ಬೆಂಗಳೂರು : ಪರಪ್ಪನ ಅಗ್ರಹಾರದಿಂದ ಮಾಜಿ ಸಚಿವ ಬಿ.ನಾಗೇಂದ್ರ ( B.Nagendra) ಇಂದು ಬಿಡುಗಡೆ ಆಗಿದ್ದಾರೆ.ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಇಡಿ ಅಧಿಕಾರಿಗಳು ನನ್ನನ್ನು 3 ತಿಂಗಳು ಬಂಧಿಸಿ ಕಿರುಕುಳ ನೀಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿರಲಿಲ್ಲ ಎಂದು ಬಿಡುಗಡೆ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.
ವಾಲ್ಮೀಕಿ ನಿಗಮದ ಹಗರಣ ಸಂಬಂಧ ಜುಲೈ 12ರಂದು ಇಡಿ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2 ಲಕ್ಷ ಬಾಂಡ್ , ಇಬ್ಬರ ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಸೇರಿದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು.