
ಮುಡಾ ಸೈಟ್ ಹಗರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು A2 ಆಗಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿಚಾರಣೆ ನಡೆಸಿದ್ದಾರೆ. ನಿನ್ನೆ ಸಂಜೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ನಾಳೆಯೇ ಖುದ್ದು ಹಾಜರಗುವಂತೆ ನೋಟಿಸ್‌ನಲ್ಲಿ ಸೂಚನೆ ಕೊಟ್ಟಿದ್ರಿಂದ ಇವತ್ತು ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದ ಪಾರ್ವತಿ ಸಿದ್ದರಾಮಯ್ಯ ಅವರನ್ನು, ಸತತ 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ವಿಚಾರನೆ ಬಳಿಕ ಮಧ್ಯಾಹ್ನ 1 ಗಂಟೆಗೆ ವಿಚಾರಣೆ ಮುಗಿಸಿ ತೆರಳಿದ್ದಾರೆ. ಸಿಎಂ ಪತ್ನಿ ಪಾರ್ವತಿ ಅವರ ಜೊತೆ ಸಹಾಯಕಿ ಒಬ್ಬರು ಆಗಮಿಸಿದ್ದರು. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೂ ಸಮರ್ಪಕ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

ದಾನ ಪತ್ರ ಆಸ್ತಿ ವರ್ಗಾವಣೆ ಕುರಿತು ಲೋಕಾಯುಕ್ತ ಎಸ್‌ಪಿ ಉದೇಶ್ ಪ್ರಶ್ನಿಸಿದ್ದಾರೆ. ಪೂರಕ ದಾಖಲೆ ಜೊತೆಗೆ ಹೇಳಿಕೆ ನೀಡಿ ತೆರಳಿದ್ದಾರೆ ಸಿಎಂ ಪತ್ನಿ ಪಾರ್ವತಿ. ಇನ್ನು A1 ಆಗಿರುವ ಸಿಎಂ ಸಿದ್ದರಾಮಯ್ಯ ವಿಚಾರಣೆ ನಡೆಸುವುದು ಬಾಕಿ ಇದೆ. ಆ ಬಳಿಕ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಲಿದ್ದಾರೆ.











