• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಲಕಾವೇರಿಯಲ್ಲಿ ತೀರ್ಥರೂಪಿಣಿಯಾಗಿ ಆವೀರ್ಭವಿಸಿದ ಮಾತೆ ಕಾವೇರಿ

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬ್ರಹ್ಮಗಿರಿ ತಪ್ಪಲಿನಲ್ಲಿರುವ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಗುರುವಾರ ಬೆಳಗ್ಗೆ 7.41ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಮಾತೆ ಕಾವೇರಿಯು ತೀರ್ಥರೂಪಿಣಿಯಾಗಿ ಗೋಚರಿಸುವ ಮೂಲಕ ನೆರೆದಿದ್ದ ಭಕ್ತರನ್ನು ಪುಳಕಿತರನ್ನಾಗಿಸಿದಳು.

ADVERTISEMENT

ಸೂರ್ಯನು ತುಲಾ ರಾಶಿಯನ್ನು ಪ್ರವೇಶಿಸುವ ತುಲಾ ಸಂಕ್ರಮಣದಂದು ಬೆಳಗ್ಗೆ 7.40ಕ್ಕೆ ತೀರ್ಥೋದ್ಭವವಾಗಲಿರುವುದಾಗಿ ಹೇಳಲಾಗಿತ್ತಾದರೂ, ನಿಗದಿತ ಸಮಯಕ್ಕಿಂತ ಒಂದು ನಿಮಿಷ ತಡವಾಗಿ ತಾಯಿ ಕಾವೇರಿ ಆವೀರ್ಭವಿಸುವುದರೊಂದಿಗೆ ಭಕ್ತ ಜನರನ್ನು ಹರಸಿದಳು.

ಕ್ಷೇತ್ರದ ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅರ್ಚಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದ ಕೆಲವೇ ನಿಮಿಷಗಳಲ್ಲಿ ಅರ್ಚಕರ ಮಂತ್ರಘೋಷ ಹಾಗೂ ನೆರೆದಿದ್ದ ಸಹಸ್ರಾರು ಭಕ್ತ ಜನರ ‘ಜೈ ಜೈ ಮಾತಾ ಕಾವೇರಿ ಮಾತಾ, ಉಕ್ಕಿ ಬಾ ಉಕ್ಕಿ ಬಾ ಕಾವೇರಮ್ಮ ಉಕ್ಕಿ ಬಾ’ ಎಂಬ ಜಯಘೋಷಗಳ ನಡುವೆ ಬ್ರಹ್ಮಕುಂಡಿಕೆಯಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಗೋಚರಿಸುತ್ತಿದ್ದಂತೆ ಕ್ಷೇತ್ರದಲ್ಲಿ ಸೇರಿದ್ದ ಸಹಸ್ರಾರು ಭಕ್ತರು ಭಾವಪರವಶರಾದರು.

ತೀರ್ಥೋದ್ಭವವಾಗುತ್ತಿದಂತೆ ಅರ್ಚಕರು ಪವಿತ್ರ ತೀರ್ಥನ್ನು ಭಕ್ತಾದಿಗಳ ಮೇಲೆ ಪ್ರೋಕ್ಷಣೆ ಮಾಡಿದರು. ತೀರ್ಥ ಪಡೆದ ಭಕ್ತಜನರು ಪುಳಕಿತರಾದರು. ಕೊರೆಯುವ ಚಳಿಯ ನಡುವೆಯೂ ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಮಾತ್ರವಲ್ಲದೆ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

ಭಾಗಮಂಡಲದಿಂದ ತಲಕಾವೇರಿಗೆ ತೆರಳುವ ರಸ್ತೆಯ ಇಕ್ಕೆಲಗಳಲ್ಲೂ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು. ಅಂತೆಯೇ ಉಚಿತವಾಗಿ ಸರಕಾರಿ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ಕಾವೇರಿ ಕ್ಷೇತ್ರ ಪುಷ್ಪಾಲಂಕಾದಿಂದ ಕಂಗೊಳಿಸುತ್ತಿತ್ತು. ದೇವಾಲಯದ ಅನ್ನ ಪ್ರಸಾದ ಸಭಾಭವನದಲ್ಲಿ ಕೊಡಗು ಏಕೀಕರಣ ರಂಗದಿಂದ ಭಕ್ತರಿಗೆ ಉಪಾಹಾರ ವಿತರಿಸಲಾಯಿತು.

ಕಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ.ಎಸ್ ಪೊನ್ನಣ್ಣ, ಡಾ ಮಂಥರ್ ಗೌಡ, ಸುಜಾಕುಶಾಲಪ್ಪ, ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್, ಎಎಸ್ ಪಿ ಸುಂದರ್ ರಾಜ್, ಅಪರಜಿಲ್ಲಾಧಿಕಾರಿ ಐಶ್ವರ್ಯ ಸೇರಿದಂತೆ ಅನೇಕರು ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಂಡರು.

Tags: Brahmagiri foothillsKarnatakaMother KaveriTraditional worship to Kaveri Mat.
Previous Post

ಭಾರತ ಕೆನಡಾ ಸಂಭಂಧ ಹಾನಿಗೆ ಟ್ರೂಡೋ ಒಬ್ಬರೇ ಜವಾಬ್ದಾರಿ ;ವಿದೇಶಾಂಗ ಇಲಾಖೆ

Next Post

ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post

ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada