• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇವ ಜಯತೇ ನಾಪತ್ತೆ; ಹೆಚ್.ಡಿ.ಕುಮಾರಸ್ವಾಮಿ ಅಚ್ಚರಿ..

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

>ಬೆಂಗಳೂರು ನಗರವನ್ನು ಮುಳುಗಿಸಿದ ಕುಖ್ಯಾತಿ ಕಾಂಗ್ರೆಸ್ ಸರಕಾರದ್ದು ಎಂದು ಕಿಡಿ,
>ಜೆಡಿಎಸ್ ಸಂಸದರ ಬಗ್ಗೆ ಸರ್ಕಾರದ ತಾರತಮ್ಯ
>ನೈಸ್ ರಸ್ತೆಯ ಬಗ್ಗೆ ಸದನ ಸಮಿತಿ ವರದಿ ಏನ್ ಮಾಡಿದಿರಿ? ಎಂದು ಕಿಡಿ
>ಮೇಕೆದಾಟು ಅಂತ ಕಾಂಗ್ರೆಸ್ ನವರು ಡ್ಯಾನ್ಸ್ ಮಾಡಿದ್ದರು..

ADVERTISEMENT

ರಾಜ್ಯ ಕಾಂಗ್ರೆಸ್ ಸರ್ಕಾರ ಜಾಹೀರಾತುಗಳಿಂದ ಜಾಹೀರಾತುಗೊಸ್ಕರವೇ ನಡೆಯುತ್ತಿರುವ ಸರ್ಕಾರ. ಅಚ್ಚರಿ ಎಂದರೆ ಸರ್ಕಾರದ ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇಯ ಜಯತೇ ವಾಕ್ಯ ನಾಪತ್ತೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ಈ ಸರ್ಕಾರ ಕೆಲಸದಲ್ಲಿ ಅಸಮರ್ಥ, ಪ್ರಚಾರದಲ್ಲಿ ಮಾತ್ರ ಶರವೇಗದಲ್ಲಿ ಇದೆ ಎಂದು ಟೀಕಿಸಿದರು.

ಕರ್ನಾಟಕ ರಾಜ್ಯದಲ್ಲಿ ಈಗಿನ ಸರ್ಕಾರದ ವೈಫಲ್ಯಗಳೇ ಎದ್ದು ಕಾಣುತ್ತಿವೆ‌. ಈ ರಾಜ್ಯದಲ್ಲಿ ನಿಜಕ್ಕೂ ಸರ್ಕಾರ ಇದೆಯಾ ಎನ್ನುವ ಅನುಮಾನ ಕಾಡುತ್ತಿದೆ. ಪ್ರತಿದಿನವೂ ಸರ್ಕಾರದ ವೈಫಲ್ಯಗಳು ಎದ್ದು ಕಾಣುತ್ತಿವೆ. ಈ ಸರ್ಕಾರ ಜಾಹೀರಾತು ಮೇಲೆ ನಡೆಯುತ್ತಿದೆ. ಬೆಂಗಳೂರನಲ್ಲಿ ಮಳೆಯ ಅನಾಹುತದಿಂದ ಜನರು ಕಂಗೆಟ್ಟಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರು ಕೂಡ ನಷ್ಟ ಅನುಭವಿಸುತ್ತಿದ್ದಾರೆ‌. ಬೆಳೆಗಳು ನಷ್ಟವಾಗುತ್ತಿವೆ. ಹಿಂಗಾರು ಮಳೆಯಿಂದ ರೈತರು ಸಂಕಷ್ಟ ಸಿಲುಕಿದ್ದಾರೆ‌. ಆದರೆ, ಜನರ ನೆರವಿಗೆ ಸರಕಾರ ಧಾವಿಸುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಡೀ ಬೆಂಗಳೂರಿಗೆ ಬೆಂಗಳೂರು ನಗರವೇ ಪ್ರವಾಹದಲ್ಲಿ ಮುಳುಗಿತು. ಆದರೆ, ಮುಖ್ಯಮಂತ್ರಿಯಾಗಲಿ, ಯಾವೊಬ್ಬ ಸಚಿವರೂ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕಷ್ಟ ವಿಚಾರಿಸಲಿಲ್ಲ. ಸಿಎಂ ಮಳೆಯ ಬಗ್ಗೆ ಒಂದು ಹೇಳಿಕೆ‌ ಕೂಡ ಕೊಡಲಿಲ್ಲ. ಬೆಂಗಳೂರಿನಲ್ಲಿ ನೀರು ತುಂಬಿದ್ದರೆ ಅರ್ಧ ಗಂಟೆಯಲ್ಲಿ ಖಾಲಿ ಮಾಡೋದು ನಮಗೆ ಗೊತ್ತಿದೆ ಅಂತ ಡಿಸಿಎಂ ಹೇಳುತ್ತಾರೆ. ಜನರಿಗೆ ಊಟ ಇಲ್ಲ, ಮಲಗಲು ಜಾಗ ಇಲ್ಲ, ಮನೆಗಳಲ್ಲಿ ನೀರು ತುಂಬಿದೆ. ಹೊಟೇಲ್‌ನಲ್ಲಿ ಜೀವನ ಸಾಗಿಸುವ ಪರಿಸ್ಥಿತಿ ಇದೆ‌‌. ಈ ಸಮಸ್ಯೆ ಹಲವಾರು ವರ್ಷಗಳಿಂದ ಇದೆ. ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದವರು ಬೆಂಗಳೂರು ನಗರವನ್ನು ಮಳೆಯಲ್ಲಿ ಮುಳುಗಿಸಿದ್ದಾರೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಬೆಂಗಳೂರಿನ ಹೆಸರು ಹಾಳು ಮಾಡುವ ಕೆಲಸ ವಿಪಕ್ಷಗಳು ಮಾಡುತ್ತಿವೆ ಎಂದು ಡಿಸಿಎಂ ಹೇಳಿದ್ದಾರೆ. ಅವರು ಬೆಂಗಳೂರು ಉಸ್ತುವಾರಿ ಸಚಿವರಾಗಿ ಒಂದೂವರೆ ವರ್ಷ ಆಯಿತು. ಆದರೆ, ಒಳಚರಂಡಿ ವ್ಯವಸ್ಥೆ ಯಾಕೆ ಸರಿ ಮಾಡಲಿಲ್ಲ, ರಸ್ತೆಗಳನ್ನು ನದಿಗಳಂತೆ ದೃಶ್ಯ ಮಾಧ್ಯಮಗಳಲ್ಲಿ ಕಾಣುತ್ತಿದ್ದವು. ಇದಕ್ಕೆ ಪ್ರಕೃತಿ ಹೊಣೆಯೇ? ಮಳೆ ಬರುತ್ತದೆ ಎನ್ನುವುದು ಗೊತ್ತಿರಲಿಲ್ಲವೇ? ಮಾಧ್ಯಮಗಳೇ ಎಲ್ಲವನ್ನೂ ತೋರಿಸುತ್ತಿವೆ, ನಾವು ಹೇಳುವುದು ಏನೂ ಉಳಿದಿಲ್ಲ ಎಂದು ಕೇಂದ್ರ ಸಚಿವರು ಟಾಂಗ್ ನೀಡಿದರು.

ಇಷ್ಟೆಲ್ಲ ಅನಾಹುತ ಆಗಿದೆ. ಯಾವ ಕ್ರಮ ಕೈಗೊಳ್ಳುತ್ತೇವೆ ಅಂತ ಸ್ಪಷ್ಟವಾಗಿ ಹೇಳದ ಸರ್ಕಾರ ಪ್ರಚಾರದಲ್ಲಿ ಮಾತ್ರ ಸದಾ ಮುಂದೆ ಇರುತ್ತದೆ. ಜನರಿಗೆ ಮಾನಸಿಕ ಸ್ಥೈರ್ಯ ಹೇಳದೆ ಕೇವಲ ಬಡಾಯಿ ಕೊಚ್ಚಿಕೊಳ್ಳುವ ಇವರಿಗೆ ನಾಚಿಕೆ ಆಗಬೇಕು. 110 ಹಳ್ಳಿಗೆ ನೀರು ನೀಡ್ತಿದ್ದೇವೆ ಅಂತ ಬಡಾಯಿ ಕೊಚ್ಚಿಕೊಂಡಿದ್ದಾರೆ‌. ಈ ಕುಮಾರಸ್ವಾಮಿಯೇ ಅಷ್ಟೂ ಗ್ರಾಮಗಳನ್ನು ಬಿಬಿಎಂಪಿ ವ್ಯಾಪ್ತಿಗೆ ತಂದಿದ್ದು. ಇವರು ದಿನಕ್ಕೊಂದು ಶಂಕುಸ್ಥಾಪನೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕುಮಾರಸ್ವಾಮಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಅಂತ ಸಿಎಂ ಹೇಳಿದ್ದರು. ಕೇಂದ್ರ ಯೋಜನೆ‌ಯಾದ JNRUM ಸ್ಕೀಮ್ ಮೂಲಕ ಬೆಂಗಳೂರಿನ ಹೊರ ಹೊಲಯದ ಹಳ್ಳಿಗಳನ್ನು ನಗರಕ್ಕೆ ಸೇರಿಸುವ ಕೆಲಸ ಮಾಡಿದ್ದೇ ನಾನು. 7 ನಗರ ಸಭೆಗಳನ್ನು ಬಿಬಿಎಂಪಿಗೆ ಸೇರಿಸಿದ್ದು ನಾನು. 2007ರಲ್ಲಿಯೇ ₹9,000 ಕೋಟಿ ಅನುದಾನ ಬಿಡುಗಡೆ ಮಾಡಿದ್ದೆ ಎಂದು ಕೇಂದ್ರ ಸಚಿವರು ಹೇಳಿದರು.

ಡಿಸಿಎಂ ಹೊಸದಾಗಿ ಟೌನ್ ಶಿಫ್ ಮಾಡಲು ಹೊರಟಿದ್ದಾರೆ. ಯಾರಿಗಾಗಿ ಈ ಟೌನ್ ಶಿಪ್? ತನಗೆ ಬೇಕಾದ ರಿಯಲ್ ಎಸ್ಟೇಟ್ ಕುಳಗಳನ್ನು ಉದ್ಧಾರ ಮಾಡುವುದಕ್ಕೆ ಈ ಟೌನ್ ಶಿಪ್ ಮಾಡಲಾಗುತ್ತಿದೆಯಾ? ಅಭಿವೃದ್ಧಿ ಆದ ಮೇಲೆ 50:50 ಮಾಡುತ್ತಾರಂತೆ. ಮೈಸೂರಿನ ಮುದಾಡಲ್ಲಿ 50:50 ನೋಡಿದ್ದೇವೆ ಅಲ್ಲವೇ? ಬ್ರ್ಯಾಂಡ್ ಬೆಂಗಳೂರು ಮಾಡುತ್ತಾರಂತೆ ಇವರ ಯೋಗ್ಯತೆಗೆ.. ಐದು ಪೈಸೆ ಅನುದಾನ ಇಟ್ಟಿಲ್ಲ. ಬರುವ ಹಣವನ್ನೆಲ್ಲಾ ಕೊಳ್ಳೆ ಹೊಡೆಯುತ್ತಿದ್ದಾರೆ. ಇವರು ಅಭಿವೃದ್ಧಿ ಮಾಡ್ತಾರಂತೆ.. ನಾಚಿಕೆ ಆಗಬೇಕು ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ನೈಸ್ ರಸ್ತೆಯ ಬಗ್ಗೆ ಸದನ ಸಮಿತಿ ವರದಿ ಎನ್ ಮಾಡಿದಿರಿ?

ಡಿಸಿಎಂ ನೈಸ್ ರಸ್ತೆ ಬಗ್ಗೆ ಮಾತನಾಡಿದ್ದಾರೆ. ದೇವೇಗೌಡರು ಅಡ್ಡಿ ಮಾಡಿದ್ದರಿಂದ ರಸ್ತೆ ಅಗಲಿಲ್ಲವಂತೆ. ಯಾರು ಮಾಡಬೇಡಿ ಅಂತ ಹೇಳಿದರು ಇವರಿಗೆ? ಇಷ್ಟು ದಿನ ಯಾಕೆ ಸುಮ್ಮನೆ ಇದ್ದರು? ನೈಸ್ ಗೆ ವಶಪಡಿಸಿಕೊಂಡಿದ್ದ ರೈತರ ಭೂಮಿಯನ್ನು ಕಬಳಿಕೆ ಮಾಡಿ ಡೈನೋಟಿಫೈ ಮಾಡಿಕೊಂಡವರು ಯಾರು? ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ನೈಸ್ ರಸ್ತೆ ಬಗ್ಗೆ ಸದನ ಟಿ.ಬಿ.ಜಯಚಂದ್ರ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನು ಏನು ಮಾಡಿದಿರಿ? ಇಡೀ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಆ ಸಮಿತಿ ಶಿಫಾರಸು ಮಾಡಿತ್ತು? ಹೊಸಕೆರೆಹಳ್ಳಿ ಬಳಿ ಶೋಭಾ ಡೌಲಪರ್ಸ್ ಬಿಲ್ಡಿಂಗ್ ಕಾಮಗಾರಿ ನಡೆಯುತ್ತಿದೆ. ಅದರ ಪಾಲುದಾರರು ಯಾರಪ್ಪ? ನೈಸ್ ಹೆಸರಿನಲ್ಲಿ ರೈತರ ಜೀವನ ಹಾಳು ಮಾಡಿದವರು ನೀವು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಸಿಬಿಐ ತನಿಖೆಗೆ ಕೊಡಬೇಕು ಎಂದು ಜಯಚಂದ್ರ ಶಿಫಾರಸು ಮಾಡಿದ್ದರು. ಆದರೆ ಸಿಎಂ ಡಿಐಎಂಗೆ ಜಾಣಕಿವುಡು. ಧೈರ್ಯ ಮಾಡಿ ಜಯಚಂದ್ರ ವರದಿ ಕೊಟ್ಟರೆ ಅವರಿಗೆ ಜೀವ ಬೆದರಿಕೆ ಹಾಕಲಾಯಿತು. ಯಾರು ಜೀವ ಬೆದರಿಕೆ ಹಾಕಿದ್ದು? ಈ ಬಗ್ಗೆ ಪ್ರಕರಣ ದಾಖಲಾಗಿದೆ. ಅದು ಯಾವ ಹಂತದಲ್ಲಿದೆ ಎಂದು ಸಚಿವರು ಪ್ರಶ್ನಿಸಿದರು.

ಮೇಕೆದಾಟು ಅಂತ ಡ್ಯಾನ್ಸ್ ಮಾಡಿದ್ದರು!!

ಮೇಕೆದಾಟು ಯೋಜನೆಗೆ ಕುಮಾರಸ್ವಾಮಿ ಅವರು ಅನುಮತಿ ಕೊಡಸಬೇಕು ಎಂದು ಸಿಎಂ, ಡಿಸಿಎಂ, ಸಚಿವರು ಹೇಳುತ್ತಿದ್ದಾರೆ. ಪಾದಯಾತ್ರೆ ಮಾಡಿಕೊಂಡು ಡ್ಯಾನ್ಸ್ ಮಾಡಿದ್ರಲ್ಲಪ್ಪ? ಕೇಂದ್ರ ಸರಕಾರದ ಬಳಿ ಯಾವ ರೀತಿ ಅನುಮತಿ ಪಡೆಯಬೇಕು ಅಂತ ಪರಿಜ್ಞಾನ ಇಲ್ಲ ಇವರಿಗೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಉಪಯೋಗ ಆಗುತ್ತದೆ. ಅಲ್ಲಿ ಇವರ ಮಿತ್ರಪಕ್ಷ ಡಿಎಂಕೆ ಇದೆಯಲ್ಲ, ಅವರ ಮನವೊಲಿಕೆ ಮಾಡಲಿ. ಆಮೇಲೆ ಇವರು ನಮ್ಮ ಬಳಿಗೆ ಬರಲಿ. ಕೇಂದ್ರ ಸರ್ಕಾರದ ಬಳಿ ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಸಾಮಾನ್ಯ ಜ್ಞಾನ ಇಲ್ಲ ಎಂದು ಟಾಂಗ್ ನೀಡಿದರು ಕೇಂದ್ರ ಸಚಿವರು.

