• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ಪತ್ನಿಯಂತೆಯೇ ಸೈಟ್​ ವಾಪಸ್​ ಕೊಟ್ಟ ಖರ್ಗೆ ಪುತ್ರ..

ಕೃಷ್ಣ ಮಣಿ by ಕೃಷ್ಣ ಮಣಿ
October 13, 2024
in ಕರ್ನಾಟಕ, ರಾಜಕೀಯ, ಶೋಧ
0
ಸಿದ್ದರಾಮಯ್ಯ ಪತ್ನಿಯಂತೆಯೇ ಸೈಟ್​ ವಾಪಸ್​ ಕೊಟ್ಟ ಖರ್ಗೆ ಪುತ್ರ..
Share on WhatsAppShare on FacebookShare on Telegram

ಸಿದ್ದರಾಮಯ್ಯ ಪತ್ನಿ ಮುಡಾದಿಂದ ಪಡೆದಿದ್ದ 14 ಸೈಟ್​ ವಾಪಸ್​ ಮಾಡಿದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್​ ಖರ್ಗೆಗೆ ಕೊಟ್ಟಿದ್ದ ಸೈಟ್​ನಲ್ಲೂ ಅಕ್ರಮ ನಡೆದಿದೆ ಎನ್ನುವ ಆರೋಪವನ್ನು ಬಿಜೆಪಿ ನಾಯಕರು ಮಾಡಿದ್ದರು. ಮೊದಲಿಗೆ ಪ್ರಿಯಾಂಕ್​ ಖರ್ಗೆ ಕಾನೂನು ಪ್ರಕಾರವೇ ಸೈಟ್​ ಪಡೆದಿದ್ದೇವೆ. ಯಾವುದೇ ಅಕ್ರಮ, ಸ್ವಹಿತಾಸಕ್ತಿ ನಡೆದಿಲ್ಲ ಎಂದಿದ್ದರು. ಸಚಿವ ಎಂಬಿ ಪಾಟೀಲ್​ ಸೇರಿದಂತೆ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ನೀಡಿದ್ದ ಸೈಟ್​ ಕಾನೂನು ಬದ್ಧ ಎಂದು ಸಾಕಷ್ಟು ಮಂತ್ರಿಗಳು ಠಸ್ಸೆ ಹೊತ್ತಿದ್ದರು. ಆದರೆ ಇದೀಗ ಕಾನೂನು ಸಂಘರ್ಷಕ್ಕೂ ಮೊದಲೇ ಸೈಟ್​ ವಾಪಸ್​ ಮಾಡುವ ಮೂಲಕ ಜಾಣತನ ಮೆರೆದಿದ್ದಾರೆ.

ADVERTISEMENT

ಸಿದ್ದಾರ್ಥ ವಿಹಾರ ಟ್ರಸ್ಟ್ ವಿವಾದ ಜೋರಾಗುವ ಮೊದಲೇ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸೈಟ್ ವಾಪಸ್ ಮಾಡಿರುವ ಬಗ್ಗೆ ಪ್ರಿಯಾಂಕ್​ ಖರ್ಗೆ ಮಾತನಾಡಿ ಈಗಲೂ ಸಮರ್ಥನೆ ಹಾದಿಯಲ್ಲೇ ಇದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದು, ತರಾತುರಿ ಹಾಗೂ ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪ ಇತ್ತು. ಆದ್ರೆ ಇಲ್ಲಿ ಹಾಗೆ ಆಗಿಲ್ಲ. ಟ್ರಸ್ಟ್ ಅಧ್ಯಕ್ಷ ರಾಹುಲ್‌ ಖರ್ಗೆ ಅವರಿಗೆ ಹೆಚ್ಚು ಅರಿವು ಇರಲಿಲ್ಲ. ಅವರಿಗೆ ಕೇಂದ್ರದಿಂದ ಸಾಕಷ್ಟು ಅವಾರ್ಡ್ ಸಿಕ್ಕಿದೆ. ಯುಪಿಎಸ್ಇನಲ್ಲೂ ರ್ಯಾಂಕ್ ಬಂದಿದ್ರು. ನಮ್ಮ ಕುಟುಂಬದಲ್ಲಿ ಮೂವರು ಅಷ್ಟೇ ರಾಜಕೀಯದಲ್ಲಿ ಇದ್ದೇವೆ. ರಾಹುಲ್​ ಖರ್ಗೆ ಯುರೋಸ್ಪೇಸ್​ನಲ್ಲಿ ಜಾಗ ಬೇಕು ಅಂತ ಅರ್ಜಿ ಹಾಕ್ತಾರೆ. ಅದರ ಅನ್ವಯ ಅವರಿಗೆ ಸೈಟ್ ಅಲಾಟ್ ಆಗಿದೆ. ಸಂಪೂರ್ಣ ದಾಖಲೆ ಆಧಾರದ‌ ಮೇಲೆ ಸೈಟ್ ಸಿಕ್ಕಿದೆ ಎಂದಿದ್ದಾರೆ.

ಆ ಬಳಿಕ ಸೈಟ್​ ವಾಪಸ್​ ಬಗ್ಗೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಅಣ್ಣ ಅವರು ಮೃದು ಸ್ವಭಾವದವರು. ಅವರಿಂದ ಕುಟುಂಬದ ಸದಸ್ಯರರಿಗೆ ಹಿಂಸೆ ಆಗ್ತಿದೆ ಎಂದು ನೊಂದಿದ್ದಾರೆ. ಸೆಪ್ಟೆಂಬರ್ 20ರಂದು KIADBಗೆ ಪತ್ರ ಬರೆದಿದ್ದಾರೆ. ನಿವೇಶನಗಳನ್ನು ಕಾನೂನಾತ್ಮಕ ವಾಗಿ ಮರಳಿ‌ ನೀಡುತ್ತಿದ್ದೇವೆ ಎಂದು ಪತ್ರ ಬರೆದಿದ್ದಾರೆ. ಎರಡ್ಮೂರು ಕಾರಣ ಕೊಟ್ಟು ಸೈಟ್ ಮರಳಿ ನೀಡಿದ್ದಾರೆ. ಖಾಸಗಿ ಟ್ರಸ್ಟ್ ಅಲ್ಲ ಪಬ್ಲಿಕ್ ಟ್ರಸ್ಟ್ ಎಂದು ನಮೂದಿಸಿದ್ದಾರೆ. ಟ್ರಸ್ಟ್​ಗೆ ಬಂದ ಹಣವನ್ನು ಯಾವುದೇ ಕಾರಣಕ್ಕೆ ದುರುಪಯೋಗ ಮಾಡಿಕೊಳ್ಳಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಿಎ ಸೈಟ್​ನಲ್ಲಿ ಯಾವುದೇ ರೀತಿಯ ರಿಯಾಯಿತಿ ಕೋಡೋದಕ್ಕೆ ಬರೋದಿಲ್ಲ. ಇದು ತರಬೇತಿಗೆ ಅಂತ ಸಿಎ ಸೈಟ್ ಪಡೆಯಲಾಗಿತ್ತು. ‌ಆದ್ರೆ ಯಾವುದೇ ಲಾಭದ ಉದ್ದೇಶ ಇರಲಿಲ್ಲ. ಆದ್ರೆ ಬಿಜೆಪಿ ನಾಯಕರು ಹಲವು ರೀತಿಯ ‌ಆರೋಪ ಮಾಡಿದರು. ರಾಜಕೀಯ ಆರೋಪದಿಂದ‌ ಬೇಸರವಾಗಿ ಸೈಟ್​ ವಾಪಸ್​ ಮಾಡಿದ್ದಾರೆ ಎಂದಿದ್ದಾರೆ.

ಕೆಐಎಡಿಬಿಗೆ ಧನ್ಯವಾದ‌ ಸಲ್ಲಿಸಿ ಸಿಎ ಸೈಟ್ ಮರಳಿ ನೀಡಿದ್ದಾರೆ. ಬಿಜೆಪಿಯವರು ದೊಡ್ಡ ಸಾಧನೆ ಎಂದು ಹೇಳುತ್ತಾ ಹೊರಟಿದರು. ಆದ್ರೆ ರಾಜಕೀಯ ಅರೋಪದಿಂದ ನೊಂದು ಸಿಎ ಸೈಟ್ ವಾಪಸ್ ನೀಡಿದ್ದಾರೆ. ರಾಹುಲ್ ಖರ್ಗೆ ಅವರಿಗೆ ಇಂತಹ ವಾತಾವರಣದಲ್ಲಿ ಕೆಲಸ ಮಾಡೋದಕ್ಕೆ ಆಗಲ್ಲ ಎಂದು ಮರಳಿಸಿದ್ದಾರೆ. ಇದರಲ್ಲಿ ಅಕ್ರಮ ಇದ್ದಿದ್ರೆ ಮೋದಿ, ಅಮಿತ್ ಶಾ ಬಿಡುತ್ತಿದ್ರಾ..? ವಿಜಯೇಂದ್ರ ಅವರು ಕಲಬುರಗಿ ತನಕ ಪಾದಯಾತ್ರೆ ಮಾಡುತ್ತಿದ್ದರು. ಇಲ್ಲಿ ಸಮಸ್ಯೆ ಅಂದ್ರೆ ನಾವು ಸಿಎ ಸೈಟ್ ಪಡೀಬಾರದು ಅನ್ನೋದು ಅಷ್ಟೆ. ಖರ್ಗೆ ಕುಟುಂಬದವರು ಸೈಟ್ ತೆಗೆದುಕೊಳ್ಳಬಾರದು ಅನ್ನೋದು ಅಷ್ಟೇ ಅವರ ಉದ್ದೇಶ. ಛಲವಾದಿ ನಾರಾಯಣಸ್ವಾಮಿ ಬಿರಿಯಾನಿ ಶಾಪ್ ಮಾಡೋದಕ್ಕೆ ಸಿಎ ಸೈಟ್ ಪಡೆದಿದ್ದರು ಅಲ್ವಾ..? ಎಂದು ಕುಟುಕಿದ್ದಾರೆ.

Tags: BJPCongress PartyMallikarjun Khargemallikarjun kharge angrymallikarjun kharge assetsmallikarjun kharge biographymallikarjun kharge buddhismmallikarjun kharge controversiesmallikarjun kharge educationmallikarjun kharge electionsmallikarjun kharge familymallikarjun kharge life storymallikarjun kharge newsmallikarjun kharge speechmallikarjuna karge biographymallikarjuna karge interviewmallikarjuna karge speechಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಂಕಾರ್ ಮ್ಯೂಸಿಕ್ ನಲ್ಲಿ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ”ಚಿತ್ರದ ಹಾಡುಗಳು

Next Post

ಚಡ್ಡಿಯಲ್ಲಿ ಕುಳಿತ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ತಂದೆಯ ಮರ್ಡರ್​..!

Related Posts

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?
ರಾಜಕೀಯ

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

by ಪ್ರತಿಧ್ವನಿ
February 1, 2026
0

ಜಮಾತೆ-ಇ-ಇಸ್ಲಾಮಿ (ಜೆಇಐ) ಶನಿವಾರ  ಅಮೀರ್ ಡಾ. ಶಫೀಕರ್ ರೆಹಮಾನ್ ಅವರ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಸಾರ್ವಜನಿಕ ಜೀವನ ಮತ್ತು ನಾಯಕತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು...

Read moreDetails
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post
ಚಡ್ಡಿಯಲ್ಲಿ ಕುಳಿತ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ತಂದೆಯ ಮರ್ಡರ್​..!

ಚಡ್ಡಿಯಲ್ಲಿ ಕುಳಿತ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ತಂದೆಯ ಮರ್ಡರ್​..!

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!