• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಸಿಎಂ ವಿಚಾರಣೆಗೆ ಹಾಜರು.. ಮೈಸೂರಿನಲ್ಲಿ ಹೇಗಿದೆ ತಯಾರಿ..?

ಪ್ರತಿಧ್ವನಿ by ಪ್ರತಿಧ್ವನಿ
November 5, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ನಾಳೆ ಸಿಎಂ ವಿಚಾರಣೆಗೆ ಹಾಜರು.. ಮೈಸೂರಿನಲ್ಲಿ ಹೇಗಿದೆ ತಯಾರಿ..?
Share on WhatsAppShare on FacebookShare on Telegram

ಮುಡಾ ಸೈಟ್‌ ಹಗರಣದ ಬಗ್ಗೆ ಲೋಕಾಯುಕ್ತರು ವಿಚಾರಣೆಗೆ ನೋಟಿಸ್‌ ಕೊಟ್ಟಿದ್ದು, ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದಿದ್ದಾರೆ. ಶಿಗ್ಗಾವಿಯಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಬರುವಂತೆ ನೋಟಿಸ್‌ ಕೊಟ್ಟಿದ್ದಾರೆ, ವಿಚಾರಣೆಗೆ ಹಾಜರಾಗ್ತೇನೆ ಎಂದಿದ್ದಾರೆ.

ADVERTISEMENT

ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳುವ ಮುನ್ನ ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌ ಜೊತೆಗೆ ಸಭೆ ನಡೆಸಿದ್ದಾರೆ. ಸೋಮವಾರ ರಾತ್ರಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌ ನೋಟಿಸ್‌ ಬಗ್ಗೆ ಚರ್ಚೆ ನಡೆಸಿ ವಿಚಾರಣೆಗೆ ಹಾಜರಾಗುವುದು ಸೂಕ್ತ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ.

ಹಾವೇರಿಯ ಶಿಗ್ಗಾವಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನೇನು ತಪ್ಪು ಮಾಡಿಲ್ಲ. ನನ್ನ ಕುಟುಂಬವರೂ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ. 14 ಸೈಟ್‌ಗಾಗಿ ರಾಜಕಾರಣ ಮಾಡಬೇಕಾ..? ಎಂದು ಪ್ರಶ್ನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿನಾಕಾರಣ ನನ್ನ ತೇಜೋವಧೆ ಮಾಡಲಾಗ್ತಿದೆ. ಬಿಜೆಪಿಯಿಂದ ಹಸಿ ಸುಳ್ಳು ಹೇಳುವ ಕೆಲಸ ನಡೀತಿದೆ ಎಂದಿದ್ದಾರೆ. ಸುಳ್ಳು ಹೇಳೋಕೆ ಅಂತಾ ಗೊಬೆಲ್ಸ್‌ನನ್ನ ಹಿಟ್ಲರ್ ಮಂತ್ರಿ ಮಾಡಿಕೊಂಡಿದ್ದ. ಅದೇ ರೀತಿ ಬಿಜೆಪಿಯಲ್ಲಿ ಸುಳ್ಳು ಹೇಳೋಕೆ ಕೆಲವರನ್ನ ನೇಮಕ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಕಾನೂನು ಸಚಿವ ಎಚ್‌.ಕೆ ಪಾಟೀಲ ಪ್ರತಿಕ್ರಿಯೆ ನೀಡಿ, ನಾಳೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ, ವಿಚಾರಣೆಗೆ ಹೋಗ್ತಾರೆ ಎಂದಿದ್ದಾರೆ. ಇನ್ನು ಇದೇ ವಿಚಾರವಾಗಿ ಸತೀಶ್‌ ಜಾರಕಿಹೊಳಿ ಮಾತನಾಡಿ, ನೋಟಿಸ್ ಕೊಟ್ಟ ಮೇಲೆ ವಿಚಾರಣೆಗೆ ಹೋಗಲೇಬೇಕು. ಅದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಲೋಕಾಯುಕ್ತ ಎಲ್ಲರಗಿಂತ ದೊಡ್ಡದು. ನೋಟಿಸ್ ಕೊಟ್ಟ ಬಳಿಕ ಯಾರೇ ಆಗಲಿ ಹೋಗಲೇಬೇಕು ಎಂದಿದ್ದಾರೆ.

ಮೈಸೂರಿಗೆ ನಾಳೆ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಡಿಸಿಪಿ‌ ಮುತ್ತುರಾಜ್ ಹಾಗು ಜಾಹ್ನವಿ ಸೇರಿ ಎಸಿಪಿಗಳಿಂದ ಪರಿಶೀಲನೆ ಕಾರ್ಯ ಮಾಡಲಾಗಿದೆ. ದೇವರಾಜ ಪೊಲೀಸ್ ಠಾಣೆ ಅನತಿ ದೂರದಲ್ಲಿರುವ ಮೈಸೂರಿನ ಶೇಷಾದ್ರಿ ಅಯ್ಯರ್ ರಸ್ತೆಯ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದಾರೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ಬಂದೋಬಸ್ತ್ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ.

Tags: cm siddaramaiah in muda scamcm siddaramaiah wife in muda scamkarnataka muda scamMUDAMuda Casemuda land & tribal body scamsmuda land scamMuda Scammuda scam casemuda scam cm siddaramaiahmuda scam explainedmuda scam in karnatakamuda scam livemuda scam mysoremuda scam newsmuda site scammulti crore scam in mudasiddaramaiah muda casesiddaramaiah muda scamsiddaramaiah vs by vijayendra over muda scamwhat is muda scam
Previous Post

ಸಿಎಂ ಸಂಕಷ್ಟ ದೂರ ಆಗಲಿ ಎಂದು ಅಭಿಮಾನಿಗಳ ಪೂಜೆ..

Next Post

‘ಮೇಘ’ ಭಾವನೆ-ಚಾಲಿತ ಕೌಟುಂಬಿಕ ಮನರಂಜನೆಯ ಹೊಸ ಅಲೆಯೊಂದಿಗೆ ಕನ್ನಡ ಸಿನಿಮಾವನ್ನು ಮರುವ್ಯಾಖ್ಯಾನಿಸಲು ಸಿದ್ಧವಾಗಿರುವ ಸಿನಿಮಾ .

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post

‘ಮೇಘ’ ಭಾವನೆ-ಚಾಲಿತ ಕೌಟುಂಬಿಕ ಮನರಂಜನೆಯ ಹೊಸ ಅಲೆಯೊಂದಿಗೆ ಕನ್ನಡ ಸಿನಿಮಾವನ್ನು ಮರುವ್ಯಾಖ್ಯಾನಿಸಲು ಸಿದ್ಧವಾಗಿರುವ ಸಿನಿಮಾ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada