದಸರಾ ಇವತ್ತಿನ ಜಟ್ಟಿ ಕಾಳಗ ವಿಶೇಷ ಏನು..? ಯಾರು ಭಾಗಿಯಾಗ್ತಾರೆ..?

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಮೈಸೂರು ದಸರಾ ಇವತ್ತಿನ ಜಟ್ಟಿ ಕಾಳಗ ವಿಶೇಷ ಏನು..? ಯಾರು ಭಾಗಿಯಾಗ್ತಾರೆ..?

ಮೈಸೂರು ದಸರಾ ಇವತ್ತಿನ ಜಟ್ಟಿ ಕಾಳಗ ವಿಶೇಷ ಏನು..? ಯಾರು ಭಾಗಿಯಾಗ್ತಾರೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada