• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರ ಜಮೀನು ಸಂಪೂರ್ಣ ಸುರಕ್ಷಿತ ; ಬಿಜೆಪಿ ಬೇಕೆಂದೇ ರಾಜಕೀಯ ಮಾಡುತ್ತಿದೆ:ಸಚಿವರ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ.ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ.ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಿ, ಇದನ್ನು ವಿವಾದ ಮಾಡುತ್ತಿದೆ ಎಂದು ಸರಕಾರದ ಪರವಾಗಿ ಮೂವರು ಸಚಿವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ವಿಜಯಪುರ ಜಿಲ್ಲೆಯಲ್ಲಿ ಈ ಸಂಬಂಧ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣ ಬೈರೇಗೌಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಒಂದು ಕಾಲಕ್ಕೆ 14,201.32 ಎಕರೆ ವಕ್ಫ್ ಮಂಡಳಿಯದಾಗಿತ್ತು. ಈ ಪೈಕಿ ಭೂ ಸುಧಾರಣಾ ಕಾಯ್ದೆಯಡಿ 11,835.29 ಎಕರೆ ಮತ್ತು ಇನಾಂ ರದ್ದತಿ ಕಾಯ್ದೆಯಡಿ 1,459.26 ಎಕರೆಯನ್ನು ರೈತರಿಗೆ ಮಂಜೂರು ಮಾಡಲಾಗಿದೆ. 137 ಎಕರೆಯನ್ನು ವಿವಿಧ ಯೋಜನೆಗಳಿಗೆ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಮಿಕ್ಕ 773 ಎಕರೆ ಮಾತ್ರ ವಕ್ಫ್ ಸಂಸ್ಥೆಗಳ ಅಡಿಯಲ್ಲಿದೆ. ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ರೈತರಿಗೆ ವಕ್ಫ್ ಆಸ್ತಿಯೆಂದು ಯಾವುದೇ ನೊಟೀಸ್ ನೀಡಿಲ್ಲ.ಈ ಸಂಬಂಧ ಸಚಿವ ಎಂ ಬಿ ಪಾಟೀಲ ಅವರೂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.

1974ರ ಗೆಜೆಟ್ ಅಧಿಸೂಚನೆಯಲ್ಲಿ ವಿಜಯಪುರದ ಮಹಾಲಬಾಗಾಯತದ ಪಕ್ಕದಲ್ಲಿ ಬ್ರ್ಯಾಕೆಟ್ ಒಳಗೆ ವಕ್ಫ್ ಆಸ್ತಿಯಡಿಯಲ್ಲಿ *ಹೊನವಾಡ* ಎಂದು ತಪ್ಪಾಗಿ ನಮೂದಿಸಲಾಗಿತ್ತು.1977ರಲ್ಲಿ ವಕ್ಫ್ ಮಂಡಳಿಯೇ ತನ್ನ ತಪ್ಪನ್ನು ಸರಿಪಡಿಸಿದೆ. ಇದು ವಿವಾದವೇ ಅಲ್ಲ. ಬಿಜೆಪಿಯಲ್ಲಿ ವಿಜಯೇಂದ್ರ ಮತ್ತು ಬಸವರಾಜ ಪಾಟೀಲ ಯತ್ನಾಳ ನಡುವೆ ನಡೆಯುತ್ತಿರುವ ತಿಕ್ಕಾಟದಿಂದ ಇದು ರಾಜಕೀಯ ಬಣ್ಣ ಪಡೆದುಕೊಂಡಿದೆಎಂದು ಅವರು ಸ್ಪಷ್ಟಪಡಿಸಿದರು.

ಇಂಡಿ ತಾಲ್ಲೂಕಿನಲ್ಲಿ ಮಾತ್ರ ಅಲ್ಲಿಯ ತಹಸೀಲ್ದಾರರು ಯಾವುದೇ ನೋಟೀಸ್ ನೀಡದೆ, 41 ಆಸ್ತಿಗಳನ್ನು ಇಂದೀಕರಣ ಮಾಡಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರೈತರು 1974ಕ್ಕಿಂತ ಮೊದಲಿನ ದಾಖಲೆ ಕೊಟ್ಟರೆ ಅಂತಹ ಆಸ್ತಿಗಳನ್ನು ವಕ್ಫ್ ಅಧಿಸೂಚನೆಯಿಂದ ಕೈಬಿಡಲಾಗುವುದು. ಬಾಧಿತ ರೈತರು ಉಪವಿಭಾಗಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರೆ, ಅವರು ಪರಿಶೀಲಿಸಿ, ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷ್ಣ ಬೈರೇಗೌಡ ಹೇಳಿದರು.,

ಇದಕ್ಕೆ ಪೂರಕವಾಗಿ ಮಾತನಾಡಿದ ಸಚಿವ ಪಾಟೀಲ, `ಈ ಪ್ರಕರಣ ಕುರಿತು ವಿಚಾರಣೆ ನಡೆಸಲು ಜಿಲ್ಲಾಧಿಕಾರಿಗಳ ನೇತೃತ್ವದ ಟಾಸ್ಕ್ ಫೋರ್ಸ್ ರಚಿಸಲಾಗಿದೆ.ವಿಜಯಪುರ ಪ್ರಕರಣದಲ್ಲಿ 1964ರಿಂದ 1973ರವರೆಗಿನ ಕಂದಾಯ ಮತ್ತು ವಕ್ಫ್ ದಾಖಲೆಗಳನ್ನು ತೌಲನಿಕವಾಗಿ ಪರಿಶೀಲಿಸಲು ಆದೇಶ ನೀಡಲಾಗಿದೆ’ ಎಂದರು.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡು ಜನರ ನಡುವೆ ಗೊಂದಲ ಸೃಷ್ಟಿಸುವ ಕೆಲಸ ಬಿಜೆಪಿ ಮುಖಂಡರಿಂದ ಆಗುತ್ತಿದೆ. ಇದರಲ್ಲಿ ಧ್ರುವೀಕರಣದ ಸಂಚಿದೆ. ಸತ್ಯ ಶೋಧನೆಗೆ ಬಿಜೆಪಿ ಸಮಿತಿ ಬಂದರೆ ಕಾಫಿ- ಟೀ ಕೊಟ್ಟು ಪೂರ್ಣ ಮಾಹಿತಿ ನೀಡಲು ಜಿಲ್ಲಾಡಳಿತಕ್ಕೂ ಸೂಚಿಸಲಾಗಿದೆ‌ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಕ್ಫ್ ಸಚಿವ ಜಮೀರ್ ಅಹಮದ್ ಮಾತನಾಡಿ, `ನಮಗೆ ರೈತರ ಯಾವ ಜಮೀನೂ ಬೇಡ.ನಾನೂ ರೈತನ ಮಗನೇ.ವಕ್ಫ್ ಆಸ್ತಿಗೆ ಇಂದೀಕರಣ ಮಾಡಿಕೊಡಿ ಎಂದಷ್ಟೇ ಕೇಳಿರುವುದು.‌ ಇಷ್ಟಕ್ಕೂ ಹೊನವಾಡದಲ್ಲಿ 11 ಎಕರೆ ಮಾತ್ರ ವಕ್ಫ್ ಮಂಡಳಿಯದೇ ವಿನಾ 1,200 ಎಕರೆ ಅಲ್ಲ.ಅದೆಲ್ಲ‌ ರೈತರದೇ ಆಗಿದೆ ಎಂದೂ ಸ್ಪಷ್ಟಪಡಿಸಿದರು.

ವಿಜಯಪುರದಲ್ಲಿ 1,345 ಎಕರೆ ವಕ್ಫ್ ಆಸ್ತಿ ಒತ್ತುವರಿಯಾಗಿದ್ದು, ಇದು ಯಾರಿಗೂ ಅಧಿಕೃತವಾಗಿ ಹಂಚಿಕೆ ಆಗಿಲ್ಲ. ಇದರಲ್ಲಿಯೂ ಸುಮಾರು 26 ಎಕರೆ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ಕೋರ್ಟ್ ನಲ್ಲಿದೆ. ಇದು ಬಿಟ್ಟರೂ 1,319 ಎಕರೆ ವಕ್ಪ್ ಆಸ್ತಿ ಅಕ್ರಮವಾಗಿ ಬೇರೆ ವ್ಯಕ್ತಿ/ಸಂಸ್ಥೆಗಳ ವಶದಲ್ಲಿ ಇದ್ದು ಅದನ್ನು ಸರಿ‌ ಮಾಡಿಕೊಡಲು ಕೇಳಲಾಗಿದೆ. ಇದು ಬಿಟ್ಟರೆ ನಮಗೆ ಬೇರೆ ಯಾರ ಆಸ್ತಿಯೂ‌ ಬೇಡ ಎಂದು ಅವರು ಸ್ಪಷ್ಟಪಡಿಸಿದರು.

ವಿಜಯಪುರದಲ್ಲಿ ವಕ್ಫ್ ಅದಾಲತ್ ನಡೆಸಿದಾಗ ಅಲ್ಲಿನ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರಿಗೂ ಆಹ್ವಾನ ನೀಡಲಾಗಿತ್ತು. ಅಂದು ಸಭೆಗೆ ಬಾರದ ಅವರು ಈಗ ಬೇಕೆಂದೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಟೀಕಿಸಿದರು.

Tags: bengaluruHonwada village of TikotaMinister Krishna ByregowdaMinister M B PatilMinister Zameer Ahmed KhanVijayapur districtWaqf Adalatwaqf property
Previous Post

ಹಾಸನ ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವಸಂಪುಟ ನಿರ್ಣಯ:ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಶ್ರೀ ಅಲ್ಲಮಪ್ರಭು ಜಾತ್ರೆ ಸಂಭ್ರಮ ಜೋರು – ಒಂದು ತಿಂಗಳ ಕಾಲ ನಡೆಯಲಿದೆ ಜಾತ್ರಾ ಮಹೋತ್ಸವ !

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಶ್ರೀ ಅಲ್ಲಮಪ್ರಭು ಜಾತ್ರೆ ಸಂಭ್ರಮ ಜೋರು – ಒಂದು ತಿಂಗಳ ಕಾಲ ನಡೆಯಲಿದೆ ಜಾತ್ರಾ ಮಹೋತ್ಸವ !

ಶ್ರೀ ಅಲ್ಲಮಪ್ರಭು ಜಾತ್ರೆ ಸಂಭ್ರಮ ಜೋರು - ಒಂದು ತಿಂಗಳ ಕಾಲ ನಡೆಯಲಿದೆ ಜಾತ್ರಾ ಮಹೋತ್ಸವ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada