• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಣ್ಮನ ಸೆಳೆಯುತ್ತಿದೆ “ರುದ್ರ ಗರುಡ ಪುರಾಣ” ಚಿತ್ರದ “ಕಣ್ಮುಂದೆ ಬಂದು”ಡಿಸೆಂಬರ್ 27 ರಂದು ತೆರೆಗೆ

ಪ್ರತಿಧ್ವನಿ by ಪ್ರತಿಧ್ವನಿ
November 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರದ “ಕಣ್ಮುಂದೆ ಬಂದು” ಹಾಡು ಬಿಡುಗಡೆ ಹಾಗೂ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಹಿರಿಯ ನಟ ಅವಿನಾಶ್ ಚಿತ್ರದ ಬಿಡುಗಡೆ ದಿನಾಂಕವನ್ನು ತಿಳಿಸಿದರೆ, ಮತ್ತೊಬ್ಬ ಹಿರಿಯ ನಟ ಕೆ.ಎಸ್.ಶ್ರೀಧರ್ “ಕಣ್ಮುಂದೆ ಬಂದು” ಹಾಡನ್ನು ಅನಾವರಣಗೊಳಿಸಿದರು.

ADVERTISEMENT

ತಾವು ಕೂಡ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ತಿಳಿಸಿದ ನಟ ದ್ವಯರು ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.ನಂತರ ಚಿತ್ರತಂಡದವರು ಮಾತನಾಡಿದರು.

ಪುನೀತ್ ರಾಜಕುಮಾರ್ ಸ್ಮರಣೆಯೊಂದಿಗೆ ಮಾತು ಆರಂಭಿಸಿದ ನಟ ರಿಷಿ, ಒಂದು ಚಿತ್ರ ಉತ್ತಮವಾಗಿ‌ ಬರಲು ಇಬ್ಬರು ಪ್ರಮುಖರು. ಅದು ನಿರ್ಮಾಪಕ ಹಾಗೂ ನಿರ್ದೇಶಕ. ನಮ್ಮ ಚಿತ್ರದ ನಿರ್ದೇಶಕರಾದ ನಂದೀಶ್ ಉತ್ತಮವಾದ ಕಥೆ ಮಾಡಿಕೊಂಡಿದ್ದಾರೆ. ಅವರ ಕಥೆಯನ್ನು ತೆರೆಯ ಮೇಲೆ ಯಾವುದೇ ಕೊರತೆ ಇಲ್ಲದ ಹಾಗೆ ತರಲು ನಿರ್ಮಾಪಕ ಲೋಹಿತ್ ಸಹಕಾರ ನೀಡಿದ್ದಾರೆ. ಇದೊಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ನನ್ನದು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ. ಕಥೆಯ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ.

ಇಂದು ಬಿಡುಗಡೆಯಾಗಿರುವ “ಕಣ್ಮುಂದೆ ಬಂದು” ಹಾಡು ಎಲ್ಲರ ಹೃದಯಕ್ಕೆ ಹತ್ತಿರವಾಗಲಿದೆ. ಚಿತ್ರ ಡಿಸೆಂಬರ್ 27 ರಂದು ಬಿಡುಗಡೆಯಾಗಲಿದೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿ ಇದೆ ಎಂದರು. ನಾಯಕಿ ಪ್ರಿಯಾಂಕ ಕುಮಾರ್ ಸಹ ಚಿತ್ರಕ್ಕೆ ಎಲ್ಲರ ಬೆಂಬಲ ಕೋರಿದರು.

ಚಿತ್ರತಂಡದ ಎಲ್ಲರ ಸಹಕಾರದಿಂದ ನಮ್ಮ ಚಿತ್ರ ಬಿಡುಗಡೆ ಹಂತಕ್ಕೆ ಬಂದು ತಲುಪಿದೆ. ಡಿಸೆಂಬರ್ 27 ಚಿತ್ರ ಬಿಡುಗಡೆಯಾಗಲಿದೆ.ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ನಮ್ಮ ಚಿತ್ರ ಜನರಿಗೆ ತಲುಪಿದೆ.ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ನಂದೀಶ್.

ನಿರ್ಮಾಪಕ ಲೋಹಿತ್ ಅವರು ಸಹ ಚಿತ್ರತಂಡದವರಿಗೆ ಧನ್ಯವಾದ ತಿಳಿಸಿ, ಚಿತ್ರವನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿಕೊಂಡರು.

ಹೆಸರಾಂತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಬಳಿ ಕಾರ್ಯ ನಿರ್ವಹಿಸಿರುವ ಕೆ.ಪಿ(ಕೃಷ್ಣಪ್ರಸಾದ್) ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಇಂದು ಬಿಡುಗಡೆಯಾದ ಹಾಡು ಹಾಗೂ ಹಾಡಿದವರ ಬಗ್ಗೆ ಕೆ.ಪಿ ಮಾಹಿತಿ ನೀಡಿದರು. ದೇವಿ ಶ್ರೀ ಪ್ರಸಾದ್ ಅವರು ವಿಡಿಯೋ ಮೂಲಕ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ಚಿತ್ರದ ಛಾಯಾಗ್ರಾಹಕ ಸಂದೀಪ್ ಕುಮಾರ್, ಹಾಡು ಬರೆದಿರುವ ಮಂಜು ಮಾಂಡವ್ಯ, ಚಿತ್ರದಲ್ಲಿ ನಟಿಸಿರುವ ಅಶ್ವಿನಿ ಗೌಡ, ಶಿವರಾಜ್ ಕೆ.ಆರ್ ಪೇಟೆ, ರಾಮ್ ಪವನ್, ನಂದ, ವಂಶಿ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು “ರುದ್ರ ಗರುಡ ಪುರಾಣ”ದ ಬಗ್ಗೆ ಮಾತನಾಡಿದರು. ನಿರ್ಮಾಪಕಿ ಅಶ್ವಿನಿ ವಿಜಯ್ ಲೋಹಿತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Ashwini Gowda who acted in the filmfilm's cinematographer Sandeep KumarManju Mandavya who wrote the songNandaRam PawanRudra Garuda Purana" MovieShivraj KR Pete
Previous Post

ಔರಾದ್‌ನಲ್ಲಿ ಶಾಸಕ ಪ್ರಭು ಚವ್ಹಾಣ ನೃತ್ವದಲ್ಲಿ ಬೃಹತ್ ಪ್ರತಿಭಟನೆ.

Next Post

೨೪ ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

೨೪ ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada