ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳ (Congress guarantee scheme) ಗದ್ದಲ ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ. ಡಿಕೆಶಿ (Dk shivakumar) ಹೇಳಿಕೆಯನ್ನು ಉಲ್ಲೇಖಿಸಿ ಪ್ರಧಾನಿ ಮೋದಿ (Pm modi) ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರು ಸಿದ್ದು, ಕಳೆದ ಎರಡು ಲೋಕಸಭಾ ಚುನಾವಣೆಗೆ ನೀಡಿದ್ದ ಪ್ರಣಾಳಿಕೆಯ ಜೊತೆ ಬಹಿರಂಗ ಚರ್ಚೆಗೆ ಬನ್ನಿ ಸವಾಲಾಕಿದ್ದಾರೆ.

ಕೇವಲ ಭರವಸೆಗಳನ್ನ ನೀಡುವುದು ಸುಲಭ, ಜನರ ಮುಂದೆ ಕಾಂಗ್ರೆಸ್ ಬೆತ್ತಲಾಗಿದೆ ಎಂಬ ಮೋದಿ ಟೀಕೆಗೆ ಕಾಂಗ್ರೆಸ್ (Congress) ನಾಯಕರು ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟ್‌ಗೆ ಟ್ವಿಟರ್ ನಲ್ಲೇ ಕೌಂಟರ್ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ
ಪ್ರಧಾನಿ ಮೋದಿಯವರೇ ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ಧಿ ಮಾದರಿಯನ್ನ ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ ಎಂದು ಕಿಡಿಕಾರಿದ್ದಾರೆ.











