ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ ಶರಣಾಗಿದ್ದಾರೆ. 37 ವರ್ಷದ ಗೀತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮಹಿಳೆ. ಕಾಟನ್ ಪೇಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ಸಂಜೆ ನೇಣಿಗೆ ಶರಣಾಗಿದ್ದಾರೆ.

17 ವರ್ಷಗಳ ಹಿಂದೆ ಮದುವೆ ಆಗಿದ್ದ ಗೀತಾ, ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಂಡ ಮುರಳಿ ಮೋಹನ್ ವಿರುದ್ದ ಗೀತಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಗಂಡನೇ ನೇಣು ಬಿಗಿದು ಪತ್ನಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಕೌಟುಂಬಿಕ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಜಗಳ ತೀವ್ರವಾದ ಬಳಿಕ ಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆ ಮಾಡುವ ಕೆಲಸ ನಡೀತಿದೆ.