ಮಾಧ್ಯಮಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎನ್.ಜವರಾಯ ಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ಎನ್ ಡಿಎ ಕೂಟವೇ ನನ್ನ ಕುಟುಂಬ ಎಂದ HDK

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಮ್ಮ ಕುಟುಂಬದಿಂದ ಅಭ್ಯರ್ಥಿ ಹಾಕುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದರು.

ಯೋಗೇಶ್ವರ್ ತಾವೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ ಎನ್ನುವ ಮತ್ತೊಂದು ಪ್ರಶ್ನೆಗೆ, ಎಲ್ಲವನ್ನೂ ಮೈತ್ರಿ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಜೆಡಿಎಸ್ ಬಿಜೆಪಿ ನಾಯಕರು ಸೇರಿ ನಿರ್ಧಾರ ಮಾಡುತ್ತೇವೆ. ಬಿಜೆಪಿ – ಜೆಡಿಎಸ್‌ ಎಲ್ಲ ನನ್ನ ಕುಟುಂಬವೇ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕಷ್ಟೇ, ಇದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್ ಸಂಸದರ ಬಗ್ಗೆ ಸರ್ಕಾರದ ತಾರತಮ್ಯ!!

ರಾಜ್ಯದ ಜೆಡಿಎಸ್ ಸಂಸದರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತಾರತಮ್ಯ ಅನುಸರಿಸುತ್ತಿದೆ ಎಂದು ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಜೆಡಿಎಸ್‌‌ನ ಎಂಪಿಗಳಿಗೆ ಇಲ್ಲಿವರೆಗೂ ಹೊಸ ಕಾರು ಕೊಟ್ಟಿಲ್ಲ ಎಂದು ದೂರಿದರು.

ರಾಜ್ಯದ ಎಲ್ಲಾ ಸಂಸದರಿಗೂ ಹೊಸ ಕಾರು ಕೊಡಲಾಗಿದೆ. ಆದರೆ, ನನಗೆ ಹಾಗೂ ಕೋಲಾರ ಸಂಸದ ಮಲ್ಲೇಶ್ ಬಾಬು ಅವರಿಗೆ ಮಾತ್ರ ಹೊಸ ಕಾರು ಭಾಗ್ಯ ಇಲ್ಲ. ಈ ರೀತಿ ರಾಜಕೀಯ ನಾನು ಮಾಡಿಲ್ಲ, ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

Tags: BJPBrand BangalorecngressCongress PartyDK ShivakumarHD KumaraswamyJDSmekedatuNDANice RoadrainfallShoba DeveloperssiddaramaiahValmiki Jayanthiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚನ್ನಪಟ್ಟಣ ಟಿಕೆಟ್​ ಸಿಪಿವೈಗೆ ಫೈನಲ್ ಆಯ್ತ ಸರ್?

Next Post

ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ತೆರೆಗೆ ಬರಲು ಸಿದ್ದ .

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post

ಗುರುನಂದನ್ ಅಭಿನಯದ "ರಾಜು ಜೇಮ್ಸ್ ಬಾಂಡ್" ತೆರೆಗೆ ಬರಲು ಸಿದ್ದ .

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada