• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭವಿಷ್ಯಇಲ್ಲದ ಪಕ್ಷಗಳು ಬಿಜೆಪಿ, ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರುತ್ತಿದ್ದಾರೆ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 31, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರಾಮನಗರ”ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ADVERTISEMENT

ಚನ್ನಪಟ್ಟಣದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪಕ್ಷಕ್ಕೆ ಸೇರಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

“ಕುಮಾರಸ್ವಾಮಿ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ. ಬಿಜೆಪಿಯಲ್ಲಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಗೊತ್ತಿದೆ.

ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಗುಂಪು ಗುಂಪಾಗಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಎಲ್ಲೋ ಹಳ್ಳಿಗಳಲ್ಲಿ ಭಿನ್ನಾಭಿಪ್ರಾಯದಿಂದ ಒಂದಿಬ್ಬರು ಮಾತ್ರ ನಮ್ಮ ಪಕ್ಷ ಬಿಟ್ಟಿರಬಹುದು.ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನರಿಗೆ ಒಳ್ಳೆಯದಾಗಲು ಸಾಧ್ಯ ಎಂದು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ” ಎಂದು ತಿಳಿಸಿದರು.

ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ:

ಚನ್ನಪಟ್ಟಣದಲ್ಲಿ ಭಾವನಾತ್ಮಕವಾಗಿ ಮತ ಸೆಳೆಯಲಾಗುತ್ತಿದೆ ಎಂದು ಕೇಳಿದಾಗ, “ಭಾವನೆ ಮೇಲೆ ಮತ ಕೇಳುವುದಲ್ಲ. ಬದುಕಿನ ಮೇಲೆ ಮತ ಕೇಳಬೇಕು. ಅವರು ಭಾವನೆ ಮೇಲೆ ಮತ ಕೇಳಿದರೆ, ನಾವು ಬದುಕಿನ ಮೇಲೆ ಮತ ಕೇಳುತ್ತೇವೆ. ಜನರ ಬದುಕು, ಅವರ ಅಭಿವೃದ್ಧಿ ನಮಗೆ ಮುಖ್ಯ. ಕೆರೆಗೆ ನೀರು ತುಂಬಿಸುವುದು, ರಸ್ತೆ, ಮನೆಗಳು, ನಿವೇಶನ ನೀಡುವುದು ಮುಖ್ಯ” ಎಂದು ತಿಳಿಸಿದರು.

ಕನ್ನಡ ಬಾವುಟ ಹಾರಿಸಲು ಅವಕಾಶ ನೀಡುತ್ತಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಕನ್ನಡ ಪರ ಸಂಘಟನೆಗಳು ತಮ್ಮ ಕಚೇರಿಯಲ್ಲಿ ಕನ್ನಡ ಧ್ವಜ ಹಾರಿಸಲಿ. ಈ ಕಾರ್ಯಕ್ರಮದಲ್ಲಿ ರಾಜಕಾರಣಿಗಳು ಭಾಗವಹಿಸುವಂತಿಲ್ಲ. ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಯವರೂ ರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.

ರಾಜ್ಯ ಸರ್ಕಾರ ಹಗರಣ ಮುಚ್ಚಿಹಾಕಲು ವಕ್ಫ್ ವಿಚಾರ ಮುಂದೆ ಬಿಟ್ಟಿದೆ ಎಂಬ ವಿಚಾರವಾಗಿ ಕೇಳಿದಾಗ, “ವಕ್ಫ್ ಮೂಲಕ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಸಮುದಾಯಗಳ ನಡುವೆ ಕಲಹ ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ತಿಳಿಸಿದರು.

Tags: Congress PartyDCM D.K. Shivakumar.lies is KumaraswamyRamnagarThere is no future in BJP and JDS
Previous Post

ಗ್ಯಾಸ್ ಸಿಲಿಂಡರ್ ಸ್ಫೋಟ:ತಾಯಿ, ಇಬ್ಬರು ಮಕ್ಕಳು ಸಾವು

Next Post

ನಾಗ್ಪುರ ಪೋಲೀಸರಿಂದ ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಿದ್ದವನ ಪೂರ್ಣ ಮಾಹಿತಿ ಸಂಗ್ರಹ

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
Next Post

ನಾಗ್ಪುರ ಪೋಲೀಸರಿಂದ ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಿದ್ದವನ ಪೂರ್ಣ ಮಾಹಿತಿ ಸಂಗ್ರಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada