• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ:ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
October 26, 2024
in Top Story, ಇತರೆ / Others, ಕರ್ನಾಟಕ
0
ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ:ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ನಿರ್ಧಾರ
Share on WhatsAppShare on FacebookShare on Telegram

ಮಾನ್ಯ ಮುಖ್ಯಮಂತ್ರಿ ಅವರು 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯ ಮುಖ್ಯಾಂಶಗಳು ಹಾಗೂ ನೀಡಿರುವ ಸೂಚನೆಗಳು:

ADVERTISEMENT

ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು.ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು.

ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್‌ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ.ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು.

ಈ ಬಾರಿ ಜಲವಿದ್ಯುತ್‌ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಕಣಿವೆ ಹಾಗೂ ಕೃಷ್ಣಾ ಕಣಿವೆಯಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು.ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ.

ಅತಿವೃಷ್ಟಿಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ. ಎಸ್‌ಡಿಆರ್‌ಎಫ್‌ ನಿಯಮಾನುಸಾರ ದೊಡ್ಡ ಜಾನುವಾರುಗಳಿಗೆ ಒಟ್ಟು ರೂ. 6.84 ಲಕ್ಷ, ಸಣ್ಣ ಜಾನುವಾರುಗಳಿಗೆ ಒಟ್ಟು ರೂ. 2.8 ಲಕ್ಷ ಸೇರಿದಂತೆ ಒಟ್ಟು ರೂ. 9.6 ಲಕ್ಷ ಪರಿಹಾರ ಪಾವತಿಸಲಾಗಿದೆ.

ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ.

ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸುವಂತೆ ಸೂಚಿಸಿದರು.

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 551.25ಕೋಟಿ ಹಾಗೂ ತಹಶೀಲ್ದಾರ್‌ ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದ್ದು ಸಮರ್ಪಕವಾಗಿ ಬಳಸಲು ಸೂಚಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

Tags: CM Siddaramaiah‌Congress Partydemand for sowing seedsDistrict CollectorsEmployment Guarantee SchemeHuge damage due to rainImportant decision today under the leadership of CM
Previous Post

ಶ್ರೀಮತಿ ಚನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಶ್ರೀ ಧನಕರ್ ದಂಪತಿ

Next Post

ಪ್ರಿಯಕರನ ಜೊತೆ ಸೇರಿ ಪತಿಯ ಮರ್ಡರ್ – ನೀಲಗಿರಿ ತೋಪಿನಲ್ಲಿ ಹೆಣವಾದ ಗಂಡ !

Related Posts

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
0

https://youtu.be/DaADq5Dowbg

Read moreDetails

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
Next Post
ಪ್ರಿಯಕರನ ಜೊತೆ ಸೇರಿ ಪತಿಯ ಮರ್ಡರ್ – ನೀಲಗಿರಿ ತೋಪಿನಲ್ಲಿ ಹೆಣವಾದ ಗಂಡ !

ಪ್ರಿಯಕರನ ಜೊತೆ ಸೇರಿ ಪತಿಯ ಮರ್ಡರ್ - ನೀಲಗಿರಿ ತೋಪಿನಲ್ಲಿ ಹೆಣವಾದ ಗಂಡ !

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada